ನಿನ್ನೆ ಮಲ್ಲಿಕಾರ್ಜುನ ಖರ್ಗೆ ಜೊತೆ ಒಂದು ಗಂಟೆ ಕಾಲ ಚರ್ಚೆ ನಡೆಸಿದ ರಾಹುಲ್ ಗಾಂಧಿ, ವೀಕ್ಷಕರು ಸಲ್ಲಿಸಿರುವ ವರದಿಯ ವಿವರ ಪಡೆದ್ರು. ಸಿದ್ದರಾಮಯ್ಯ, ಡಿಕೆಶಿ ಮನಸ್ಸಿನಲ್ಲಿ ಏನಿದೆ ಅನ್ನೋದನ್ನು ತಿಳಿಯಿರಿ. ಇಬ್ಬರನ್ನು ಪ್ರತ್ಯೇಕವಾಗಿ ಕರೆದು ಮಾತುಕತೆ ನಡೆಸಿ. ಅವರ ಬೇಡಿಕೆ ಏನು.. ಪರ್ಯಾಯ ಮಾರ್ಗ ಏನು ಎಂಬುದನ್ನು ಚರ್ಚಿಸಿ ಎಂದು ಖರ್ಗೆಗೆ ಸಲಹೆ ನೀಡಿದ್ದರು. ಅದರಂತೆ ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಕರೆದು ಪ್ರತ್ಯೇಕ ಮಾತುಕತೆ ಮಾಡಿದ್ದಾರೆ. ಆದ್ರೆ, ಇಬ್ಬರೊಂದಿಗಿನ ಸಭೆ ಮಾತ್ರ ಫಲ ನೀಡಿಲ್ಲ.
ದೆಹಲಿಯಲ್ಲಿ ಸಿದ್ದರಾಮಯ್ಯ ತಂತ್ರಗಾರಿಕೆ ಮುಂದುವರಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಭೇಟಿ ನಂತರ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್‌ರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ನನಗೆ 5 ವರ್ಷ ಸಿಎಂ ಸ್ಥಾನ ನೀಡಬೇಕು ಎಂಬ ವಾದವನ್ನು ಮಂಡಿಸಿದ್ದಾರೆ. ಇನ್ನು ಸಿದ್ದರಾಮಯ್ಯಗೆ ಹೆಚ್ಚಿನ ಶಾಸಕರ ಬೆಂಬಲವಿದೆ ಎನ್ನಲಾಗಿತ್ತು. ಆದ್ರೆ ಸಿದ್ದರಾಮಯ್ಯ ಪರ 60 ಶಾಸಕರಷ್ಟೇ ಮತ ಹಾಕಿದ್ದಾರೆ ಎನ್ನಲಾಗಿದೆ. ಡಿಕೆಶಿಗೆ 40 ಶಾಸಕರು ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ. ಇನ್ನುಳಿದ ಶಾಸಕರು ಸಿಎಂ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದಾರೆ ಎನ್ನಲಾಗಿದೆ.
ಮಲ್ಲಿಕಾರ್ಜುನ ಖರ್ಗೆ ಜೊತೆ ಮಾತುಕತೆ ವೇಳೆ ಡಿ.ಕೆ.ಶಿವಕುಮಾರ್, ತಮಗೆ ಮುಖ್ಯಮಂತ್ರಿ ಸ್ಥಾನ ನೀಡಲೇಬೇಕೆಂದು ಬಿಗಿಪಟ್ಟು ಹಾಕಿದ್ದಾರೆ. ಸಿಎಂ ಸ್ಥಾನ ನೀಡಿದರೆ ಕೆಪಿಸಿಸಿ ಅಧ್ಯಕ್ಷನಾಗಿ ಮಾಡಿದ ರೀತಿಯಲ್ಲೇ ಕೆಲಸ ಮಾಡುತ್ತೇನೆ. ಅದು ನನ್ನ ಕರ್ತವ್ಯ ಎಂಬಂತೆ ಮಾಡುತ್ತೇನೆ. ಇಲ್ಲವಾದರೆ ನಾನು ಕೇವಲ ಶಾಸಕನಾಗಿ ಇರುತ್ತೇನೆ. ಸರ್ಕಾರದ ಭಾಗವಾಗುವುದಿಲ್ಲ ಅಂತೇಳಿದ್ದಾರೆ. ಅಲ್ಲದೇ ಪಕ್ಷ ಸಂಘಟನೆ ಮಾಡಿದ ಬಗ್ಗೆಯೂ ಖರ್ಗೆ ಗಮನಕ್ಕೆ ತಂದಿದ್ದಾರೆ. ಇನ್ನೊಂದೆಜೆ ಮುಂದೆ ಹೋಗಿ ನೀವು ಸಿಎಂ ಆಗಿ. ಇಲ್ಲ ನನನ್ನು ಮಾಡಿ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಅವರ ಈ ಮಾತು ಕೇಳಿದ ಖರ್ಗೆ, ನಾನು ಇತರರ ಜೊತೆ ಮಾತನಾಡಿ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೊಂದೆಡೆ ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಫುಲ್ ಖುಷ್ ಮೂಡ್ ನಲ್ಲಿರುವ ಸಿದ್ದರಾಮಯ್ಯ ಬೆಂಬಲಿಗರು ಇಂದೇ ಮುಖ್ಯಮಂತ್ರಿ ವಿಚಾರ ಘೋಷಣೆ ಆಗಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಮೂರು ಡಿಸಿಎಂ ಸ್ಥಾನದ ನಿರೀಕ್ಷೆಯಲ್ಲೂ ಸಿದ್ದರಾಮಯ್ಯ ಬೆಂಬಲಿಗರಿದ್ದು, ರಾಹುಲ್ ಗಾಂಧಿ ಅಂತಿಮ ನಿರ್ಧಾರ ಕೈಗೊಳ್ತಾರೆ ಎಂಬ ಅಪೇಕ್ಷೆಯಲ್ಲಿದ್ದಾರೆ.
ಸಿದ್ದರಾಮಯ್ಯ, ಡಿಕೆಶಿ ಜತೆ ಚರ್ಚೆ ವೇಳೆ ರಿಪೋರ್ಟ್ ಬಗ್ಗೆ ಪ್ರಸ್ತಾಪವಾಗಿದೆ. ಎಐಸಿಸಿ ವೀಕ್ಷಕರು ನೀಡಿರುವ ರಿಪೋರ್ಟ್ ಬಗ್ಗೆ ಪ್ರಸ್ತಾಪಿಸಿದ ಖರ್ಗೆ, ಎಐಸಿಸಿ ವೀಕ್ಷಕರು ನೀಡಿರುವ ವರದಿ ಬಗ್ಗೆ ಖರ್ಗೆ ಮಾಹಿತಿ ನೀಡಿದ್ದಾರೆ. ಶಾಸಕರ ಅಭಿಪ್ರಾಯ, ರಾಜಕೀಯ ಲೆಕ್ಕಾಚಾರ, ಸಂಖ್ಯಾಬಲದ ಮಾಹಿತಿಗಳನ್ನೂ ನೀಡಿದ್ದಾರೆ. ಎಐಸಿಸಿ ವೀಕ್ಷಕರು ನೀಡಿರುವ ರಿಪೋರ್ಟ್ ಜತೆ ನಾಯಕರ ಅಭಿಪ್ರಾಯ ಹಂಚಿಕೊಂಡಿದ್ದು, ಎಲ್ಲಾ ವಿವರವನ್ನು ರಾಹುಲ್ ಗಾಂಧಿಗೆ ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ.
ಒಟ್ಟಿನಲ್ಲಿ ಕಳೆದ ಮೂರು ದಿನಗಳಿಂದ ಸಿಎಂ ಕುರ್ಚಿಗೆ ನಡೆಯುತ್ತಿರುವ ಕಿತ್ತಾಟ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ರಾಹುಲ್ ಗಾಂಧಿ ಅವರು ಇಂದು ಇಬ್ಬರು ನಾಯಕನ್ನು ಕೂಡಿಸಿಕೊಂಡು ಫೈನಲ್ ಮಾಡಲಿದ್ದಾರೆ.
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…
ಪ್ರವಾಸಿಗರು ಸೇರಿದಂತೆ ಜನರು ಮುಳ್ಳಯ್ಯನಗಿರಿ ಪರ್ವತ ಶ್ರೇಣಿ ಹಾಗೂ ಅರಣ್ಯ ಪ್ರದೇಶಕ್ಕೆ ತೆರಳಿ…