ಕಡಬ ತಾಲೂಕು ಮೊರಾರ್ಜಿ ದೇಸಾಯಿ ವಸತಿ ಶಾಲೆ ಪಂಜದಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಆರಂಭಿಸಬೇಕು ಹಾಗೂ ತಾಲೂಕಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಆರಂಭಿಸಬೇಕು ಎಂದು ನಾಲ್ಕೂರು ಗ್ರಾಮದ ವಿದ್ಯಾರ್ಥಿನಿ ಭೂಮಿಕಾ ಕುಕ್ಕುಜೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಮನವಿ ಮಾಡಿದ್ದಾರೆ.
ಗುತ್ತಿಗಾರು ಗ್ರಾಮದ ಕಮಿಲದ ಬಿಜೆಪಿ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ವಿದ್ಯಾರ್ಥಿನಿ ಮನವಿ ನೀಡಿದ್ದಾರೆ. ಸುಳ್ಯ ತಾಲೂಕಿಗೆ ಸಂಬಂಧಿಸಿದಂತೆ ಯಾವುದೇ ಮೊರಾರ್ಜಿ ಶಾಲೆಯನ್ನು ಆರಂಭಿಸಲು ಪದವಿ ಪೂರ್ವ ಶಿಕ್ಷಣವನ್ನು ಗ್ರಾಮೀಣ ವಿದ್ಯಾರ್ಥಿಗಳಗೆ ಅನುಕೂಲವಾಗುವಂತೆ ಮಾಡಿಕೊಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಜಿಲ್ಲೆಯಲ್ಲಿ 11 ವಸತಿ ಶಾಲೆಗಳಿದ್ದು ಉತ್ತಮ ರೀತಿಯಲ್ಲಿ ಶಿಕ್ಷಣ ನೀಡಲಾಗುತ್ತಿವೆ, ಹೀಗಾಗಿ ಸುಳ್ಯ ತಾಲೂಕಿನಲ್ಲೂ ಶಿಕ್ಷಣ ಸಿಗುವಂತಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭ ವಿದ್ಯಾರ್ಥಿನಿಯ ತಂದೆ ಗಂಗಾಧರ ಕುಕ್ಕುಜೆ, ಬಿಜಿಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ, ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾಪಂ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಗುತ್ತಿಗಾರು ಗ್ರಾಪಂ ಮಾಜಿ ಅಧ್ಯಕ್ಷ ಅಚ್ಚುತ ಗುತ್ತಿಗಾರು ಮೊದಲಾದವರು ಉಪಸ್ಥಿತರಿದ್ದರು.
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…
ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ…
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…