ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಸಂಭವಿಸಿದ ಸ್ಫೋಟದ ಹಿಂದೆ ಉಗ್ರರ ಕೈವಾಡದ ಶಂಕೆಯನ್ನು ಪೊಲೀಸ್ ಇಲಾಖೆ ವ್ಯಕ್ತಪಡಿಸಿದ್ದು, ತನಿಖೆ ಚರುಕುಗೊಳಿಸಿದೆ.
ಮಂಗಳೂರಿನ ನಾಗುರಿಯಲ್ಲಿ ಶನಿವಾರ ಸಂಜೆ ಸುಮಾರು 4.30 ರ ಸುಮಾರಿಗೆ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ದಿಢೀರ್ ನಿಗೂಢವಾಗಿ ಸ್ಫೋಟವಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಸ್ಫೋಟದಲ್ಲಿ ಆಟೋದ ಒಳಭಾಗದಲ್ಲಿ ಭಾರೀ ಪ್ರಮಾಣದ ಹಾನಿಯುಂಟಾಗಿದ್ದು, ಪ್ರಯಾಣಿಕ ಮತ್ತು ಆಟೋ ಚಾಲಕ ಗಾಯಗೊಂಡಿದ್ದರು.
ತನಿಖೆಯ ವೇಳೆ ಡಿಜಿಪಿ ಪ್ರವೀಣ್ ಸೂದ್ ಅವರು, ಇದು ಉಗ್ರರ ಕೃತ್ಯ ಎಂದು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಪ್ರಕರಣ ಸಂಬಂಧ ಸ್ಪಷ್ಟ ಮಾಹಿತಿಗಳು ಲಭ್ಯವಾಗಿದ್ದು,ಇದು ಆಕಸ್ಮಿಕ ಸ್ಫೋಟವಲ್ಲ. ಇದೊಂದು ಭಯೋತ್ಪಾದಕ ಕೃತ್ಯವಾಗಿದೆ. ಸ್ಫೋಟದ ಸಂದರ್ಭದಲ್ಲಿ ಸುತ್ತಮುತ್ತಲೂ ಜನ ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿಯಾಗಿಲ್ಲ ರಾಜ್ಯ ಪೊಲೀಸರು ಈ ಬಗ್ಗೆ ಸೂಕ್ತ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಆಟೋ ರಿಕ್ಷಾದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯಾಣಿಕ ಹಿಂದಿ ಭಾಷೆ ಮಾತನಾಡುತ್ತಿದ್ದ ಮಾಹಿತಿ ಗೊತ್ತಾಗಿದೆ. ನಿಗೂಢ ಸ್ಫೋಟಗೊಂಡ ಆಟೋದಲ್ಲಿ ಪರಿಶೀಲನೆ ವೇಳೆ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಆಟೋದಲ್ಲಿ ಎರಡು ಬ್ಯಾಟರಿ ನಟ್ಟು, ಬೋಲ್ಟ್, ಸರ್ಕ್ಯೂಟ್ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿವೆ. ಎಫ್‌ಎಸ್‌ಎಲ್ ತಂಡ ವಶಕ್ಕೆ ಪಡೆದುಕೊಂಡ ವಸ್ತುಗಳನ್ನು ಪರೀಕ್ಷೆಗೆ ಒಳಪಡಿಸಿದೆ. ಆಟೋದಲ್ಲಿದ್ದ ಪ್ರಯಾಣಿಕನ ಬಗ್ಗೆ ಅನುಮಾನ ಹೆಚ್ಚಾಗಿದೆ.
ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಅಟೋ ಹತ್ತಿದ ವ್ಯಕ್ತಿ ತನ್ನನ್ನು ಪಂಪ್ವೆಲ್ ಸರ್ಕಲ್ಗೆ ಬಿಡಲು ಹೇಳಿದ್ದನೆಂದು ತಿಳಿದುಬಂದಿದೆ.
ಉಗ್ರರು ಮಂಗಳೂರು ನಗರದಲ್ಲಿಯೇ ಸ್ಫೋಟಕ್ಕೆ ಸಂಚು ರೂಪಿಸಿದ್ದರಾ , ಟಾರ್ಗೆಟ್ ಮಾಡಿದ್ದ ಸ್ಥಳ ತಲುಪುವ ಮೊದಲೇ ಬಾಂಬ್ ಸ್ಫೋಟವಾಗಿರುವ ಸಾಧ್ಯತೆಗಳು ಇದೆಯೇ ಅಥವಾ ಸಮಾಜದಲ್ಲಿಯ ಶಾಂತಿ ಕದಡುವ ಉದ್ದೇಶದಿಂದ ಲಘು ಸಾಮರ್ಥ್ಯದ ಬಾಂಬ್ ಸ್ಫೋಟಿಸಲಾಗಿದೆಯೇ ಎಂಬ ನೆಲೆಯಲ್ಲೂ ತನಿಖೆಗಳು ಆರಂಭವಾಗಿದೆ.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…