Advertisement
ಸುದ್ದಿಗಳು

ಆಮ್ ಆದ್ಮಿ ಪಕ್ಷದಿಂದ ನಾಗರಿಕ ಕುಂದುಕೊರತೆ ಪೊರ್ಟಲ್ ಬಿಡುಗಡೆ | ಒಂದು ವರ್ಷದೊಳಗೆ ಮಂಗಳೂರಿನಲ್ಲಿ ಎಎಪಿ ಹವಾ | ನಿವೃತ ನ್ಯಾಯಮೂರ್ತಿ ಮೈಕಲ್ ಎಫ್ ಸಲ್ದಾನ ಅಭಿಮತ |

Share

ಆಮ್ ಆದ್ಮಿ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಶ್ರಯದಲ್ಲಿ ನಾಗರಿಕ ಕುಂದುಕೊರತೆ ಪೊರ್ಟಲ್ ಬಿಡುಗಡೆ ಕಾರ್ಯಕ್ರಮ  ಭಾನುವಾರ ಮಂಗಳೂರು ನಗರದ ಬಿಜೈ ಚರ್ಚ್ ಹಾಲ್ ನಲ್ಲಿ ಜರಗಿತು. ನೂತನ ಪೋರ್ಟಲನ್ನು ಬಾಂಬೆ ಮತ್ತು ಕರ್ನಾಟಕ ಹೈ ಕೋರ್ಟ್ ನ ನಿವೃತ ನ್ಯಾಯಮೂರ್ತಿ ಮೈಕಲ್ ಎಫ್ ಸಲ್ದಾನ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು ಇಂದು ಆರಂಭಗೊಂಡ ಈ ಪೋರ್ಟಲ್ ಒಂದು ವರ್ಷದೊಳಗೆ ಮಂಗಳೂರಿನಲ್ಲಿ ಸಂಚಲನ ತರಲಿದ್ದು, ಇಡೀ ದೇಶಕ್ಕೆ ಮಾದರಿಯಾಗಲಿದೆ. ಈ ಪೋರ್ಟಲ್ ಆಡಳಿತ ವ್ಯವಸ್ಥೆಯ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ಇದು ಜನಪರ ಕೆಲಸ ಮಾಡಲು ಕಾರಣವಾಗುತ್ತದೆ ಎಂದರು. ಅರವಿಂದ್ ಕೇಜ್ರಿವಾಲ್ ಒಬ್ಬ ಹಾರ್ಡ್‌ಕೋರ್ ವೃತ್ತಿಪರ ವ್ಯಕ್ತಿ ಆಗಿದ್ದಾರೆ. ಅವರನ್ನು ನಾನು ಹತ್ತಿರದಿಂದ ಕಂಡಿದ್ದೇನೆ. ಅವರು ಮಾಹಿತಿ ಇಟ್ಟುಕೊಂಡು ಸಂಪೂರ್ಣ ಡೇಟಾದೊಂದಿಗೆ ಕಾರ್ಯನಿರ್ವಹಿಸುತ್ತಾರೆ. ಅಂತವರ ನೇತೃತ್ವದಲ್ಲಿರುವ ಪಕ್ಷದೊಂದಿಗೆ ಕೈಜೊಡಿಸುವುದು ತುಂಬಾ ಹೆಮ್ಮೆಯ ವಿಚಾರ. ಇಂದಿನ ಆಡಳಿತದಲ್ಲಿ ಪಕ್ಷಾಂತರ ವಿರೋಧಿ ಕಾನೂನು ಬಹಳಷ್ಟು ದುರ್ಬಳಕೆಯಾಗುತ್ತಿದೆ. ಕಳೆದ ಒಂದು ವರ್ಷದಲ್ಲಿ 167 ಶಾಸಕರನ್ನು ಖರೀದಿಸಲಾಗಿದೆ ಮತ್ತು 6 ಕಡೆಗಳಲ್ಲಿ ಜನರು ಅಧಿಕಾರ ನೀಡಿದ ರಾಜ್ಯ ಸರ್ಕಾರಗಳನ್ನು ಬೀಳಿಸಲಾಗಿದೆ. ಇದರಿಂದ ದೇಶದ ಮೇಲೆ ತುಂಬಾ ಕೆಟ್ಟ ಪರಿಣಾಮ ಉಂಟಾಗುತ್ತದೆ ಎಂದು ನ್ಯಾಯಮೂರ್ತಿ ಮೈಕಲ್ ಎಫ್ ಸಲ್ದಾನ ಅವರು ಅಭಿಪ್ರಾಯ ಪಟ್ಟರು.

ಆಮ್ ಆದ್ಮಿ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ ಕಾಮತ್  ಮಾತನಾಡಿ, ನಮ್ಮ ಪಕ್ಷ ಐದು ವಿಚಾರಗಳಿಗೆ ಹೆಚ್ಚು ಒತ್ತು ನೀಡುತ್ತದೆ. ಶಿಕ್ಷಣ, ಆರೋಗ್ಯ, ಭ್ರಷ್ಟಾಚಾರ ನಿರ್ಮೂಲನೆ, ಮೂಲ ಸೌಕರ್ಯಗಳ ವ್ಯವಸ್ಥೆಯನ್ನು ಕಲ್ಪಿಸುವುದು, ದೇಶಾಭಿಮಾನ.  ಈ ಪಂಚ ಸೂತ್ರ ನಮ್ಮ ಪಕ್ಷದ ಸಿದ್ದಾಂತವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಂಬರುವ ವಿಧಾನ ಸಭಾ ಚುನಾವಣೆ ಹಾಗೂ ಪಾಲಿಕೆ ಚುನಾವಣೆಗೆ ಸಂಬಂಧ ಪಟ್ಟಂತೆ ಕೆಲವೊಂದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಯಿತು.

ಪೋರ್ಟಲ್‌ ರುವಾರಿ ಎಎಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ

ವೇದಿಕೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್ ಎಡಮಲೆ, ಆಮ್ ಆದ್ಮಿ ಪಕ್ಷದ ರಾಜ್ಯ ಜತೆ ಕಾರ್ಯದರ್ಶಿ ವಿವೇಕಾನಂದ ಸಲಿನ್ಸ‌, ಆಮ್ ಆದ್ಮಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಪುಚ್ಚಪಾಡಿ, ಮಹಿಳಾ ವಿಭಾಗದ ಅಧ್ಯಕ್ಷೆ ಬೆನೆಟ್ ನವಿತಾ ಮೊರಾಸ್ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಸಂಚಾಲಕ ವಿಜಯನಾಥ ವಿಠ್ಠಲ ಶೆಟ್ಟಿ, ಪುತ್ತೂರು ವಿಧಾನ ಸಭಾ ಕ್ಷೇತ್ರದ ಸಂಚಾಲಕ ವಿಶುಕುಮಾರ್, ಮಂಗಳೂರು ಉತ್ತರ ಕ್ಷೇತ್ರದ ಮುಖಂಡ ಸಂದೀಪ್ ಶೆಟ್ಟಿ, ದ.ಕ. ಜಿಲ್ಲಾ ಅಪ್ ಖಜಾಂಜಿ ಆವ್ರೆನ್ ಡಿಸೋಜಾ, ಕಚೇರಿ ಸಂಚಾಲಕ ರವಿಪ್ರಸಾದ, ಜತೆ ಕಾರ್ಯದರ್ಶಿ ಡೆಸ್ಮಂಡ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.

ಸಂತೋಷ್ ಕಾಮತ್ ಅವರು ತನ್ನ ಗುರುಗಳಾದ ಎಂ. ಬಿ. ಪುರಾಣಿಕ್ ಹಾಗೂ ತಂದೆ ತಾಯಿಗಳಿಗೆ ಹೂ ನೀಡಿ ಗೌರವ ಸಲ್ಲಿಸಿದರು.‌

ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಸಂಚಾಲಕ ಪ್ರಸಾದ್ ಬಜಿಲಕೇರಿ ಸ್ವಾಗತಿಸಿದರು. ಮಾಧ್ಯಮ ಸಂಚಾಲಕ ವೆಂಕಟೇಶ್ ಎನ್. ಬಾಳಿಗಾ ಮುಖ್ಯ ಅತಿಥಿಗಳ ಪರಿಚಯ ಪತ್ರ ಓದಿದರು. ಡೆಲನ್ ಲೋಬೋ ನಿರುಪಿಸಿದರು. ಬೆನೆಟ್ ನವಿತಾ ಮೊರಾಸ್ ವಂದಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

6 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago