Advertisement
ಸುದ್ದಿಗಳು

ದ ಕ ಜಿಲ್ಲೆ| ದ್ವೇಷ ಹಾಗೂ ವಿವಾದಾತ್ಮಕ ಸಂದೇಶ ಸಾರುವ ಫ್ಲೆಕ್ಸ್‌ ಹಾಕುವವರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿಗಳು ಸೂಚನೆ |

Share

ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಧಿಕೃತ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್ ಹಾಕುವ, ಅನಧಿಕೃತ ಸ್ಥಳಗಳಲ್ಲಿ ದ್ವೇಷಾತ್ಮಕ ಹಾಗೂ ವಿವಾದಾತ್ಮಕ ಸಂದೇಶ ಸಾರುವ ಫ್ಲೆಕ್ಸ್ ಗಳನ್ನು ಹಾಕುವ ಹಾಗೂ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಫ್ಲೆಕ್ಸ್ ಗಳನ್ನು ಹಾಕುವವರ ವಿರುದ್ಧ ಪೊಲೀಸರ ಸಹಕಾರದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದರು.

ಶುಕ್ರವಾರ ಮಂಗಳೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ರಮ ಮರಳುಗಾರಿಕೆ ತಡೆ, ಅನಧಿಕೃತ ಫ್ಲಾಕ್ಸ್ ತೆರವು ಹಾಗೂ ಹಬ್ಬ ಹರಿದಿನಗಳಲ್ಲಿ ಡಿಜೆ ಹಾಗೂ ದ್ವನಿವರ್ಧಕಗಳ ಬಳಕೆಯ ಬಗ್ಗೆ  ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿವಾದಾತ್ಮಕ ಅಥವಾ ದ್ವೇಷ ಸಾರುವ ಸಂದೇಶದ ಫ್ಲೆಕ್ಸ್ ಗಳು ಕಂಡುಬಂದ ಕೂಡಲೇ ಅವುಗಳನ್ನು ಸಂಬಂಧಿಸಿದ ಸ್ಥಳದ ಅಧಿಕಾರಿಗಳು ತೆರವುಗೊಳಿಸಬೇಕು, ಇಲ್ಲಿ ಪೊಲೀಸರ ಸಹಕಾರ ಪಡೆಯಬೇಕು ಹಾಗೂ ಅಧಿಕೃತ ಸ್ಥಳಗಳಲ್ಲಿ ಫ್ಲೆಕ್ಸ್ ಹಾಕುವ ಮುನ್ನ ಸಂಬಂಧಿಸಿದ ಅಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು, ಹಾಗೂ ಅದನ್ನು ಮುದ್ರಿಸಿದವರ ವಿವರ ಅದರಲ್ಲಿರಬೇಕು. ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು, ನಿಟ್ಟಿನಲ್ಲಿ ಫ್ಲೆಕ್ಸ್ ಪ್ರಿಂಟರ್ ಗಳ ಸಭೆ ಕರೆಯಲಾಗುವುದು ಎಂದರು.

ಹೈಕೋರ್ಟ್‍ನ ಆದೇಶ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ವಯ ಡಿಜೆ ಸೆಟ್ ಹಾಗೂ ಧ್ವನಿವರ್ಧಕಗಳನ್ನು ಬಳಸಬೇಕು. ಈ ಬಗ್ಗೆ ಜಿಲ್ಲಾ, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ನಿಭಾಯಿಸಬೇಕಾದ ಕರ್ತವ್ಯಗಳ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು ಅವುಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

16 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

22 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

23 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

23 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

1 day ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

2 days ago