ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ

April 14, 2025
6:16 AM

ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ದೇಶದ ಆರ್ಥಿಕತೆಯಲ್ಲಿ ಇವುಗಳ ಕೊಡುಗೆ ಅತಿ ದೊಡ್ಡದು ಎಂದು ಸಹಕಾರ ಖಾತೆ ಸಚಿವ ಅಮಿತ್ ಶಾ ಹೇಳಿದರು.

ಅವರು ಅಂತಾರಾಷ್ಟ್ರೀಯ  ಸಹಕಾರಿ ವರ್ಷದ ಅಂಗವಾಗಿ  ಮಧ್ಯಪ್ರದೇಶ ಭೋಪಾಲ್‌ನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸಹಕಾರಿ ಸಮ್ಮೇಳನಕ್ಕೆ   ಚಾಲನೆ ನೀಡಿ ಮಾತನಾಡಿದರು. ಸಹಕಾರ ಮಂತ್ರಾಲಯದ ಅಡಿ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಬಜೆಟ್‌ನಲ್ಲಿ ಕೂಡ ಅತಿ ದೊಡ್ಡ ಮೊತ್ತ ಮೀಸಲು ಇರಿಸಲಾಗಿದೆ ಎಂದು ಹೇಳಿದರು. ಪರಸ್ಪರ ಸಹಕಾರ, ನಂಬಿಕೆಯ ಅಮೂಲ್ಯ ತತ್ವಗಳ ಬುನಾದಿಯ ಮೇಲೆ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿವೆ.  ಪ್ರಾಥಮಿಕ ಕೃಷಿ ಮತ್ತು ಸಹಕಾರಿ ಸಂಘಗಳನ್ನು ಗಣಕೀಕರಣ ಮಾಡಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸುವ ಮೂಲಕ ಈ ಕ್ಷೇತ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಾಗುತ್ತಿದೆ. ಸಹಕಾರಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಮೂಲಕ ಈ ಕ್ಷೇತ್ರಕ್ಕೆ ಇನ್ನಷ್ಟು ಉತ್ತೇಜನ ನೀಡಲಾಗುತ್ತಿದೆ ಎಂದರು.  ಹೈನುಗಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ. ಹೈನುಗಾರಿಕೆಯಲ್ಲಿಯೂ ಉದ್ಯೋಗ ಸೃಷ್ಟಿಯಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳತ್ತಿದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ
April 13, 2026
11:30 PM
by: ಮಿರರ್‌ ಡೆಸ್ಕ್
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ
April 13, 2026
10:45 PM
by: ಮಿರರ್‌ ಡೆಸ್ಕ್
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ
April 13, 2026
10:28 PM
by: ಮಿರರ್‌ ಡೆಸ್ಕ್
ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ
April 13, 2026
10:21 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror