Advertisement
ಸುದ್ದಿಗಳು

ಹಲವು ದಿನಗಳ ನಂತರ ವರುಣನ ಕೃಪೆ : ನೇತ್ರಾವತಿಯಲ್ಲಿ ಮತ್ತೆ ಕಾಣಿಸಿಕೊಂಡ ನೀರಿನ ಹರಿವು

Share

ಮಂಗಳೂರು ಮಹಾನಗರ ಪಾಲಿಕೆಗೆ ನೀರು ಪೂರೈಸುವ ತುಂಬೆ ಡ್ಯಾಂ ನಲ್ಲಿ ನೀರಿನ ಮಟ್ಟ ಕೊಂಚ ಏರಿಕೆ ಕಂಡಿದೆ. ಏಪ್ರಿಲ್ ತಿಂಗಳಿನಿಂದ ಬತ್ತಿ ಹೋಗಿದ್ದ ನೇತ್ರಾವತಿ ನದಿಯಲ್ಲಿ ಒಳಹರಿವು ಗುರುವಾರ ಸುರಿದ ಭಾರೀ ಮಳೆಯಿಂದ ಮತ್ತೆ ಆರಂಭಗೊಂಡಿದೆ ಎಂದು ಖಾಸಗಿ ಪತ್ರಿಕೆಯೊಂದು ವರದಿ ಮಾಡಿದೆ.

ನೇತ್ರಾವತಿಯಲ್ಲಿ ನೀರಿನ ಹರಿವು
ಗುರುವಾರ ಸಾಯಂಕಾಲದಿಂದ ತಡರಾತ್ರಿಯವರೆಗೂ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಯಾದ ನೇತ್ರಾವತಿಯಲ್ಲಿ ನೀರಿನ ಹರಿವು ಆರಂಭಗೊಂಡಿದೆ. ಏಪ್ರಿಲ್ 6 ರಿಂದ ಸಂಪೂರ್ಣ ಬತ್ತಿ ಹೋಗಿದ್ದ ನೇತ್ರಾವತಿ ನದಿಯು ಹರಿವು ಆರಂಭಿಸಿದೆ.

ತುಂಬೆ ಡ್ಯಾಂ ನಲ್ಲಿ ಹೆಚ್ಚಿದ ನೀರು
ನೇತ್ರಾವತಿ ಹರಿವು ಹೆಚ್ಚಿದ್ದರಿಂದ ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟ ಸ್ವಲ್ಪ ಏರಿಕೆ ಕಂಡಿದೆ. ಈ ವಾರದ ಆರಂಭದಲ್ಲಿ 4.03 ಮೀಟರ್​ಗೆ ನೀರು ಇಳಿಕೆ ಆಗಿತ್ತು. ಈ ಕಾರಣದಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರಿಗೆ ಹಾಹಾಕಾರ ಆರಂಭವಾಗಿತ್ತು. ರೇಷನಿಂಗ್ ಮೂಲಕ ಎರಡು ದಿನಗಳಿಗೊಮ್ಮೆ ನೀರು ಪೂರೈಸಲಾಗುತ್ತಿದೆ.

4.03 ಮೀಟರ್​ಗೆ ಇಳಿದ ನೀರಿನ ಪ್ರಮಾಣ
ತುಂಬೆ ಡ್ಯಾಂನಲ್ಲಿ ಈ ವಾರದ ಆರಂಭಕ್ಕೆ 4.03 ಮೀಟರ್​ಗೆ ನೀರು ಇಳಿಕೆ ಆಗಿದೆ. ಪಶ್ಚಿಮ ಘಟ್ಟಗಳಲ್ಲೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವುದು ನೀರಿನ ಒಳ ಹರಿವು ಇಲ್ಲದಂತೆ ಆಗಿದೆ. ಹೀಗಾಗಿ ಮಂಗಳೂರಿನಲ್ಲಿ ಸದ್ಯ ಎರಡು ದಿನಕ್ಕೊಮ್ಮೆ ನೀರು ಕೊಡಲಾಗುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ, ಈ ನಿಯಮದಲ್ಲೂ ಬದಲಾವಣೆ ಆಗುವ ಸಾಧ್ಯತೆ ಇದೆ.

ಈ ಹಿಂದೆ ತುಂಬೆ ಡ್ಯಾಂನಿಂದ ನೀರು ಪೂರೈಕೆ ವ್ಯತ್ಯಯವಾದಾಗ, ಬೇಸಿಗೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯು ಟ್ಯಾಂಕರ್‌ ನೀರಿನ ಮೊರೆ ಹೋಗುತ್ತಿತ್ತು. ಪಾಲಿಕೆ ವ್ಯಾಪ್ತಿಯ 60 ವಾರ್ಡ್​ಗಳಲ್ಲಿ ಹಲವು ಟ್ಯಾಂಕರ್​ಗಳ ಮೂಲಕ ಅಗತ್ಯವಿದ್ದಲ್ಲಿಗೆ ನೀರು ಪೂರೈಸುತ್ತಿತ್ತು.

ಆದರೆ, ಈ ಬಾರಿ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಬಾವಿಗಳಲ್ಲೂ ನೀರು ಇಲ್ಲವಾಗಿದೆ. ಇರುವ ಬಾವಿಗಳ ನೀರು ಕೆಸರಿನಿಂದ ತುಂಬಿದ್ದು, ನೀರು ಇನ್ನೇನು ಬತ್ತಿ ಹೋಗುವುದರಲ್ಲಿದೆ. ಹೀಗಾಗಿ ಹಣ ಕೊಡ್ತೀವಿ ಅಂದ್ರೂ ಕುಡಿಯುವ ನೀರಿನ ಪೂರೈಕೆ ಜಟಿಲವಾಗುತ್ತಿದೆ.

ಕೆರೆಗಳಲ್ಲಿ ನೀರು ಇದ್ರೂ ನೋ ಯೂಸ್!‌
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಗುಜ್ಜರಕೆರೆ, ಕಾವೂರು ಕೆರೆ ಹೀಗೆ ಹಲವು ಕೆರೆಗಳಿದ್ರೂ ಅದರ ನೀರು ಕುಡಿಯಲು ಯೋಗ್ಯವಾಗಿಲ್ಲ. ಶುದ್ಧೀಕರಣ ವ್ಯವಸ್ಥೆ ಇಲ್ಲಿದಿರುವುದರಿಂದ ಅದನ್ನು ಪೂರೈಸುವಂತಿಲ್ಲ.

ಹೀಗಾಗಿ ವಸತಿ ಸಮುಚ್ಚಯ, ವಾಣಿಜ್ಯ ಮಳಿಗೆಗಳು ಸಮರ್ಪಕ ನೀರು ಇಲ್ಲದೇ ಸಂಕಷ್ಟಪಡುವಂತಾಗಿದೆ. ಒಟ್ಟಿನಲ್ಲಿ ಮಹಾನಗರ ಪಾಲಿಕೆ ಇಕ್ಕಟ್ಟಿನಲ್ಲಿ ಸಿಲುಕಿದ್ದು, ಮಳೆ ಸುರಿಯುವುದನ್ನೇ ಮುಂದೆ ನೋಡ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

4 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

8 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

12 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

2 days ago