Advertisement
MIRROR FOCUS

ಸಂಸ್ಕರಿಸಿದ ಆಹಾರದ ಕವರ್‌ನಲ್ಲಿ ಉಪ್ಪು ಮತ್ತು ಸಕ್ಕರೆ ಮಾಹಿತಿ ಕಡ್ಡಾಯ | ದಪ್ಪ ಅಕ್ಷರದಲ್ಲಿ ನಮೂದಿಸುವಂತೆ FSSAI ಅಧಿಸೂಚನೆ

Share

ಪ್ಯಾಕಿಂಗ್‌(Packed) ಮಾಡಿದ ಆಹಾರ ಪದಾರ್ಥಗಳಲ್ಲಿ(Food Items) ಇರುವ ಪೋಷಕಾಂಶಗಳ(Nutrition) ಪ್ರಮಾಣ ಕುರಿತ ಮಾಹಿತಿಯನ್ನು ದಪ್ಪ ಅಕ್ಷರಗಳಲ್ಲಿ ಮುದ್ರಿಸುವುದಕ್ಕೆ ಸಂಬಂಧಿಸಿದಂತೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI) ಕರಡು ಅಧಿಸೂಚನೆ ಪ್ರಕಟಿಸಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮಗಳು 2020ಕ್ಕೆ ತಿದ್ದುಪಡಿ ತರುವ ನಿರ್ಧಾರವನ್ನು ಪ್ರಾಧಿಕಾರದ 44ನೇ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಗ್ರಾಹಕರು ಸೇವಿಸುವ ಆಹಾರದಲ್ಲಿನ ಪೌಷ್ಠಿಕಾಂಶದ ಮೌಲ್ಯವನ್ನು ಅರ್ಥಮಾಡಿಕೊಳ್ಳಲು ಹಾಗೂ ಆರೋಗ್ಯಕರ ನಿರ್ಧಾರಗಳನ್ನು ಕೈಗೊಳ್ಳಲು ನೆರವು ನೀಡುವ ಉದ್ದೇಶ ಇದು ಹೊಂದಿದೆ ಎಂದು ಸಚಿವಾಲಯ ಹೇಳಿದೆ.ಪ್ಯಾಕ್ ಮಾಡಿದಲಹಾರ ಪದಾರ್ಥಗಳ ಹೆಚ್ಚಿನ ಸೇವನೆಯು ಹಲವು ರೋಗಗಳಿಗೆ ಕಾರಣವಾಗುತ್ತಿರುವುದರಿಂದ ಇಂತಹ ಆಹಾರ ಪದಾರ್ಥಗಳ ಸೇವನೆ ನಿಯಂತ್ರಿಸಬೇಕೆಂಬುದು ಪೌಷ್ಠಿಕಾಂಶ ತಜ್ಞರ ಅಭಿಪ್ರಾಯವಾಗಿದೆ. ಹೀಗಾಗಿ ಸಾಂಕ್ರಾಮಿಕವಲ್ಲದ ರೋಗಗಳನ್ನು ನಿಯಂತ್ರಿಸಲು ಹೊಸ ನಿಯಮ ಪೂರಕವಾಗಲಿದೆ ಎಂದು ಹೇಳಿದೆ.

ಗ್ರಾಹಕರು ತಾವು ಬಳಸುವ ಆಹಾರದ ಪೊಟ್ಟಣಗಳಲ್ಲಿ ಇರುವ ಪೋಷಕಾಂಶಗಳ ಮೌಲ್ಯದ ಬಗ್ಗೆ ತಿಳಿದುಕೊಳ್ಳಬೇಕು. ಈ ಪದಾರ್ಥಗಳು ಆರೋಗ್ಯಕರವಾಗಿವೆಯೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳುವ ಅಗತ್ಯವಿದೆ. ಇದಕ್ಕೆ ನೆರವಾಗಲು ತಿದ್ದುಪಡಿ ತರಲಾಗಿದೆ ಎಂದು ತಿಳಿಸಿದೆ. ತಿದ್ದುಪಡಿಯ ಕರಡು ಅಧಿಸೂಚನೆಯನ್ನು ಈಗ ಸಲಹೆಗಳು ಮತ್ತು ಲಕ್ಷೇಪಣೆಗಳಿಗಾಗಿ ಸಾರ್ವಜನಿಕ ಡೊಮೇನ್‌ನಲ್ಲಿ ಇರಿಸಲಾಗುತ್ತದೆ. ಪ್ಯಾಕೇಜ್ ಮಾಡಿದ ಆಹಾರ ಕಂಪನಿಗಳು ಶಿಫಾರಸು ಮಾಡಲಾದ ಆಹಾರದ ಪೊಟ್ಟಣಗಳಿಗೆ ಸಂಬಂಧಿಸಿದಂತೆ ಒಟ್ಟು ಸಕ್ಕರೆ, ಒಟ್ಟು ಸ್ಯಾಚುರೇಟೆಡ್‌ ಕೊಬ್ಬು ಮತ್ತು ಸೋಡಿಯಂ ಪ್ರಮಾಣದ ಮಾಹಿತಿಯನ್ನು ದಪ್ಪ ಅಕ್ಷರಗಳಲ್ಲಿ ಮಾಹಿತಿಯನ್ನು ನೀಡಬೇಕಾಗುತ್ತದೆ ಎಂದು ಹೇಳಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

5 minutes ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

14 minutes ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

20 minutes ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

16 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

20 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

20 hours ago