ರಾಜ್ಯದಲ್ಲಿನ ಮಳೆ ಮಾಪನ ಯಂತ್ರಗಳ ನಿರ್ವಹಣೆಯಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಲು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರನ್ನು ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಿದ ಸಂಸದರು, ಮಳೆ ಮಾಪನ ಯಂತ್ರಗಳ ಸಮರ್ಪಕ ಕಾರ್ಯನಿರ್ವಹಣೆ, ಹವಾಮಾನ ಆಧಾರಿತ ಬೆಳೆ ವಿಮೆಯಂತಹ ಯೋಜನೆಗಳ ಯಶಸ್ಸಿಗೆ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪವು ರಾಜ್ಯದಲ್ಲಿನ ಮಳೆ ಮಾಪನ ವ್ಯವಸ್ಥೆಯನ್ನು ಸುಧಾರಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದ ಅಡಿಕೆ ಬೆಳೆಗಾರರಿಗೆ ದೊರೆಯಬೇಕಾಗಿದ್ದ ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಒದಗಿಸಿದ್ದಕ್ಕಾಗಿ ಅಡಿಕೆ ಬೆಳೆಗಾರರ ಪರವಾಗಿ ಧನ್ಯವಾದಗಳನ್ನು ಸಲ್ಲಿಸಿದರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…