ಮಂಗಳೂರು ಅಟೋ ಸ್ಫೋಟದ ಹಿಂದೆ ಉಗ್ರರ ಕೈವಾಡ ಶಂಕೆ | ಚುರುಕುಗೊಂಡ ತನಿಖೆ |

November 20, 2022
12:14 PM

ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಸಂಭವಿಸಿದ ಸ್ಫೋಟದ ಹಿಂದೆ ಉಗ್ರರ ಕೈವಾಡದ ಶಂಕೆಯನ್ನು ಪೊಲೀಸ್‌ ಇಲಾಖೆ ವ್ಯಕ್ತಪಡಿಸಿದ್ದು, ತನಿಖೆ ಚರುಕುಗೊಳಿಸಿದೆ.

Advertisement
Advertisement
Advertisement

ಮಂಗಳೂರಿನ ನಾಗುರಿಯಲ್ಲಿ ಶನಿವಾರ ಸಂಜೆ ಸುಮಾರು 4.30 ರ ಸುಮಾರಿಗೆ  ಚಲಿಸುತ್ತಿದ್ದ  ಆಟೋ ರಿಕ್ಷಾದಲ್ಲಿ ದಿಢೀರ್ ನಿಗೂಢವಾಗಿ ಸ್ಫೋಟವಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು  ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಸ್ಫೋಟದಲ್ಲಿ ಆಟೋದ ಒಳಭಾಗದಲ್ಲಿ ಭಾರೀ ಪ್ರಮಾಣದ ಹಾನಿಯುಂಟಾಗಿದ್ದು, ಪ್ರಯಾಣಿಕ  ಮತ್ತು ಆಟೋ ಚಾಲಕ  ಗಾಯಗೊಂಡಿದ್ದರು.

Advertisement

ತನಿಖೆಯ ವೇಳೆ ಡಿಜಿಪಿ ಪ್ರವೀಣ್ ಸೂದ್‌ ಅವರು,  ಇದು ಉಗ್ರರ ಕೃತ್ಯ ಎಂದು ಟ್ವೀಟ್‌ ಮೂಲಕ ಸ್ಪಷ್ಟಪಡಿಸಿದ್ದಾರೆ. ಪ್ರಕರಣ ಸಂಬಂಧ ಸ್ಪಷ್ಟ ಮಾಹಿತಿಗಳು ಲಭ್ಯವಾಗಿದ್ದು,ಇದು ಆಕಸ್ಮಿಕ ಸ್ಫೋಟವಲ್ಲ. ಇದೊಂದು ಭಯೋತ್ಪಾದಕ ಕೃತ್ಯವಾಗಿದೆ. ಸ್ಫೋಟದ ಸಂದರ್ಭದಲ್ಲಿ ಸುತ್ತಮುತ್ತಲೂ ಜನ ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿಯಾಗಿಲ್ಲ ರಾಜ್ಯ ಪೊಲೀಸರು ಈ ಬಗ್ಗೆ ಸೂಕ್ತ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಆಟೋ ರಿಕ್ಷಾದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯಾಣಿಕ ಹಿಂದಿ ಭಾಷೆ ಮಾತನಾಡುತ್ತಿದ್ದ ಮಾಹಿತಿ ಗೊತ್ತಾಗಿದೆ. ನಿಗೂಢ ಸ್ಫೋಟಗೊಂಡ ಆಟೋದಲ್ಲಿ ಪರಿಶೀಲನೆ ವೇಳೆ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಆಟೋದಲ್ಲಿ ಎರಡು ಬ್ಯಾಟರಿ ನಟ್ಟು, ಬೋಲ್ಟ್, ಸರ್ಕ್ಯೂಟ್ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿವೆ. ಎಫ್‌ಎಸ್‌ಎಲ್ ತಂಡ ವಶಕ್ಕೆ ಪಡೆದುಕೊಂಡ ವಸ್ತುಗಳನ್ನು ಪರೀಕ್ಷೆಗೆ ಒಳಪಡಿಸಿದೆ. ಆಟೋದಲ್ಲಿದ್ದ ಪ್ರಯಾಣಿಕನ ಬಗ್ಗೆ ಅನುಮಾನ ಹೆಚ್ಚಾಗಿದೆ.

Advertisement

ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಅಟೋ ಹತ್ತಿದ ವ್ಯಕ್ತಿ ತನ್ನನ್ನು ಪಂಪ್​​ವೆಲ್ ಸರ್ಕಲ್​​ಗೆ ಬಿಡಲು ಹೇಳಿದ್ದನೆಂದು ತಿಳಿದುಬಂದಿದೆ.

ಉಗ್ರರು ಮಂಗಳೂರು ನಗರದಲ್ಲಿಯೇ  ಸ್ಫೋಟಕ್ಕೆ ಸಂಚು ರೂಪಿಸಿದ್ದರಾ , ಟಾರ್ಗೆಟ್ ಮಾಡಿದ್ದ ಸ್ಥಳ ತಲುಪುವ ಮೊದಲೇ ಬಾಂಬ್ ಸ್ಫೋಟವಾಗಿರುವ ಸಾಧ್ಯತೆಗಳು ಇದೆಯೇ  ಅಥವಾ ಸಮಾಜದಲ್ಲಿಯ ಶಾಂತಿ ಕದಡುವ ಉದ್ದೇಶದಿಂದ ಲಘು ಸಾಮರ್ಥ್ಯದ ಬಾಂಬ್ ಸ್ಫೋಟಿಸಲಾಗಿದೆಯೇ ಎಂಬ ನೆಲೆಯಲ್ಲೂ ತನಿಖೆಗಳು ಆರಂಭವಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ
ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ
November 23, 2024
6:21 AM
by: The Rural Mirror ಸುದ್ದಿಜಾಲ
ಕೃಷಿ ಭೂಮಿ ಉಳಿಸಿಕೊಳ್ಳಲು- ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಒಲವು ಬೆಳೆಸಿ | ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ
November 23, 2024
6:12 AM
by: The Rural Mirror ಸುದ್ದಿಜಾಲ
ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ
November 23, 2024
6:06 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror