ಕೊನೆ ಹಂತಕ್ಕೆ ತಲುಪಿದ ಕರ್ನಾಟಕ ಸಿಎಂ ಕುರ್ಚಿ ಫೈಟ್: ಇಂದೇ ಘೋಷಣೆ ಸಾಧ್ಯತೆ: ಎಲ್ಲರ ಚಿತ್ತ ದೆಹಲಿಯತ್ತ

May 17, 2023
10:06 AM

 

Advertisement
Advertisement

ನಿನ್ನೆ ಮಲ್ಲಿಕಾರ್ಜುನ ಖರ್ಗೆ ಜೊತೆ ಒಂದು ಗಂಟೆ ಕಾಲ ಚರ್ಚೆ ನಡೆಸಿದ ರಾಹುಲ್ ಗಾಂಧಿ, ವೀಕ್ಷಕರು ಸಲ್ಲಿಸಿರುವ ವರದಿಯ ವಿವರ ಪಡೆದ್ರು.  ಸಿದ್ದರಾಮಯ್ಯ, ಡಿಕೆಶಿ ಮನಸ್ಸಿನಲ್ಲಿ ಏನಿದೆ ಅನ್ನೋದನ್ನು ತಿಳಿಯಿರಿ. ಇಬ್ಬರನ್ನು ಪ್ರತ್ಯೇಕವಾಗಿ ಕರೆದು ಮಾತುಕತೆ ನಡೆಸಿ. ಅವರ ಬೇಡಿಕೆ ಏನು.. ಪರ್ಯಾಯ ಮಾರ್ಗ ಏನು ಎಂಬುದನ್ನು ಚರ್ಚಿಸಿ ಎಂದು ಖರ್ಗೆಗೆ ಸಲಹೆ ನೀಡಿದ್ದರು. ಅದರಂತೆ ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಕರೆದು ಪ್ರತ್ಯೇಕ ಮಾತುಕತೆ ಮಾಡಿದ್ದಾರೆ. ಆದ್ರೆ, ಇಬ್ಬರೊಂದಿಗಿನ ಸಭೆ ಮಾತ್ರ ಫಲ ನೀಡಿಲ್ಲ.

ದೆಹಲಿಯಲ್ಲಿ ಸಿದ್ದರಾಮಯ್ಯ ತಂತ್ರಗಾರಿಕೆ ಮುಂದುವರಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಭೇಟಿ ನಂತರ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್‌ರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ನನಗೆ 5 ವರ್ಷ ಸಿಎಂ‌ ಸ್ಥಾನ ನೀಡಬೇಕು ಎಂಬ ವಾದವನ್ನು ಮಂಡಿಸಿದ್ದಾರೆ. ಇನ್ನು ಸಿದ್ದರಾಮಯ್ಯಗೆ ಹೆಚ್ಚಿನ ಶಾಸಕರ ಬೆಂಬಲವಿದೆ ಎನ್ನಲಾಗಿತ್ತು. ಆದ್ರೆ ಸಿದ್ದರಾಮಯ್ಯ ಪರ 60 ಶಾಸಕರಷ್ಟೇ ಮತ ಹಾಕಿದ್ದಾರೆ ಎನ್ನಲಾಗಿದೆ. ಡಿಕೆಶಿಗೆ 40 ಶಾಸಕರು ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ. ಇನ್ನುಳಿದ ಶಾಸಕರು ಸಿಎಂ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದಾರೆ ಎನ್ನಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ಜೊತೆ ಮಾತುಕತೆ ವೇಳೆ ಡಿ.ಕೆ.ಶಿವಕುಮಾರ್, ತಮಗೆ ಮುಖ್ಯಮಂತ್ರಿ ಸ್ಥಾನ ನೀಡಲೇಬೇಕೆಂದು ಬಿಗಿಪಟ್ಟು ಹಾಕಿದ್ದಾರೆ. ಸಿಎಂ ಸ್ಥಾನ ನೀಡಿದರೆ ಕೆಪಿಸಿಸಿ ಅಧ್ಯಕ್ಷನಾಗಿ ಮಾಡಿದ ರೀತಿಯಲ್ಲೇ ಕೆಲಸ ಮಾಡುತ್ತೇನೆ.  ಅದು ನನ್ನ ಕರ್ತವ್ಯ ಎಂಬಂತೆ ಮಾಡುತ್ತೇನೆ. ಇಲ್ಲವಾದರೆ ನಾನು ಕೇವಲ ಶಾಸಕನಾಗಿ ಇರುತ್ತೇನೆ. ಸರ್ಕಾರದ ಭಾಗವಾಗುವುದಿಲ್ಲ ಅಂತೇಳಿದ್ದಾರೆ. ಅಲ್ಲದೇ ಪಕ್ಷ ಸಂಘಟನೆ ಮಾಡಿದ ಬಗ್ಗೆಯೂ ಖರ್ಗೆ ಗಮನಕ್ಕೆ ತಂದಿದ್ದಾರೆ. ಇನ್ನೊಂದೆಜೆ ಮುಂದೆ ಹೋಗಿ ನೀವು ಸಿಎಂ ಆಗಿ. ಇಲ್ಲ ನನನ್ನು ಮಾಡಿ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ ಎನ್ನಲಾಗಿದೆ.  ಡಿಕೆ ಶಿವಕುಮಾರ್ ಅವರ ಈ ಮಾತು ಕೇಳಿದ ಖರ್ಗೆ, ನಾನು ಇತರರ ಜೊತೆ ಮಾತನಾಡಿ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಫುಲ್ ಖುಷ್ ಮೂಡ್ ನಲ್ಲಿರುವ ಸಿದ್ದರಾಮಯ್ಯ ಬೆಂಬಲಿಗರು ಇಂದೇ ಮುಖ್ಯಮಂತ್ರಿ ವಿಚಾರ ಘೋಷಣೆ ಆಗಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಮೂರು ಡಿಸಿಎಂ ಸ್ಥಾನದ  ನಿರೀಕ್ಷೆಯಲ್ಲೂ ಸಿದ್ದರಾಮಯ್ಯ ಬೆಂಬಲಿಗರಿದ್ದು, ರಾಹುಲ್ ಗಾಂಧಿ ಅಂತಿಮ ನಿರ್ಧಾರ ಕೈಗೊಳ್ತಾರೆ ಎಂಬ ಅಪೇಕ್ಷೆಯಲ್ಲಿದ್ದಾರೆ.

Advertisement

ಸಿದ್ದರಾಮಯ್ಯ, ಡಿಕೆಶಿ ಜತೆ ಚರ್ಚೆ ವೇಳೆ ರಿಪೋರ್ಟ್​ ಬಗ್ಗೆ ಪ್ರಸ್ತಾಪವಾಗಿದೆ. ಎಐಸಿಸಿ ವೀಕ್ಷಕರು ನೀಡಿರುವ ರಿಪೋರ್ಟ್​ ಬಗ್ಗೆ ಪ್ರಸ್ತಾಪಿಸಿದ ಖರ್ಗೆ, ಎಐಸಿಸಿ ವೀಕ್ಷಕರು ನೀಡಿರುವ ವರದಿ ಬಗ್ಗೆ ಖರ್ಗೆ ಮಾಹಿತಿ ನೀಡಿದ್ದಾರೆ.  ಶಾಸಕರ ಅಭಿಪ್ರಾಯ, ರಾಜಕೀಯ ಲೆಕ್ಕಾಚಾರ, ಸಂಖ್ಯಾಬಲದ ಮಾಹಿತಿಗಳನ್ನೂ ನೀಡಿದ್ದಾರೆ. ಎಐಸಿಸಿ ವೀಕ್ಷಕರು ನೀಡಿರುವ ರಿಪೋರ್ಟ್​ ಜತೆ ನಾಯಕರ ಅಭಿಪ್ರಾಯ ಹಂಚಿಕೊಂಡಿದ್ದು, ಎಲ್ಲಾ ವಿವರವನ್ನು ರಾಹುಲ್​ ಗಾಂಧಿಗೆ ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ.

ಒಟ್ಟಿನಲ್ಲಿ ಕಳೆದ ಮೂರು ದಿನಗಳಿಂದ ಸಿಎಂ ಕುರ್ಚಿಗೆ ನಡೆಯುತ್ತಿರುವ ಕಿತ್ತಾಟ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ರಾಹುಲ್ ಗಾಂಧಿ ಅವರು ಇಂದು ಇಬ್ಬರು ನಾಯಕನ್ನು ಕೂಡಿಸಿಕೊಂಡು ಫೈನಲ್​ ಮಾಡಲಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |
May 24, 2025
4:43 PM
by: ಮಹೇಶ್ ಪುಚ್ಚಪ್ಪಾಡಿ
ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ
May 24, 2025
11:10 AM
by: ದ ರೂರಲ್ ಮಿರರ್.ಕಾಂ
50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18
May 24, 2025
10:37 AM
by: The Rural Mirror ಸುದ್ದಿಜಾಲ
ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು
May 24, 2025
9:56 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group