ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಆರಂಭಿಸಲು ಮನವಿ

October 7, 2021
9:24 PM

ಕಡಬ ತಾಲೂಕು ಮೊರಾರ್ಜಿ ದೇಸಾಯಿ ವಸತಿ ಶಾಲೆ ಪಂಜದಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಆರಂಭಿಸಬೇಕು ಹಾಗೂ ತಾಲೂಕಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಆರಂಭಿಸಬೇಕು ಎಂದು ನಾಲ್ಕೂರು ಗ್ರಾಮದ ವಿದ್ಯಾರ್ಥಿನಿ ಭೂಮಿಕಾ ಕುಕ್ಕುಜೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು  ಅವರಿಗೆ ಮನವಿ ಮಾಡಿದ್ದಾರೆ.

ಗುತ್ತಿಗಾರು ಗ್ರಾಮದ ಕಮಿಲದ ಬಿಜೆಪಿ ಬೂತ್‌ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ವಿದ್ಯಾರ್ಥಿನಿ ಮನವಿ ನೀಡಿದ್ದಾರೆ. ಸುಳ್ಯ ತಾಲೂಕಿಗೆ ಸಂಬಂಧಿಸಿದಂತೆ ಯಾವುದೇ ಮೊರಾರ್ಜಿ ಶಾಲೆಯನ್ನು ಆರಂಭಿಸಲು ಪದವಿ ಪೂರ್ವ ಶಿಕ್ಷಣವನ್ನು ಗ್ರಾಮೀಣ ವಿದ್ಯಾರ್ಥಿಗಳಗೆ ಅನುಕೂಲವಾಗುವಂತೆ ಮಾಡಿಕೊಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಜಿಲ್ಲೆಯಲ್ಲಿ 11 ವಸತಿ ಶಾಲೆಗಳಿದ್ದು ಉತ್ತಮ ರೀತಿಯಲ್ಲಿ ಶಿಕ್ಷಣ ನೀಡಲಾಗುತ್ತಿವೆ, ಹೀಗಾಗಿ ಸುಳ್ಯ ತಾಲೂಕಿನಲ್ಲೂ  ಶಿಕ್ಷಣ ಸಿಗುವಂತಾಗಬೇಕು  ಎಂದು ಮನವಿಯಲ್ಲಿ  ಒತ್ತಾಯಿಸಿದ್ದಾರೆ.

ಈ ಸಂದರ್ಭ ವಿದ್ಯಾರ್ಥಿನಿಯ ತಂದೆ  ಗಂಗಾಧರ ಕುಕ್ಕುಜೆ, ಬಿಜಿಪಿ ಮಂಡಲ ಅಧ್ಯಕ್ಷ ಹರೀಶ್‌ ಕಂಜಿಪಿಲಿ, ಮಾಜಿ ಅಧ್ಯಕ್ಷ ವೆಂಕಟ್‌ ವಳಲಂಬೆ, ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್‌ ದಂಬೆಕೋಡಿ, ತಾಪಂ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್‌, ಗುತ್ತಿಗಾರು ಗ್ರಾಪಂ ಮಾಜಿ ಅಧ್ಯಕ್ಷ ಅಚ್ಚುತ ಗುತ್ತಿಗಾರು ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror