ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3 ಮತ್ತು 4 ರಂದು ನಡೆಯಲಿರುವ ಬಹುಸಂಸ್ಕೃತಿ ಉತ್ಸವದ ಲಾಂಛನವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬಿಡುಗಡೆಗೊಳಿಸಿದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಾರ್ಯಕ್ರಮ ಯಶಸ್ವಿಯಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಆರಂಭಿಸಬೇಕು ಎಂದು ಸೂಚನೆ ನೀಡಿದರು. ಜಿಲ್ಲಾಡಳಿತದ ಸಹಯೋಗದೊಂದಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಬ್ಯಾರಿ, ಕೊಂಕಣಿ, ಅರೆಭಾಷೆ, ಕೊಡವ ಮತ್ತು ಯಕ್ಷಗಾನ ಅಕಾಡೆಮಿಗಳ ಜಂಟಿ ಆಶ್ರಯದಲ್ಲಿ ಬಹುಸಂಸ್ಕೃತಿ ಉತ್ಸವ ನಡೆಯಲಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel