ಪೌರಕಾರ್ಮಿಕರ ಸೇವಾ ಖಾಯಮಾತಿ, ಸಮಾನ ವೇತನ, ಇತರ ಬೇಡಿಕೆಗಳನ್ನು ಈಡೇರಿಸಲು ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಕೂಡಲೇ ಸರ್ಕಾರ ಸ್ಪಂದನೆ ನೀಡಬೇಕು ಎಂದು ದ.ಕ ಜಿಲ್ಲಾ ಆಮ್ ಆದ್ಮಿ ಪಕ್ಷವು ಒತ್ತಾಯಿಸಿ ದ.ಕ ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಒತ್ತಾಯವನ್ನು ಮಾಡಿದೆ.
ದ.ಕ ಜಿಲ್ಲೆಯ ಎಎಪಿ ಜಿಲ್ಲಾಧ್ಯಕ್ಷರಾದ ಸಂತೋಷ್ ಕಾಮತ್ ನೇತೃತ್ವದಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಎಲ್ಲಾ ಮುಖಂಡರು ಸರ್ವ ರೀತಿಯ ಬೆಂಬಲ ನೀಡಲು ತೀರ್ಮಾನ ಕೈಗೊಳ್ಳಲಾಯಿತು .ಆಮ್ ಆದ್ಮಿ ಪಾರ್ಟಿಯು ದೆಹಲಿ ಹಾಗೂ ಪಂಜಾಬ್‌ನಲ್ಲಿ ಪೌರ ಕಾರ್ಮಿಕರನ್ನು ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿದೆ. ಅನೇಕರನ್ನು ಶಾಸಕರನ್ನಾಗಿ ಮಾಡಿದೆ. ಈ ಮೂಲಕ ಪೌರ ಕಾರ್ಮಿಕರ ಭಾವನೆಗಳಿಗೆ ರಾಜಕೀಯ ಬಲ ದೊರಕಿಸಿ ಅವರ ಸಮಸ್ಯೆಗಳಿಗೂ ಪರಿಹಾರ ನೀಡಲು ಗಮನಹರಿಸಿದೆ. ಈ ನಿಟ್ಟಿನಲ್ಲಿ ಮಂಗಳೂರು ನಗರ ಪಾಲಿಕೆಯಲ್ಲೂ ಕಾರ್ಮಿಕರಿಗೆ ರಾಜಕೀಯ ಬಲ ನೀಡಲು ದ.ಕ ಆಮ್ ಆದ್ಮಿ ಪಕ್ಷ ಸದಾ ಸಿದ್ದವಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಕರ್ನಾಟಕದಲ್ಲಿನ ಆಡಳಿತಾರೂಢ ಬಿಜೆಪಿಗೆ ಪೌರ ಕಾರ್ಮಿಕರ ನೋವು ಕಾಣಿಸುತ್ತಿಲ್ಲ. ಅವರ ಸಮಸ್ಯೆಗೆ ಸ್ಪಂದಿಸುವ ಕನಿಷ್ಠ ಸೌಜನ್ಯವನ್ನು ತೋರಿಸಲಿಲ್ಲ. ಹೀಗಾಗಿ ಪೌರ ಕಾರ್ಮಿಕರು ಪದೇಪದೇ ಪ್ರತಿಭಟನೆ ನಡೆಸುತ್ತಿದ್ದರೂ ಗಮನಹರಿಸಿದ ಬಿಜೆಪಿ ನೇತೃತ್ವದ ಸರ್ಕಾರವು ಸಮಾಜದ ಪ್ರಮುಖ ಕಾರ್ಮಿಕರ ಸಮಸ್ಯೆಯನ್ನು ಕಡೆಗಣಿಸಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಪ್ರತಿಕ್ರಿಯಿಸಿದ್ದಾರೆ.
ಪ್ರತೀ ಊರಿನ ಸ್ವಚ್ಛತೆ ಮತ್ತು ನೈರ್ಮಲ್ಯತೆಗಾಗಿ ಶ್ರಮಿಸುವ ಪೌರಕಾರ್ಮಿಕರಿಗೆ ಸರ್ಕಾರ ಸಮರ್ಪಕ ಅಗತ್ಯ ಸಲಕರಣೆಗಳನ್ನು ನೀಡಿಲ್ಲ. ನಿತ್ಯ ಕಾರ್ಯಕ್ಕೆ ಸುರಕ್ಷತಾ ಕವಚಗಳು, ನಿವೃತ್ತಿ ಸೇವಾ ಸೌಲಭ್ಯಗಳು, ಸಮಾನ ಕೆಲಸಕ್ಕೆ ಸಮಾನ ವೇತನ, ಅರೋಗ್ಯ ಸಮಸ್ಯೆಗಳಿಗೆ ಉತ್ತಮ ವೈದ್ಯಕೀಯ ಉಪಚಾರ, ಗ್ರಾಚ್ಯುಟಿ, ಹೆರಿಗೆ ಭತ್ಯೆ, ರಜಾ ದಿನಗಳನ್ನು ನೀಡಬೇಕು. ಅವರನ್ನು ನೇರ ನೇಮಕಾತಿ ಮಾಡಿಕೊಳ್ಳುವ ವ್ಯವಸ್ಥೆ ಜಾರಿಗೆ ಬರಬೇಕು. ಅಲ್ಲದೇ, ಅಗತ್ಯವಿರುವಲ್ಲಿ ಅವರಿಗಾಗಿ ಶೌಚಾಲಯ ನಿರ್ಮಾಣ ಮಾಡಬೇಕು. ಅವರಿಗೆ ರಜಾ ಸೌಲಭ್ಯ ನೀಡಲು ಸಾಧ್ಯವಾಗದಿದ್ದರೆ ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಹಣ ನೀಡಬೇಕು. ಇಂತಹ ವ್ಯವಸ್ಥೆ ಇಲ್ಲದೇ ತೊಂದರೆಗೀಡಾದ ಪೌರ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸುವತ್ತ ಗಮನ ನೀಡಬೇಕು ಎಂದು ಎಎಪಿ ಒತ್ತಾಯಿಸಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…