Advertisement
MIRROR FOCUS

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

Share

ದಾವಣಗೆರೆ ಜಿಲ್ಲೆಯ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ ಎಂ ಗಂಗಾಧರ ಸ್ವಾಮಿ ತಿಳಿಸಿದ್ದಾರೆ.

ಈ ಯೋಜನೆಯಡಿ ರೈತರಿಗೆ ನೇರ ಲಾಭವಾಗಿದ್ದು. 3,412 ರೈತರು ನೋಂದಣಿ ಮಾಡಿಕೊಂಡಿದ್ದು,  87,258 ಕ್ವಿಂಟಲ್ ಮೆಕ್ಕೆಜೋಳ ಮಾರಾಟ ಮಾಡಿದ್ದಾರೆ. ಪಿ.ಡಿ.ಪಿ.ಎಸ್ (Price Deficiency Payment Scheme) ಯೋಜನೆಯ ಲಾಭ ಪಡೆದಿದ್ದಾರೆ. ಜಿಲ್ಲೆಯ ವಿವಿಧ ಮಾರುಕಟ್ಟೆಗಳಲ್ಲಿ ಮಾರಾಟ ನಡೆಸಿ ರೈತರು ಯೋಜನೆಯಡಿ ಬೆಲೆ ರಕ್ಷಣೆಯ ಲಾಭ ಗಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಕುಕ್ಕುಟ ಆಹಾರ ಘಟಕಗಳಿಗೆ ಸರಬರಾಜು ಮಾಡಲಾಗಿದ್ದು, ಜಿಲ್ಲೆಯ ವಿವಿಧ ಕುಕ್ಕುಟ ಆಹಾರ ಉತ್ಪಾದಕ ಘಟಕಗಳಿಗೆ 91 ರೈತರಿಂದ 2,712 ಕ್ವಿಂಟಲ್ ಮೆಕ್ಕೆಜೋಳ ಮಾರಾಟವಾಗಿದ್ದು  ಪ್ರತಿ ಕ್ವಿಂಟಲ್‌ಗೆ ₹2,400 ದರದಲ್ಲಿ ಖರೀದಿ ಮಾಡಲಾಗಿದೆ. ಇದರಿಂದ ರೈತರಿಗೆ ಉತ್ತಮ ಮಾರುಕಟ್ಟೆ ಸಂಪರ್ಕ ಲಭಿಸಿದೆ ಎಂದು ವಿವರಿಸಿದರು. ಕೆಎಂಎಫ್ ಕೂಡಾ ಖರೀದಿ ಮಾಡಿದ್ದು, 917 ರೈತರಿಂದ 21,706 ಕ್ವಿಂಟಲ್ ಮೆಕ್ಕೆಜೋಳ ಖರೀದಿಯಾಗಿದ್ದುಹಾಲು ಉತ್ಪಾದನಾ ವಲಯಕ್ಕೆ ಆಹಾರ ಪೂರೈಕೆಯಾಗಿ ಮೆಕ್ಕೆಜೋಳದ ಬೇಡಿಕೆ ಹೆಚ್ಚುತ್ತಿರುವುದು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯ ಪರಿಣಾಮ :  ಮಾರುಕಟ್ಟೆ ಮಧ್ಯಪ್ರವೇಶ ಮತ್ತು ಪಿಡಿಪಿಎಸ್ ಯೋಜನೆಗಳ ಮೂಲಕ ರೈತರಿಗೆ ಬೆಲೆ ಭದ್ರತೆ ದೊರಕುತ್ತಿದ್ದು, ಮುಂಗಾರು ಹಂಗಾಮಿನಲ್ಲಿ ಬೆಳೆ ಬೆಲೆ ಕುಸಿತದಿಂದ ರಕ್ಷಣೆ ಸಿಗುತ್ತಿದೆ.  ಜಿಲ್ಲಾಧಿಕಾರಿಗಳ ಪ್ರಕಾರ, ಮುಂದಿನ ದಿನಗಳಲ್ಲಿ ಇನ್ನಷ್ಟು ರೈತರು ನೋಂದಣಿ ಮಾಡಿಕೊಂಡು ಯೋಜನೆಯ ಲಾಭ ಪಡೆಯುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

11 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

18 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

1 day ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 day ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 day ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 day ago