ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

April 14, 2025
6:20 AM
ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ ಆರಂಭವಾಗಲಿದೆ.

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ ಆರಂಭವಾಗಲಿದೆ. ಈ ಬಾರಿ 4.50 ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಿದ್ದು, ಈಗಾಗಲೇ 4.53 ಲಕ್ಷ ಟನ್ ಕಬ್ಬಿಗೆ ರೈತರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಹೇಳಿದ್ದಾರೆ.

ಮಂಡ್ಯ ನಗರದ ಮೈಷುಗರ್ ಕಾರ್ಖಾನೆ ಆವರಣದಲ್ಲಿ ನಡೆದ ರೈತರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿ, ಸಕ್ಕರೆ ಕಾರ್ಖಾನೆ ಆರಂಭಿಸಲು ಯಾವುದೇ ತೊಂದರೆಯಿಲ್ಲ. ಕಳೆದ ಬಾರಿಯಂತೆ ಸರ್ಕಾರದ ನೆರವು ಪಡೆಯದೇ ಈ ಬಾರಿಯೂ ಕಬ್ಬು ಅರೆಯುತ್ತೇವೆ. ಪ್ರತಿದಿನ ಕಾರ್ಖಾನೆಯಲ್ಲಿ ಐದು ಸಾವಿರ ಟನ್ ಕಬ್ಬು ಅರೆಯುವ ಸಾಮರ್ಥ್ಯವಿದ್ದು, ಕನಿಷ್ಟ 4 ಸಾವಿರ ಟನ್ ಕಬ್ಬು ಅರೆಯುತ್ತೇವೆ ಎಂದು ಸಭೆಗೆ ತಿಳಿಸಿದರು. ಎರಡು ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಕಳೆದ ವರ್ಷ ಕಾರ್ಖಾನೆ ಲಾಭಾಂಶ ಕಂಡಿದೆ. 2 ಲಕ್ಷ ಟನ್ ಕಬ್ಬು ಅರೆದು ಪ್ರತಿ ಟನ್‌ಗೆ 122ನಂತೆ 2.44 ಕೋಟಿ ಲಾಭ ಗಳಿಸಿದೆ. ಕಳೆದ ವರ್ಷ ಆಗಸ್ಟ್ 5ರಂದು ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಯುವ ಕಾರ್ಯ ಪ್ರಾರಂಭವಾಗಿ 25000 ಮೆಟ್ರಿಕ್ ಟನ್ ಕಬ್ಬಿನ ಗುರಿಯ ಪೈಕಿ 2,01,900 ಮೆಟ್ರಿಕ್ ಟನ್ ಕಬ್ಬು (ಶೇ 97.5) ನುರಿಸಲಾಗಿದೆ ಎಂದು ತಿಳಿಸಿದರು.

Advertisement

ಕೃಷಿ ಗ್ರಾಮೀಣ ಪರಿಸರ ಸುದ್ದಿಗೆ ಆದ್ಯತೆ ನೀಡುವ ನಮ್ಮ ರೂರಲ್‌ ಮಿರರ್‌ ವ್ಯಾಟ್ಸಪ್‌ ಚಾನೆಲ್‌ಗೆ ಸೇರಲು ಇಲ್ಲಿ ಕ್ಲಿಕ್‌ ಮಾಡಿರಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ
July 1, 2026
7:52 AM
by: ಮಹೇಶ್ ಪುಚ್ಚಪ್ಪಾಡಿ
ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ
July 1, 2026
7:02 AM
by: ದ ರೂರಲ್ ಮಿರರ್.ಕಾಂ
ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
June 30, 2026
11:08 PM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ
June 30, 2026
10:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror