Advertisement
MIRROR FOCUS

ಯಾಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪಣ | ಅರಣ್ಯ ಇಲಾಖೆಯಿಂದ ಹಲವು ಕ್ರಮ

Share

ಪ್ರವಾಸಿತಾಣಗಳು ಸ್ವಚ್ಛತೆಯಿಂದ ಕೂಡಿದ್ದರೆ ನೋಡಲು ತುಂಬಾ ಸೊಗಸಾಗಿದ್ದು,  ಪ್ರವಾಸಿಗರನ್ನು ಕೈ ಬೀಸಿ ಕರೆಯುವಂತಾಗುತ್ತದೆ. ಈ ಪ್ರದೇಶಗಳಲ್ಲಿ ವಾಸಿಸುವ ಪ್ರಾಣಿ, ಪಕ್ಷಿಗಳಿಗೂ ಯಾವುದೇ ತೊಂದರೆಯಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣವಾದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣವನ್ನು ಪ್ಲಾಸ್ಟಿಕ್ ತ್ಯಾಜ್ಯಮುಕ್ತವಾಗಿಸಲು ಅರಣ್ಯ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ.

ಪಶ್ಚಿಮಘಟ್ಟಗಳ ಸದಾ ಹರಿದ್ವರ್ಣ ಕಾಡುಗಳ ನಡುವೆ ಬೆಳೆದು ನಿಂತಿರುವ ಶಿಖರಗಳು ಮತ್ತು ಅವುಗಳಿಗೆ ಹೊಂದಿಕೊಂಡಿರುವ ನೈಸರ್ಗಿಕ ಗುಹೆಗಳು, ಈ ಸ್ಥಳದ ಬಗ್ಗೆ ಇರುವ ರೋಮಾಂಚಕ ಪೌರಾಣಿಕ ಕಥೆಗಳು ಜನರ ಆಕರ್ಷಣೆಗೆ ಕಾರಣವಾಗಿವೆ. ಇಲ್ಲಿಗೆ ಪ್ರತಿ ನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಪ್ಲಾಸ್ಟಿಕ್ ಬಾಟಲ್ ಗಳು, ಪ್ಲಾಸ್ಟಿಕ್ ಪೇಪರ್ ನಲ್ಲಿ ಕಟ್ಟಿದ ತಿಂಡಿ ತಿನಿಸುಗಳ ಪೊಟ್ಟಣದ ಪೇಪರ್ ಗಳನ್ನು ಎಲ್ಲೆಂದರಲ್ಲಿ ಬಿಸಾಡಿ ಹೋಗುವುದರಿಂದ ಪರಿಸರಕ್ಕೆ ಹಾನಿಯಾಗುತ್ತದೆ. ಹಾಗಾಗಿ ಅರಣ್ಯ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಯಾಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪಣ ತೊಟ್ಟಿದೆ. ಪ್ರವಾಸಿಗರ ಅನುಕೂಲಕ್ಕಾಗಿ ಅಲ್ಲಲ್ಲಿ ಶೌಚಾಲಯಗಳು, ಕಸದ ಬುಟ್ಟಿಗಳನ್ನು ಹಾಗೂ ಸೂಚನಾ ಫಲಕಗಳನ್ನು ಹಾಕಲಾಗಿದೆ.

ಇಲ್ಲಿನ ಅರಣ್ಯ ಪ್ರದೇಶದಲ್ಲಿರುವ ಹಲವಾರು ಪ್ರವಾಸಿ ತಾಣ ಹಾಗೂ ಪ್ರೇಕ್ಷಣೀಯ ಸ್ಥಳಗಳನ್ನು ಕಸಮುಕ್ತ ಹಾಗೂ ಪ್ಲಾಸ್ಟಿಕ್ ಮುಕ್ತ ಪ್ರದೇಶಗಳನ್ನಾಗಿ ಮಾಡಲು ಹಲವು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಇಲಾಖೆ ಜೊತೆಗೆ ಗ್ರಾಮ ಅರಣ್ಯ ಸಮಿತಿಯವರು ಮತ್ತು ಯುವಕ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಈ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಅರಣ್ಯವನ್ನು ಕಸಮಕ್ತ ಮತ್ತು ಪ್ಲಾಸ್ಟಿಕ್ ಮುಕ್ತವಾಗಿಸುವುದು ಹಾಗೂ ವನ್ಯಜೀವಿಗಳಿಗೆ ಉತ್ತಮ ಪರಿಸರವನ್ನು ಕಲ್ಪಿಸಿಕೊಡುವುದು ಮುಖ್ಯ ಉದ್ದೇಶವಾಗಿದೆ .ಪ್ರವಾಸಿ ತಾಣಗಳಲ್ಲಿ  ಸ್ವಚ್ಛತೆ ಕಾಪಾಡುವುದು  ಸ್ಥಳೀಯ  ಆಡಳಿತಕ್ಕೆ  ಎಷ್ಟು ಮುಖ್ಯವೋ ಅಲ್ಲಿಗೆ ಭೇಟಿ ನೀಡುವ  ಪ್ರವಾಸಿಗರ ಜವಾಬ್ದಾರಿಯೂ ಅಷ್ಟೇ ಮುಖ್ಯವಾಗಿರುತ್ತದೆ ಎಂದು  ಹೊನ್ನಾವರ ಉಪ ಅರಣ್ಯ ಸಂರಕ್ಷಾಣಾಧಿಕಾರಿ ಯೋಗೇಶ್ ಸಿ.ಕೆ ಹೇಳುತ್ತಾರೆ.

ಹೀಗಿದ್ದರೂ ಪ್ಲಾಸ್ಟಿಕ್ ಬಾಟಲಿಗಳನ್ನಾಗಲಿ ಅಥವಾ ಪ್ಲಾಸ್ಟಿಕ್ ಪೊಟ್ಟಣಗಳನ್ನಾಗಲಿ ಯಾರಾದರೂ ಎಸೆದಿದ್ದರೆ ಗಸ್ತುತಿರುಗುವ ಗ್ರಾಮ ಅರಣ್ಯ ಸಮಿತಿಯವರು ಅದನ್ನು ತೆಗೆದು ಕಸದ ತೊಟ್ಟಿಗೆ ಹಾಕುತ್ತಾರೆ. ಈ ನಿಟ್ಟಿನಲ್ಲಿ ಪ್ರವಾಸಿತಾಣದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

“ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ.. 

ಯಾಣದಲ್ಲಿ ಪ್ಲಾಸ್ಟಿಕ್ ಸ್ವಚ್ಚತೆಗೆ ಕೆಲಸ ಮಾಡುತ್ತಿದ್ದು, ಇಲ್ಲಿಗೆ ಬರುವ ಪ್ರವಾಸಿಗರಿಗೆ ಪ್ಲಾಸ್ಟಿಕ್ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಗ್ರಾಮಸ್ಥರೂ ಸಹ ಸಹಕಾರ ನೀಡುತ್ತಿದ್ದಾರೆ ಎಂದು ಗ್ರಾಮ ಅರಣ್ಯ ಸಮಿತಿಯ ಶೈಲಾ ಪಟಗಾರ ಹೇಳುತ್ತಾರೆ.

ಯಾಣ ಪ್ರವಾಸಿತಾಣವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಅರಣ್ಯ ಇಲಾಖೆ ಮಹತ್ವಪೂರ್ಣ ಹೆಜ್ಜೆ ಇಟ್ಟಿರುವುದು ಪ್ರಶಂಸನೀಯ ಎಂದು ಪ್ರವಾಸಿಗ  ಡಾ. ವೆಂಕಟೇಶ್   ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

4 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

10 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

14 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

18 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago