ಮೆಕ್ಕೆಜೋಳ ಸಮಾವೇಶ | ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಹಿತರಕ್ಷಣೆ

July 7, 2025
9:17 PM

ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳ ಮತ್ತು ಅಭಿವೃದ್ದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಹಿತರಕ್ಷಣೆ ಮಾಡಲಾಗಿದೆ ಎಂದು  ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌವ್ಹಾಣ್ ಹೇಳಿದ್ದಾರೆ.

ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಒಕ್ಕೂಟ- ಫಿಕಿ, ದೆಹಲಿಯಲ್ಲಿ ಆಯೋಜಿಸಿದ್ದ 11ನೇ ಮೆಕ್ಕೆಜೋಳ ಸಮಾವೇಶ ಉದ್ದೇಶಿಸಿ ಅವರು, 2026ರ ವೇಳೆಗೆ ಪೆಟ್ರೋಲ್‌ ಮತ್ತು ಡೀಸೆಲ್‌ನಲ್ಲಿ ಕನಿಷ್ಠ ಶೇಕಡ 20ರಷ್ಟು ಎಥೆನಾಲ್‌ ಮಿಶ್ರಣ ಮಾಡುವ ಗುರಿಯಿಂದಾಗಿ ರೈತರ ಆದಾಯ ಹೆಚ್ಚಳವಾಗುತ್ತಿದೆ ಎಂದರು. 1990ರ ದಶಕದಲ್ಲಿ ದೇಶದಲ್ಲಿ ಕೇವಲ 10 ದಶಲಕ್ಷ ಟನ್‌ ಮೆಕ್ಕೆಜೋಳ ಉತ್ಪಾದನೆಯಾಗುತ್ತಿದ್ದು, ಇದೀಗ ಈ ಪ್ರಮಾಣ 42 ದಶಲಕ್ಷ ಟನ್‌ಗೆ ಏರಿಕೆಯಾಗಿದೆ. ಪ್ರತಿ ಹೆಕ್ಟೇರ್‌ಗೆ ಸರಾಸರಿ 3.7 ಟನ್‌ ಉತ್ಪಾದನೆಯಾಗುತ್ತಿದೆ. 2047ರ ವೇಳೆಗೆ  ಒಟ್ಟು 86 ದಶಲಕ್ಷ ಟನ್‌ ಉತ್ಪಾದನೆಯಾಗುವ ಗುರಿಯಿದೆ ಎಂದರು. ಭಾರತೀಯ ಕೃಷಿ ಸಂಶೋಧನಾ ಮಂಡಳಿ -ICAR, ಮೆಕ್ಕೆಜೋಳದ ವಿವಿಧ ತಳಿಗಳನ್ನು ಅಭಿವೃದ್ಧಿಪಡಿಸಿದ್ದು, ಗುಣಮಟ್ಟದ ಇಳುವರಿ ಹೆಚ್ಚಳಕ್ಕೆ ನೆರವಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror