ಇದೇ ತಿಂಗಳ 17 ರಿಂದ 19ರ ವರೆಗೆ ಭಾರಿ ಮಳೆಯಾಗುವ ಸಂಭವವಿರುವುದರಿಂದ ಹಾಗೂ ಜೂನ್ ತಿಂಗಳಾರಂಭದಲ್ಲಿ ಮುಂಗಾರು ಪ್ರಾರಂಭವಾಗುವುದರಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ, ಮಳೆಗಾಲ ಪೂರ್ಣಗೊಂಡ ನಂತರ ಆ ಕಾಮಗಾರಿಗಳನ್ನು ಪ್ರಾರಂಭಿಸುವಂತೆ ಮಹಾನಗರ ಪಾಲಿಕೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಗುಡ್ಡ ಅಗೆದು ನಿವೇಶನ ಸಮತಟ್ಟು ಗೊಳಿಸುವುದರಿಂದ ಗುಡ್ಡ ಕುಸಿದು ಸಾರ್ವಜನಿಕರಿಗೆ ತೊಂದರೆಯಾಗಲಿದೆ, ಆದ ಕಾರಣ ಗುಡ್ಡ ಅಗೆದು ನಿವೇಶನವನ್ನು ಸಮತಟ್ಟುಗೊಳಿಸಿ ಮಣ್ಣು ಸಾಗಾಟ ಮಾಡುವುದನ್ನು ಈ ಸಂದರ್ಭದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಮುಖ್ಯವಾಗಿ ಈಗಾಗಲೇ ಆರಂಭಿಸಿರುವ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಅಕ್ಕಪಕ್ಕದ ನಿವೇಶನಕ್ಕೆ ಹಾನಿಯಾಗದಂತೆ ಎಚ್ಚರಿಕೆ ವಹಿಸುವುದು ಮತ್ತು ತಗ್ಗು ಪ್ರದೇಶವಿರುವ ಸಂದರ್ಭದಲ್ಲಿ ಯಾವುದೇ ಅನಾಹುತವಾಗದ ಹಾಗೆ ತಡೆಗೋಡೆ ನಿರ್ಮಿಸಿ ಸೂಕ್ತ ರೀತಿಯಲ್ಲಿ ಭದ್ರಪಡಿಸಬೇಕು, ತಪ್ಪಿದಲ್ಲಿ ಕೆ.ಎಂ.ಸಿ ಕಾಯ್ದೆಯಂತೆ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಡೀ ಜಿಲ್ಲೆಗೂ ಈ ಮನವಿ ಹೆಚ್ಚು ಸೂಕ್ತವಾಗಿದೆ. ಮಳೆ ಆರಂಭದ ವೇಳೆ ಹಾಗೂ ಜೋರಾದ ಮಳೆಯ ವೇಳೆ ಮಣ್ಣಿನ ಕಾಮಗಾರಿಗಳು ಇದುವರೆಗೂ ಹೆಚ್ಚು ಅಪಾಯವನ್ನು ತಂದಿದೆ. ಮಣ್ಣು ಕುಸಿತ, ಗೋಡೆ ಕುಸಿತದಂತಹ ಘಟನೆಗಳು ಇದುವರೆಗೆ ನಡೆದಿರುವ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮ ಇಡೀ ಜಿಲ್ಲೆಯಲ್ಲೂ ಮುಂದಿನ ದಿನಗಳಲ್ಲಿ ಅನ್ವಯಿಸುವಂತೆ ಜಾರಿಯಾಗಬೇಕಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…