ಕರ್ನಾಟಕದ ಚುನಾವಣೆಗೆ ಇನ್ನೇನು ಕೆಲವೇ ದಿನಗಳಿವೆ. ಈ ಬಾರಿ ಯಾರು ಗೆಲ್ಲುತ್ತಾರೆ? ಯಾವ ಪಕ್ಷಕ್ಕೆ ಬಹುಮತ ಬರಲಿದೆ? ಕೊನೆಗೆ ಯಾರು ಮುಖ್ಯಮಂತ್ರಿ ಗದ್ದುಗೆ ಏರುತ್ತಾರೆ? ಸದ್ಯ ಚುನಾವಣೆ ಫಲಿತಾಂಶ ಬರುವವರೆಗೂ ಇದು ಮಿಲಿಯನ್ ಡಾಲರ್ ಪ್ರಶ್ನೆ! ಆದರೆ ಮಂಡ್ಯದಲ್ಲಿ ನಾಯಿಯೊಂದು ಈ ಬಾರಿ ಯಾರು ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದಿದೆ.
ಮಂಡ್ಯ ನಗರದ ಅಶೋಕನಗರದ ನಿವಾಸಿ ಗೋಪಿ ಎಂಬುವವರ ನಾಯಿಯೆ ಹೀಗೆ ಭವಿಷ್ಯ ಹೇಳಿರೋದು. ಈ ನಾಯಿಯ ಹೆಸರು ಭೈರವ!
ಮಂಡ್ಯದ ಗೋಪಿ ಅವರು ಕಾಲ ಭೈರವೇಶ್ವರನ ಭಕ್ತರಾಗಿದ್ದಾರೆ. ಕಾಲ ಭೈರವನಿಗೆ ಪೂಜೆ ಮಾಡಿದ ಗೋಪಿಯವರು ಮುಂದಿನ ಸಿಎಂ ಯಾರಾಗ್ತಾರೆ ಎಂದು ನಾಯಿ ಬಳಿ ಭವಿಷ್ಯ ಕೇಳಲಾಗಿದೆ.
ಕಳೆದ ಎರಡು ವರ್ಷಗಳಿಂದ ಭೈರವ ಎಂಬ ಈ ನಾಯಿಯ ಸೂಚಿಸುವ ಭವಿಷ್ಯ ನಿಜವಾಗುತ್ತಿದೆ ಎಂಬ ನಂಬಿಕೆಯಿದೆಯಂತೆ. ಬಸವರಾಜ ಬೊಮ್ಮಾಯಿ, ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್ ಅವರ ಮೂರು ಫೋಟೋಗಳನ್ನು ಇಟ್ಟು ಅಪ್ಪಣೆ ಕೇಳಿದ್ದಾರೆ.
ಭೈರವ ನಾಯಿ ಕಚ್ಚಿದ್ದು ಇವರ ಫೋಟೋ!
ಈ ವೇಳೆ ಭೈರವ ನಾಯಿ ಎಚ್. ಡಿ.ಕುಮಾರಸ್ವಾಮಿ ಅವರ ಫೋಟೋವನ್ನು ಬಾಯಲ್ಲಿ ಕಚ್ಚಿ ಇವರೇ ಮುಂದಿನ ಸಿಎಂ ಆಗ್ತಾರೆ ಎಂದು ಸೂಚನೆ ನೀಡಿದೆ!
ಭೈರವ ನಾಯಿಯ ಹಲವು ಭವಿಷ್ಯಗಳು ಕಳೆದ ಎರಡು ವರ್ಷಗಳಿಂದ ನಿಜ ಆಗಿವೆಯಂತೆ. ಅದೇ ರೀತಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ ಎಂದು ಈ ಬಾರಿ ಸೂಚಿಸಿದ ಭವಿಷ್ಯ ಏನಾಗುತ್ತೆ ಎಂದು ಕಾದು ನೋಡಬೇಕಿದೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…