ಬೆಂಗಳೂರು(Bengaluru) ನಮ್ಮ ರಾಜಧಾನಿ(Capital). ಆದರೆ ಅಲ್ಲೆ ಕನ್ನಡ ಮಾತು(Kannada Language), ವ್ಯವಹಾರ, ಅಂಗಡಿ ಬೋರ್ಡ್‌ಗಳ(Board) ಅಳವಡಿಕೆ ಇಲ್ಲ. ರಾಜ್ಯದಲ್ಲಿ ಕನ್ನಡ ಕಡ್ಡಾಯವಾಗಬೇಕು..ಅದರಲ್ಲೂ ಬೆಂಗಳೂರಿನಲ್ಲಿ ಕನ್ನಡವನ್ನು ಉಳಿಸುವ ಯೋಜನೆಯಾಗಬೇಕು ಎಂದು ಕನ್ನಡಪರ ಸಂಘಟನೆಗಳು, ಹೋರಾಟಗಾರರು ಧ್ವನಿ ಎತ್ತುತ್ತಲೇ ಇದ್ದಾರೆ. ಇದೀಗ ರಾಜ್ಯ ಸರ್ಕಾರ ಬೆಂಗಳೂರು ನಗರಾದ್ಯಂತ ಎಲ್ಲಾ ಅಂಗಡಿ ಮುಂಗಟ್ಟುಗಳು(Shop), ವಾಣಿಜ್ಯ ಮಳಿಗೆಗಳು(Commercial Complex) ಮೊದಲಾದ ಕಡೆ ಶೇ.60 ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಬೇಕೆಂದು ಆದೇಶ ಮಾಡಿತ್ತು. ಈಗ ನಗರದ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ (Kannada Bord) ಅಳವಡಿಕೆಗೆ ನಿಗದಿ ಪಡಿಸಿದ್ದ ಗಡುವನ್ನು ವಿಸ್ತರಿಸಲಾಗಿದೆ.
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ ಮುಖ್ಯ. 2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ ಎಂದಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೇವಲ 3 ಸಾವಿರ ಉದ್ದಿಮೆದಾರರು ಮಾತ್ರ 60% ನಿಯಮ ಪಾಲಿಸಬೇಕಿದೆ. ಬೆಂಗಳೂರಿನಲ್ಲಿ 55,178 ಉದ್ದಿಮೆದಾರರಿಗೆ ನೋಟಿಸ್ ನೀಡಲಾಗಿದೆ. 60% ಕನ್ನಡ ನಿಯಮ ಉಲ್ಲಂಘನೆ ಮಾಡಿರುವ 55,178 ಉದ್ದಿಮೆದಾರರಿಗೆ ನೋಟಿಸ್ ಹೋಗಿದೆ. ನೋಟಿಸ್ ನೀಡಿದ ಬಳಿಕ ಈ ಉದ್ದಿಮೆದಾರರು 60% ಕನ್ನಡ ನಾಮಫಲಕ ಅಳವಡಿಸಿದ್ದಾರೆ. ನೋಟಿಸ್ ನೀಡಿದ ಬಳಿಕವೂ 60% ನಿಯಮ ಅನುಸರಿಸದ 3,044 ಉದ್ದಿಮೆದಾರರು ಇದ್ದಾರೆ. ಅವರ ವಿರುದ್ಧ ಸರ್ಕಾರ ಶಿಸ್ತುಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದೆ.
Considering that it takes time to change the signage, Karnataka Govt has decided to extend the deadline given to commercial establishments by 2 more weeks so that the 60% signage in Kannada rule can be followed. It is important that we uphold our mother tongue in utmost respect, therefore we expect this law will be duly followed, and we shall see compliance to it by the end of the 2 week extended period.
– ಅಂತರ್ಜಾಲ ಮಾಹಿತಿ
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…