ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯದ ಘಟನೆಗಳಿಂದ ಬೇಸರಗೊಂಡ ಋಷಿಕೇಶ್ವರ್ ರಾಜು ಎಂಬವರು ದೆಹಲಿಗೆ ಸೈಕಲ್ ನಲ್ಲಿ ಪ್ರಯಾಣಿಸಿ ರಾಷ್ಟ್ರಪತಿಗಳನ್ನು ಭೇಟಿ ಮಾಡಿ, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಲಿದ್ದಾರೆ.
ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನದಂದು ತೆಲಂಗಾಣದ ನಲ್ಗೊಂಡ ಜಿಲ್ಲೆಯ ಮಿರ್ಯಾಲ್‌ಗುಡಾದಿಂದ ಇವರು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ್ದಾರೆ. ಈಗಿನ ಅಂದಾಜು ಪ್ರಕಾರ ಏಪ್ರಿಲ್ 5ರಂದು ದೆಹಲಿಯಲ್ಲಿ ರಾಷ್ಟ್ರಪತಿಯನ್ನು ಭೇಟಿಯಾಗಲಿದ್ದಾರೆ. ಆರಂಭದಿಂದಲೂ ಅವರು ಪ್ರತಿದಿನ 70 ರಿಂದ 80 ಕಿಲೋಮೀಟರ್ ಸೈಕ್ಲಿಂಗ್ ಮಾಡುತ್ತಿದ್ದಾರೆ. ಈವರೆಗೆ 14 ದಿನಗಳಲ್ಲಿ ಸುಮಾರು 700 ಕಿ.ಮೀ ದೂರವನ್ನು ಕ್ರಮಿಸಿರುವ ಅವರು, ಇನ್ನು 1200 ಕಿ.ಮೀ ಇರುವ ದೆಹಲಿ ಕಡೆ ಮುಖ ಮಾಡಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…