ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3 ಮತ್ತು 4 ರಂದು ನಡೆಯಲಿರುವ ಬಹುಸಂಸ್ಕೃತಿ ಉತ್ಸವದ ಲಾಂಛನವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬಿಡುಗಡೆಗೊಳಿಸಿದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಾರ್ಯಕ್ರಮ ಯಶಸ್ವಿಯಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಆರಂಭಿಸಬೇಕು ಎಂದು ಸೂಚನೆ ನೀಡಿದರು. ಜಿಲ್ಲಾಡಳಿತದ ಸಹಯೋಗದೊಂದಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಬ್ಯಾರಿ, ಕೊಂಕಣಿ, ಅರೆಭಾಷೆ, ಕೊಡವ ಮತ್ತು ಯಕ್ಷಗಾನ ಅಕಾಡೆಮಿಗಳ ಜಂಟಿ ಆಶ್ರಯದಲ್ಲಿ ಬಹುಸಂಸ್ಕೃತಿ ಉತ್ಸವ ನಡೆಯಲಿದೆ.
ಪರಿಸರದ ಮೇಲೆ ಮೈಕ್ರೋಪ್ಲಾಸ್ಟಿಕ್‌ಗಳ ಪರಿಣಾಮವನ್ನು ತಗ್ಗಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಸಂಶೋಧನೆಗಳು ಹೇಳುತ್ತವೆ.…
ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಸುಮಾರು 130 ಹೆಕ್ಟೇರ್‌ಗಳಷ್ಟು ಅರಣ್ಯ ಪ್ರದೇಶ ಸುಟ್ಟುಹೋಗಿರುವ ಬಗ್ಗೆ…
ಕಳೆದ 8 ವರ್ಷಗಳಲ್ಲಿ 11 ಶತಕೋಟಿ ಘನ ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನದನ್ನು…
ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರವನ್ನ ಮೈಮುಲ್ ಅಧ್ಯಕ್ಷ…
ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ ಬಗ್ಗೆ ಚಿಂತಿಸುವ ಪೋಷಕರು ಅವರು ಭವಿಷ್ಯದಲ್ಲಿ ಉಸಿರಾಡುವ …