ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಹಾಸನ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿನ ಸಮಸ್ಯೆಗಳ ಸಮಗ್ರವಾದ ಅಧ್ಯಯನ ಮಾಡಿ ಅವುಗಳಿಗೆ ಪರಿಹಾರ ಸೂತ್ರ ರೂಪಿಸುವ ನಿಟ್ಟಿನಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟವು ಕಾರ್ಯಪ್ರವೃತ್ತವಾಗಿದ್ದು, ಈ ನಿಟ್ಟಿನಲ್ಲಿ ಅ.31ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರು ವಿಜಯನಗರದ ಆದಿ ಚುಂಚನಗಿರಿ ಮಠದ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮರೋಳ್ಳಿ ತಿಳಿಸಿದ್ದಾರೆ.
ರೈತರ ಕೃಷಿ ಬೆಳೆಗಳಿಗೆ ಮಾರಕ ರೋಗಗಳ ನಿರ್ಮೂಲನೆಗೆ ಸರಕಾರ ವಿಶೇಷ ಕಾಳಜಿ ವಹಿಸಿ, ತುರ್ತು ಕ್ರಮ ವಹಿಸುವ ಮೂಲಕ ಅಡಿಕೆಗೆ ತಗುಲಿರುವ ಎಲೆಚುಕ್ಕೆ ರೋಗದ ವೈಜ್ಞಾನಿಕ ಸಂಶೋಧನೆ ನಡೆಸಿ, ಪರಿಹಾರ ಕಲ್ಪಿಸಬೇಕು. ಮಲೆನಾಡು, ಕರಾವಳಿ ಭಾಗದಲ್ಲಿ ಭೂಮಿ ಹಕ್ಕು ನೀಡುವಲ್ಲಿನ ಮತ್ತು ದರಖಾಸ್ತು ಮಂಜೂರಾತಿಗೆ ಸರಕಾರ ಕಂದಾಯ ಇಲಾಖೆ ಮೂಲಕ ತುರ್ತು ಕ್ರಮ ವಹಿಸಬೇಕು ಎಂದು ಅವರು ಆಗ್ರಹಿಸಿದರು.
ಕರಾವಳಿ ಮಲೆನಾಡು ಪ್ರದೇಶದ ಪ್ರಮುಖ ಬೆಳೆಗಳಿಗೆ ಕಾಣಿಸಿಕೊಂಡಿರುವ ವಿವಿಧ ರೋಗಗಳು, ಕಂದಾಯ, ಅರಣ್ಯ ಭೂಮಿ, ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಲ್ಲಿ ಎದುರಾಗಿರುವ ತೊಡಕುಗಳು, ಕಸ್ತೂರಿ ರಂಗನ್ ವರದಿ ಜಾರಿಯಾದರೆ ಎದುರಾಗುವ ಲಾಭ ನಷ್ಟ ಕಷ್ಟ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಒಕ್ಕೂಟ ವಿಸ್ತೃತ ಚರ್ಚೆ ನಡೆಸಲು ತೀರ್ಮಾನಿಸಿದೆ.ಮಲೆನಾಡು- ಕರಾವಳಿ ಭಾಗದಲ್ಲಿ ಮೆಡಿಕಲ್ ಕಾಲೇಜು, ಐಐಟಿ ಕಾಲೇಜು ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗುವ ಯೋಜನೆ ರೂಪಿಸಲು ಸರ್ಕಾರದ ಮೇಲೆ ಒತ್ತಡ ತರುವ ಉದ್ದೇಶ ಒಕ್ಕೂಟದ ಮುಂದಿದೆ ಎಂದರು.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…