Advertisement
MIRROR FOCUS

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

Share

ಸುಮಾರು ಒಂದು ತಿಂಗಳ ತಡವಾಗಿ ಆಗಮಿಸಿರುವ ಮುಂಗಾರು ಇದೀಗ ಮಲೆನಾಡಿನಲ್ಲಿ ಚುರುಕುಗೊಂಡಿದೆ. ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಮಲೆನಾಡು ಭಾಗದಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ ಹೊಸ ಭರವಸೆ ಮೂಡಿಸಿದೆ.

ಕೊಡಗಿನ ಕಾವೇರಿ ನದಿ ಪಾತ್ರ ಸೇರಿದಂತೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಕಾಫಿ, ಭತ್ತ, ಕರಿಮೆಣಸು ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುವ ರೈತರಿಗೆ ಇದು ಸಂತಸದ ಸುದ್ದಿಯಾಗಿದೆ.  ಸಾಮಾನ್ಯವಾಗಿ ಕೊಡಗು ಜಿಲ್ಲೆಯಲ್ಲಿ ಜೂನ್ ಮೊದಲ ವಾರದಲ್ಲೇ ಮುಂಗಾರು ಆರಂಭವಾಗಿ ಕೃಷಿ ಚಟುವಟಿಕೆಗಳಿಗೆ ವೇಗ ಸಿಗುತ್ತದೆ. ಆದರೆ ಈ ವರ್ಷ ಮುಂಗಾರು ತಡವಾದ ಹಿನ್ನೆಲೆಯಲ್ಲಿ ರೈತರು ಆತಂಕದಲ್ಲಿದ್ದರು. ಬಿತ್ತನೆ, ನಾಟಿ ಹಾಗೂ ತೋಟಗಾರಿಕಾ ಬೆಳೆಗಳ ನಿರ್ವಹಣೆಯೂ ವಿಳಂಬವಾಗಿತ್ತು.  ಇದೀಗ ಸುಮಾರು ಒಂದು ತಿಂಗಳ ಬಳಿಕ ಮುಂಗಾರು ಬಿರುಸುಗೊಂಡಿರುವುದರಿಂದ ಕೃಷಿ ಚಟುವಟಿಕೆಗಳು ಚುರುಕುಗೊಳ್ಳುವ ನಿರೀಕ್ಷೆ ಮೂಡಿದೆ. ಮಳೆ ಮುಂದುವರಿದರೆ ಜಲಾಶಯಗಳ ಒಳಹರಿವು ಹೆಚ್ಚುವುದರ ಜೊತೆಗೆ ಕಾವೇರಿ ನದಿಯ ಹರಿವಿನಲ್ಲಿಯೂ ಏರಿಕೆ ಕಾಣುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿ, ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಪುತ್ತೂರು ಸೇರಿದಂತೆ ವಿವಿದೆಡೆ ಮಳೆಯಾಗುತ್ತಿದೆ. ಉಡುಪಿ ಜಿಲ್ಲೆಯಲ್ಲೂ ಮಳೆಯಾಗುತ್ತಿದೆ. ಮಲೆನಾಡಿನ ತಪ್ಪಲು ಪ್ರದೇಶದ ಶಿರಾಡಿ ಘಾಟಿ ಸೇರಿದಂತೆ ಕಾಡಂಚಿನ ಪ್ರದೇಶಗಳಲ್ಲಿ ಮಳೆಗಾಲದ ಸೊಬಗು ಆರಂಭವಾಗಿದೆ.

ಕೃಷಿ ತಜ್ಞರ ಪ್ರಕಾರ, ಮುಂದಿನ ದಿನಗಳಲ್ಲಿಯೂ ಸಮರ್ಪಕ ಪ್ರಮಾಣದ ಮಳೆ ಮುಂದುವರಿದರೆ ಭತ್ತದ ನಾಟಿ, ಕಾಫಿ ತೋಟಗಳ ಬೆಳವಣಿಗೆ ಹಾಗೂ ಕರಿಮೆಣಸು ಸೇರಿದಂತೆ ಮಳೆಆಧಾರಿತ ಬೆಳೆಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ತಡವಾದರೂ ಸಮಯಕ್ಕೆ ಬಂದ ಮಳೆ :  ಈ ವರ್ಷದ ಮುಂಗಾರು ಆರಂಭದಲ್ಲಿ ಕಂಡುಬಂದ ವಿಳಂಬದಿಂದ ಮಲೆನಾಡು ಮತ್ತು ಕರಾವಳಿ ರೈತರು ತೀವ್ರ ಆತಂಕದಲ್ಲಿದ್ದರು. ವಿಶೇಷವಾಗಿ ಕಾಫಿ, ಕರಿಮೆಣಸು ಹಾಗೂ ಅಡಿಕೆ ತೋಟಗಳಲ್ಲಿ ಮಣ್ಣಿನ ತೇವಾಂಶ ಕಡಿಮೆಯಾಗಿದ್ದು, ನಿರ್ವಹಣಾ ವೆಚ್ಚ ಹೆಚ್ಚುವ ಸಾಧ್ಯತೆ ಎದುರಾಗಿತ್ತು.

ಆದರೆ ಜೂನ್ ಅಂತ್ಯದ ವೇಳೆಗೆ ಮುಂಗಾರು ಚುರುಕುಗೊಂಡಿರುವುದು ಕೃಷಿ ದೃಷ್ಟಿಯಿಂದ ಇನ್ನೂ ಅನುಕೂಲಕರ ಬೆಳವಣಿಗೆಯಾಗಿದೆ. ಭತ್ತದ ನಾಟಿಗೆ ಇನ್ನೂ ಅವಕಾಶವಿದ್ದು, ಕಾಫಿ ಗಿಡಗಳ ಹೊಸ ಚಿಗುರು ಬೆಳವಣಿಗೆ ಹಾಗೂ ಕರಿಮೆಣಸು ಬಳ್ಳಿಗಳ ಚೇತರಿಕೆಗೆ ಈ ಮಳೆ ನೆರವಾಗಲಿದೆ. ಅಡಿಕೆ ತೋಟಗಳಲ್ಲೂ ಮಣ್ಣಿನ ತೇವಾಂಶ ಸುಧಾರಿಸುವ ಸಾಧ್ಯತೆಯಿದೆ.

ಆದರೂ, ನಿರಂತರ ಅತಿವೃಷ್ಟಿ ಉಂಟಾದರೆ ಭೂಕುಸಿತ, ನೀರು ನಿಲ್ಲುವಿಕೆ, ಕಾಫಿಯಲ್ಲಿ ರೋಗ, ಅಡಿಕೆಯಲ್ಲಿ ಕೊಳೆರೋಗ (ಮಹಾಳಿ), ಕರಿಮೆಣಸಿನಲ್ಲಿ ಶಿಲೀಂಧ್ರ ರೋಗಗಳಂತಹ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆಯೂ ಇದೆ. ಆದ್ದರಿಂದ ರೈತರು ಮಳೆ ನಡುವಿನ ಬಿಡುವಿನ ಅವಧಿಯಲ್ಲಿ ತೋಟಗಳ ಸ್ವಚ್ಛತೆ, ನೀರು ಹರಿದು ಹೋಗುವ ವ್ಯವಸ್ಥೆ ಹಾಗೂ ಅಗತ್ಯ ಸಸ್ಯರೋಗ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ ಎಂದು ಕೃಷಿ ತಜ್ಞರು ಸಲಹೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

After nearly a month-long delay, the southwest monsoon has become active across the Malnad and coastal districts of Karnataka, including Kodagu, Dakshina Kannada, and Udupi. The rainfall has brought much-needed relief to farmers, improved prospects for paddy, coffee, pepper, and arecanut cultivation, and is expected to enhance river flows and reservoir inflows if it continues over the coming days.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

8 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

12 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago