ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಗ್ರಾಮೀಣ ಭಾಗದಲ್ಲಿ ಹೊಳೆ, ಹಳ್ಳ, ನದಿಗಳು ತುಂಬಿ ಹರಿಯುತ್ತಿದೆ. ಸುಳ್ಯದ ಆಲೆಟ್ಟಿಯ ಬಡ್ಡಡ್ಕ ಬಳಿಯ ಕೂರ್ನಡ್ಕ ಬಳಿ ಹೊಳೆಯ ಪಾಲ ದಾಟುತ್ತಿದ್ದಾಗ ಆಯತಪ್ಪಿ ಬಿದ್ದು ಕಾರ್ಮಿಕರೊಬ್ಬರು ನೀರು ಪಾಲಾದ ಘಟನೆ ನಡೆದಿದೆ. ಹೊಳೆ ತುಂಬಿ ಹರಿಯುತ್ತಿದ್ದ ಕಾರಣದಿಂದ ವ್ಯಕ್ತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಇದುವರೆಗೂ ಪತ್ತೆಯಾಗಿಲ್ಲ. ರಕ್ಷಣಾ ಕಾರ್ಯಕ್ಕೆ ಅಗ್ನಿಶಾಮಕ ದಳದ ಸಿಬಂದಿಗಳು ಸ್ಥಳಕ್ಕೆ ತೆರಳಿದ್ದಾರೆ. ಸುಳ್ಯ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel