ಸುದ್ದಿಗಳು

ಕಾಂಗ್ರೆಸ್​ ಸಾರಥ್ಯ ವಹಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ |

Share

ಕಾಂಗ್ರೆಸ್ (Congress)​ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ(Mallikarjuna Kharge)  ಅಧಿಕಾರ ಸ್ವೀಕರಿಸಿದ್ದಾರೆ. ದೆಹಲಿಯಲ್ಲಿರುವ ಕಾಂಗ್ರೆಸ್​ ಪ್ರಧಾನ ಕಚೇರಿಯಲ್ಲಿ ಸೋನಿಯಾ ಗಾಂಧಿ (Sonia Gandhi) ಅವರು  ಖರ್ಗೆಗೆ ಅಧಿಕಾರ ಹಸ್ತಾಂತರಿಸಿದ್ದಾರೆ. ಕಳೆದ ವಾರ ನಡೆದ ಚುನಾವಣೆಯಲ್ಲಿ ಖರ್ಗೆ ತಮ್ಮ ಪ್ರತಿಸ್ಪರ್ಧಿ ಶಶಿ ತರೂರ್​ರನ್ನು ಸೋಲಿಸಿ ಕಾಂಗ್ರೆಸ್​ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.ಕಾಂಗ್ರೆಸ್ ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಆರನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು.ಕಳೆದ 24 ವರ್ಷಗಳಲ್ಲಿ ಗಾಂಧಿಯೇತರ ಮೊದಲ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. 

ಈ ಸಮಾರಂಭದಲ್ಲಿ ಕೆಸಿ ವೇಣುಗೋಪಾಲ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತಿತರ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋನಿಯಾ ಗಾಂಧಿ ಅಭಿನಂದಿಸಿದರು. ಅಧಿಕಾರ ಸ್ವೀಕರಿಸುವ ಮುನ್ನ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ ಘಾಟ್ ಗೆ ಭೇಟಿ ನೀಡಿ ಮಹಾತ್ಮಾಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಇದೇ ವೇಳೆ ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಸ್ಮಾರಕಗಳಿಗೆ ಭೇಟಿ ನೀಡಿದ್ದಾರೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

ಗುಜ್ಜೆ ಶೇಂಗಾ ಪಲ್ಯ ಮಾಡುವ ವಿಧಾನ...

13 hours ago

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

21 hours ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

21 hours ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

22 hours ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

2 days ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

2 days ago