ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ದೇಶದ ಆರ್ಥಿಕತೆಯಲ್ಲಿ ಇವುಗಳ ಕೊಡುಗೆ ಅತಿ ದೊಡ್ಡದು ಎಂದು ಸಹಕಾರ ಖಾತೆ ಸಚಿವ ಅಮಿತ್ ಶಾ ಹೇಳಿದರು.
ಅವರು ಅಂತಾರಾಷ್ಟ್ರೀಯ ಸಹಕಾರಿ ವರ್ಷದ ಅಂಗವಾಗಿ ಮಧ್ಯಪ್ರದೇಶ ಭೋಪಾಲ್‌ನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸಹಕಾರಿ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು. ಸಹಕಾರ ಮಂತ್ರಾಲಯದ ಅಡಿ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಬಜೆಟ್‌ನಲ್ಲಿ ಕೂಡ ಅತಿ ದೊಡ್ಡ ಮೊತ್ತ ಮೀಸಲು ಇರಿಸಲಾಗಿದೆ ಎಂದು ಹೇಳಿದರು. ಪರಸ್ಪರ ಸಹಕಾರ, ನಂಬಿಕೆಯ ಅಮೂಲ್ಯ ತತ್ವಗಳ ಬುನಾದಿಯ ಮೇಲೆ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿವೆ. ಪ್ರಾಥಮಿಕ ಕೃಷಿ ಮತ್ತು ಸಹಕಾರಿ ಸಂಘಗಳನ್ನು ಗಣಕೀಕರಣ ಮಾಡಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸುವ ಮೂಲಕ ಈ ಕ್ಷೇತ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಾಗುತ್ತಿದೆ. ಸಹಕಾರಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಮೂಲಕ ಈ ಕ್ಷೇತ್ರಕ್ಕೆ ಇನ್ನಷ್ಟು ಉತ್ತೇಜನ ನೀಡಲಾಗುತ್ತಿದೆ ಎಂದರು. ಹೈನುಗಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ. ಹೈನುಗಾರಿಕೆಯಲ್ಲಿಯೂ ಉದ್ಯೋಗ ಸೃಷ್ಟಿಯಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳತ್ತಿದೆ ಎಂದು ತಿಳಿಸಿದರು.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ…
ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490