ಮಕ್ಕಳ ಪಾಲನಾ ಕೇಂದ್ರಗಳ ಸಮಗ್ರ ವಿವರ ಸಂಗ್ರಹಿಸಲು ಡಿಸಿ ಸೂಚನೆ

November 10, 2020
1:10 PM

ಬಾಲ್ಯದಲ್ಲಿ ಮಕ್ಕಳಿಗೆ ದೊರಕಬೇಕಾದ ಸರಿಯಾದ ಪಾಲನೆ ಪೋಷಣೆಗಳಿಂದ ವಂಚಿತರಾಗದಂತೆ ನೋಡಿಕೊಂಡು ಅವರಿಗೆ ಉತ್ತಮ ಶಿಕ್ಷಣ ನೀಡಿ ಭವಿಷ್ಯದಲ್ಲಿ ಸುಸಂಸ್ಕೃತ ಪ್ರಜೆಗಳಾಗಿ ರೂಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದರು.

ಸೋಮವಾರ ಅವರು ತಮ್ಮ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ, ಮಕ್ಕಳ ಪಾಲನಾ ಸಂಸ್ಥೆಗಳ ಜಿಲ್ಲಾ ತನಿಖಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲ ಮಕ್ಕಳ ಪಾಲನಾ ಕೇಂದ್ರಗಳನ್ನು ಬಾಲನ್ಯಾಯ ಕಾಯಿದೆ ಅನ್ವಯ ನೋಂದಾಯಿಸಿಕೊಳ್ಳಬೇಕು ಹಾಗೂ ಆಗಿಂದಾಗ್ಗೆ ಪಾಲನಾ ಕೇಂದ್ರಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ, ಪರೀಶಿಲನೆ ನಡೆಸುವಂತೆ ಆದೇಶಿಸಿದರು. ಮಕ್ಕಳ ರಕ್ಷಣೆ ಹಾಗೂ ಪೋಷಣೆಗೆ ಮಕ್ಕಳ ಸರ್ವತೋಮುಖ ಅಭಿವೃಧ್ದಿಗೆ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಬೇಕೆಂದು ಸೂಚಿಸಿದರು.
ನಿರಂತರವಾಗಿ ಯಾವುದೇ ವಿದ್ಯಾರ್ಥಿಗಳು ಶಾಲೆಗೆ ಗೈರು ಹಾಜರಾದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಬೇಕು. ಇದರಿಂದ ಬಾಲ್ಯ ವಿವಾಹ, ಬಾಲಕಾರ್ಮಿಕರು, ಮಕ್ಕಳ ನಾಪತ್ತೆಯಂತಹಾ  ಪ್ರಕರಣಗಳನ್ನು ತಡೆಯುವಲ್ಲಿ ಯಶಸ್ವಿಯಾಗಬಹುದು ಎಂದರು. ಜಿಲ್ಲೆಯ ಬಾಲ ನಿಯಮ ಮಂಡಳಿಯಲ್ಲಿ 2008 ರಿಂದ ಈವರಗೆ 413 ಪ್ರಕರಣಗಳು ಬಾಕಿ ಇದ್ದು 50 ಪ್ರಕರಣಗಳಲ್ಲಿ ದೋಷಾರೋಪಣ ಪತ್ರ ಸಲ್ಲಿಸಲು ಬಾಕಿ ಇದೆ ಎಂದ ಅವರು, ಪ್ರಕರಣಗಳು ಯಾವ ಹಂತದಲ್ಲಿದೆ ಎಂಬ ಮಾಹಿತಿಯನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಇಲಾಖೆಯ ಅಧಿಕಾರಿಗಳ ನೆರವಿನೊಂದಿಗೆ ನಿಗದಿತ ಕಾಲಮಿತಿಯೊಳಗೆ ಇತ್ಯರ್ಥಪಡಿಸಿಸುವಂತೆ ಸೂಚಿಸಿದರು.
2010 ರಿಂದ ಈವರೆಗೆ ದತ್ತು ಕೇಂದ್ರಗಳಲ್ಲಿ 182 ಮಕ್ಕಳು ದಾಖಲಾಗಿದ್ದು, ಅವರಲ್ಲಿ 21 ಮಕ್ಕಳನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. 125 ಮಕ್ಕಳನ್ನು ದತ್ತು ನೀಡಲಾಗಿದ್ದು,  ದತ್ತು ಕೇಂದ್ರದಲ್ಲಿ ಅನಾರೋಗ್ಯದಲ್ಲಿ 12 ಮಕ್ಕಳು ಮರಣ ಹೊಂದಿದ್ದಾರೆ. 8 ಮಕ್ಕಳನ್ನು ಬೇರೆ ಸಂಸ್ಥೆಗೆ ವರ್ಗಾಯಿಸಲಾಗಿದೆ.  3 ಮಕ್ಕಳನ್ನು  ಪೋಷಕತ್ವಕ್ಕೆ ನೀಡಲಾಗಿದೆ. 14 ಮಕ್ಕಳು ಪ್ರಸ್ತುತ ಸಂಸ್ಥೆಯಲ್ಲಿದ್ದು, ಆ ಮಕ್ಕಳನ್ನು ಆರೋಗ್ಯವಂತರಾಗಿ ಪಾಲನೆ ಪೋಷಣೆ ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಹೆಚ್‍ಐವಿ ಸೋಂಕಿತ, ಬಾದಿತ ಮಕ್ಕಳು ಹಾಗೂ ಇಂತಹ ಕಾಯಿಲೆಯಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳ ಪಾಲನೆಯಾಗುವ ಬಗ್ಗೆ ಅಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು ಎಂದರು. ವಿಶೇಷ ಪಾಲನಾ ಯೋಜನೆಯ ಅನುದಾನವನ್ನು  ಆರ್.ಟಿ.ಜಿ.ಎಸ್ ಮೂಲಕ ಅರ್ಹ ಪಲಾನುಭವಿಗಳಿಗೆ ತಲುಪಿಸಬೇಕು ಎಂದರು.
.

ಸಭೆಯಲ್ಲಿ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶಿಲ್ಪ ಎ.ಜೆ, ಮಕ್ಕಳ ಆಯೋಗದ ಸದಸ್ಯ ಡಿ. ಶಂಕರಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗಟ್ರೂಡ್ ವೇಗಸ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಚಂದ್ರ ಬಾಯಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪಾಪಬೋವಿ, ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror