ಕನ್ನಡ ಓದುಗರ ಮನೆಮಗಳಾಗಿದ್ದ “ಮಂಗಳ” ಪತ್ರಿಕೆ ನಿಂತಿತು….! |

October 6, 2023
9:46 AM
ಕನ್ನಡ ಓದುಗರ ಮನೆ ಮಾತಾಗಿದ್ದ ಮಂಗಳ ವಾರಪತ್ರಿಕೆ ತನ್ನ ಪ್ರಕಟಣೆ ನಿಲ್ಲಿಸಿದೆ. ಈ ವಾರ ಕೊನೆಯ ಸಂಚಿಕೆ ಮುದ್ರಣವಾಗಿದೆ.

ಕನ್ನಡ ಓದುಗರ ಮನೆ ಮಾತಾಗಿದ್ದ ಮಂಗಳ ವಾರಪತ್ರಿಕೆ ತನ್ನ ಪ್ರಕಟಣೆ ನಿಲ್ಲಿಸಿದೆ. ಈ ವಾರ ಕೊನೆಯ ಸಂಚಿಕೆ ಮುದ್ರಣಗೊಂಡಿದೆ. ಈ ಬಗ್ಗೆ ಅಧಿಕೃತವಾಗಿ ಪತ್ರಿಕೆ ಸಂಪಾದಕರು ಪ್ರಕಟಣೆಯನ್ನು ನೀಡಿದ್ದಾರೆ. 40 ವರ್ಷಗಳ ಕಾಲ ಕನ್ನಡಿಗರ ಮನೆ ಮಾತಾಗಿದ್ದ ಮಂಗಳ ಪ್ರಸಾರ ಸ್ಥಗಿತಗೊಂಡಿತು.ಅನೇಕ ಓದುಗರ ನಿರಾಸೆಗೊಂಡಿದ್ದಾರೆ.

Advertisement

ಕನ್ನಡ ಪತ್ರಿಕಾರಂಗದಲ್ಲಿ ಗುರುತಿಸಿಕೊಂಡಿದ್ದು ಮಾತ್ರವಲ್ಲ ಓದುಗ ವಲಯದಲ್ಲಿ ವಿಶೇಷ ಸ್ಥಾನಪಡೆದುಕೊಂಡಿದ್ದ ಮಂಗಳ ವಾರಪತ್ರಿಕೆ ಈ ವಾರ ಕೊನೆಯ ಸಂಚಿಕೆ ಪ್ರಕಟಿಸಿದೆ. ಗ್ರಾಮೀಣ ಭಾಗದಿಂದ ತೊಡಗಿ ಅನೇಕರ ಓದು ಆರಂಭವಾಗಿದ್ದೇ ಮಂಗಳ ವಾರಪತ್ರಿಕೆ ಮೂಲಕ. ಮಕ್ಕಳಿಗೆ ಬಾಲಮಂಗಳದ ಮೂಲಕ ಓದು ಆರಂಭಿಸಿ ಮಂಗಳ ಓದುವಂತೆ ಮಾಡಿ ಇತರ ಪತ್ರಿಕೆಗಳೂ ಓದುವ ಹಾಗೆ ಕಳೆದ 40 ವರ್ಷಗಳಲ್ಲಿ ಮಂಗಳ ಮಾಡಿತ್ತು. ಇದೀಗ ಮಂಗಳ ತನ್ನ ಯಾನ ನಿಲ್ಲಿಸಿದೆ.

ಕೊರೋನಾ ನಂತರ ಪತ್ರಿಕೋದ್ಯಮಕ್ಕೆ ಸಾಕಷ್ಟು ಸಂಕಟವಾಗಿತ್ತು. ಡಿಜಿಟಲ್‌ ಮಾಧ್ಯಮಗಳು ವೇಗ ಪಡೆದುಕೊಂಡವು. ಹಾಗಿದ್ದೂ  ಕಳೆದ ಮೂರು ವರ್ಷಗಳ ಕಾಲ ಮಂಗಳವನ್ನು ಮುನ್ನಡೆಸಿದರು.ಇದೀಗ  ಆರ್ಥಿಕ ತುರ್ತು ಎದುರಾಗಿದೆ. ಹೀಗಾಗಿ ಅನಿವಾರ್ಯವಾಗಿ ಪತ್ರಿಕೆ ಮುದ್ರಣ ಸ್ಥಗಿತಗೊಂಡಿದೆ. ಅನೇಕ ಓದುಗರಿಗೆ ನಿರಾಸೆಯುಂಟಾಗಿದೆ.

ಗ್ರಾಮೀಣ  ಭಾಗದಲ್ಲಿ ಟಿವಿ, ಮೊಬೈಲ್‌ ಇಲ್ಲದೇ ಇರುವ ಸಂದರ್ಭದಲ್ಲಿ ಧಾರವಾಹಿ, ಕತೆ, ಕವನ ಸೇರಿದಂತೆ ಸಮಗ್ರ ಓದಿಗೆ ಮಂಗಳ ಪತ್ರಿಕೆ ಬಹುತೇಕ ಮನೆಗಳಿಗೆ ಬರುತ್ತಿತ್ತು. ಈ ಕತೆಗಳು ಕಾರ್ಯಕ್ರಮಗಳ ಸಂದರ್ಭ ಚರ್ಚೆಯೂ ಆಗುತ್ತಿತ್ತು. ಗ್ರಾಮೀಣ ಭಾಗದ ಓದುಗರಿಗೆ ಅಂದು ಮಂಗಳ ವಾರದ ಖಾಯಂ ಪುಸ್ತಕ. ಅನೇಕ ಓದುಗರನ್ನು ಮಂಗಳ ಸೃಷ್ಟಿ ಮಾಡಿತ್ತು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ತೋಟಗಾರಿಕಾ ಹಣ್ಣಿನ ಬೆಳೆಗಳತ್ತ ಚಿತ್ತ | ಜಾಗತಿಕ ಮಾರುಕಟ್ಟೆಗೆ ಭಾರತೀಯ ತಾಜಾ ಹಣ್ಣುಗಳ ಪರಿಚಯ |
April 22, 2025
7:18 AM
by: ದ ರೂರಲ್ ಮಿರರ್.ಕಾಂ
ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಕುರಿತು ಹೆಚ್ಚು ತಿಳುವಳಿಕೆ ನೀಡಬೇಕಾದ ಅಗತ್ಯವಿದೆ
April 22, 2025
6:51 AM
by: The Rural Mirror ಸುದ್ದಿಜಾಲ
ಹಾವು, ಕಾಗೆ, ನಾಯಿಗಳು ಕನಸಿನಲ್ಲಿ ಬಂದ್ರೆ ನಿರ್ಲಕ್ಷ್ಯ ಮಾಡ್ಬೇಡಿ…!
April 22, 2025
6:41 AM
by: ದ ರೂರಲ್ ಮಿರರ್.ಕಾಂ
ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ | ಆಲಿಕಲ್ಲು, ಗುಡುಗು ಸಹಿತ ಭಾರಿ ಮಳೆ
April 22, 2025
6:30 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group