ದೇಶದಲ್ಲಿ ಮಲೇರಿಯಾ ಪ್ರಕರಣಗಳು ಶೇಕಡ 80 ಕ್ಕಿಂತಲೂ ಹೆಚ್ಚು ಮತ್ತು ಸಾವುಗಳು ಶೇಕಡ 78 ರಷ್ಟು ಕಡಿಮೆಯಾಗುತ್ತಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ಸಾರ್ವಜನಿಕ ಆರೋಗ್ಯ ಫಲಿತಾಂಶಗಳ ವೇದಿಕೆ- 2025 ಕಾರ್ಯಕ್ರಮವನ್ನುದ್ದೇಶಿಸಿ ಅವರು, ದೇಶದ ಆರೋಗ್ಯ ಕ್ಷೇತ್ರದಲ್ಲಿನ ಮಹತ್ವದ ಸುಧಾರಣೆಗಳ ಕುರಿತು ಮಾಹಿತಿ ನೀಡಿದರು. ದೇಶ, ಕ್ಷಯರೋಗ ಪ್ರಕರಣಗಳಲ್ಲಿ ಶೇಕಡ 21ರಷ್ಟು ಕುಸಿತವನ್ನು ಕಂಡಿದೆ. ಇದು ಜಾಗತಿಕ ಇಳಿಕೆಯ ದರವಾದ ಶೇಕಡ 12 ಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ. 2014ರಲ್ಲಿ ಪ್ರತಿ ಲಕ್ಷ ಜನನಗಳಿಗೆ, 130 ರಷ್ಟಿದ್ದ ಮರಣ ಪ್ರಮಾಣ, ಈ ವರ್ಷ 88 ಕ್ಕೆ ಇಳಿಕೆಯಾಗಿದೆ. ಅಲ್ಲದೇ, ಪ್ರಸ್ತುತ ವರ್ಷದಲ್ಲಿ, ಶಿಶು ಮರಣ ಪ್ರಮಾಣ 27 ಕ್ಕೆ ತಗ್ಗಿದೆ ಎಂದು ತಿಳಿಸಿದ್ದಾರೆ. ದೇಶದ ಪ್ರತಿ 2 ಸಾವಿರ ಜನಸಂಖ್ಯೆಗೆ ಒಂದು ಆರೋಗ್ಯ ಮಂದಿರವನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈಗಾಗಲೇ 30 ಸಾವಿರಕ್ಕೂ ಹೆಚ್ಚು ಕೇಂದ್ರಗಳು, ರಾಷ್ಟ್ರೀಯ ಗುಣಮಟ್ಟದ ಭರವಸೆ ಮಾನದಂಡಗಳ ಪ್ರಮಾಣೀಕರಣವನ್ನು ಪಡೆದಿವೆ. ಆಯುಷ್ಮಾನ್ ಭಾರತ್ ಯೋಜನೆಯಿಂದಾಗಿ, ಜನರು ಭರಿಸುವ ಆರೋಗ್ಯ ವೆಚ್ಚ ಶೇಕಡಾ 69 ರಿಂದ ಶೇಕಡಾ 39 ಕ್ಕೆ ಇಳಿಕೆಯಾಗಿದೆ. ಇದು ಬಡ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡಿದೆ ಎಂದರು.
ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…