Advertisement
MIRROR FOCUS

ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮಂಗಳೂರಿಗೆ ದೇಶದಲ್ಲೇ ಮೊದಲ ಸ್ಥಾನ | ‘ಬ್ಯಾಕ್ ಟು ಊರು’ ಪರಿಕಲ್ಪನೆಗೆ, ಅಭಿವೃದ್ಧಿ-ಹೂಡಿಕೆಗಳಿಗೆ ಈ ಮನ್ನಣೆ ಪ್ರಬಲ ದಿಕ್ಸೂಚಿ

Share

ಕಡಲ ನಗರಿ ಮಂಗಳೂರು ದೇಶದಲ್ಲೇ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ ಜಾಗತಿಕವಾಗಿ 49ನೇ ಸ್ಥಾನ ಪಡೆದಿರುವುದು ಬಹಳ ಸಂತೋಷ ಹಾಗೂ ಹೆಮ್ಮೆಯ ಸಂಗತಿ. ಇದು ಕೇವಲ ಕರಾವಳಿಗೆ ಮಾತ್ರವಲ್ಲದೆ, ಜಾಗತಿಕವಾಗಿಯೂ ಮಂಗಳೂರಿನ ಹಿರಿಮೆ ಮತ್ತು ಗರಿಮೆಯನ್ನು ಹೆಚ್ಚಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

ವಿಶ್ವದ ದೊಡ್ಡ ಡೇಟಾ ಸಂಗ್ರಹ ಸಂಸ್ಥೆಯಾದ ನಂಬಿಯೋ (Numbeo) ಇತ್ತೀಚೆಗೆ ಬಿಡುಗಡೆ ಮಾಡಿದ 2025ರ ಮಧ್ಯಭಾಗದ ಸುರಕ್ಷತಾ ಸೂಚ್ಯಂಕದಲ್ಲಿ (Numbeo Safety Index), ಭಾರತದ ಟಾಪ್‌ 10 ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮಂಗಳೂರು ಅತ್ಯಂತ ಸುರಕ್ಷಿತ ನಗರವಾಗಿ ಪ್ರಥಮ ಸ್ಥಾನ ಪಡೆದು ತುಳುನಾಡು ಹಾಗೂ ಕರ್ನಾಟಕದ ಹೆಗ್ಗಳಿಕೆಗೆ ಪಾತ್ರವಾಗಿದೆ. ವಿಶ್ವದ 393 ನಗರಗಳ ಪಟ್ಟಿಯಲ್ಲಿ ಮಂಗಳೂರು 74.2 ಸುರಕ್ಷತಾ ಸೂಚ್ಯಂಕ 49ನೇ ರ‍್ಯಾಂಕಿಂಗ್ ಪಡೆದುಕೊಂಡಿರುವುದು ಬಹಳ ಖುಷಿಪಡುವ ವಿಚಾರ ಎಂದು ಕ್ಯಾ. ಚೌಟ ಪ್ರತಿಕ್ರಿಯಿಸಿದ್ದಾರೆ.

ಮಂಗಳೂರಿನ ಈ ಮಹತ್ತರ ಸಾಧನೆಯು ಕೇವಲ ಅಂಕಿ-ಅಂಶಗಳ ಆಧಾರದ ಮೇಲೆ ಅಲ್ಲ. ಮಂಗಳೂರು ನಗರವನ್ನು ಸುಂದರ ಹಾಗೂ ಸುರಕ್ಷಿತ ನಗರವಾಗಿ ರೂಪಿಸುವಲ್ಲಿ ಇಲ್ಲಿನ ಎಲ್ಲ ನಿವಾಸಿಗಳ ಸಹಕಾರ, ಸಹಭಾಗಿತ್ವ ಹಾಗೂ ನಾಗರಿಕ ಸಂವೇದನಾಶೀಲತೆ ಪಾಲು ಬಹಳ ದೊಡ್ಡದಿದೆ. ಒಂದು ನಗರವು ಇಲ್ಲಿನ ಮೂಲಸೌಕರ್ಯ ಹಾಗೂ ಇತರೆ ನಾಗರಿಕ ಶಿಸ್ತುಗಳಿಂದಾಗಿ ಇಡೀ ದೇಶದಲ್ಲೇ ಅತ್ಯಂತ ಸುರಕ್ಷಿತ ನಗರವಾಗಿ ಗುರುತಿಸುವುದು ಅಷ್ಟೊಂದು ಸುಲಭವಿಲ್ಲ ಎಂದು ಭಾವಿಸುತ್ತೇನೆ. ಹೀಗಿರುವಾಗ, ಇದು ನಮ್ಮ ಮಂಗಳೂರಿನವರು ಸುರಕ್ಷಿತ ಮತ್ತು ನೆಮ್ಮದಿಯ ವಾತಾವರಣದಲ್ಲಿ ಬದುಕುತ್ತಿರುವುದಕ್ಕೆ ಉತ್ತಮ ನಿದರ್ಶನವಾಗಿದೆ. ಮಂಗಳೂರಿಗೆ ಈ ರೀತಿಯ ಮನ್ನಣೆ ಲಭಿಸಿರುವುದು ನಮಗೆಲ್ಲರಿಗೂ ಹೆಮ್ಮೆ ತಂದಿದೆ. ಜತೆಗೆ ಮಂಗಳೂರು ನಗರವನ್ನು ಪ್ರಗತಿ ಪಥದಲ್ಲಿ ಮುನ್ನಡೆಸುವುದಕ್ಕೆ ಮತ್ತಷ್ಟು ಉತ್ತೇಜನ ನೀಡಲಿದೆ ಎಂದು ಅಭಿಪ್ರಾಯಪಟ್ಟರು.

ಜಾಗತಿಕ ಮಟ್ಟದ ಈ ರೀತಿಯ ಮನ್ನಣೆಯು ವಿಶ್ವದೆಲ್ಲೆ ಇರುವ ನಮ್ಮೆಲ್ಲಾ ಯಶಸ್ವಿ ಮಂಗಳೂರಿನವರಿಗೆ  “ಬ್ಯಾಕ್ ಟು ಊರಿಗೆ “(BackToOoru) ಬರಲು ಇನ್ನೊಂದು ಸಕಾರಣ ಹಾಗೂ ಸಕಾಲವೂ ಹೌದು.  ಇಲ್ಲಿನ ವಿಪುಲ ಅವಕಾಶ-ಸಾಧ್ಯತೆಗಳನ್ನು ಬಳಸಿಕೊಳ್ಳಲು ಉತ್ತಮ ಅವಕಾಶ. ಅವರ ಕನಸುಗಳು, ಆಲೋಚನೆಗಳು, ಹೂಡಿಕೆಗಳು ಮತ್ತು ಬೆಳವಣಿಗೆಯ ನಿರೀಕ್ಷೆಗಳಿಗೆ ಮಂಗಳೂರು ನೆಚ್ಚಿನ ನಗರವಾಗಿದೆ. ಈ ಶ್ರೇಯಾಂಕವು ಮಂಗಳೂರು ನಗರದ ಭವಿಷ್ಯದ ಅಭಿವೃದ್ಧಿ ಮತ್ತು ಸಮೃದ್ಧಿಗೆ ಹೊಸ ದಿಕ್ಸೂಚಿ ತೆರೆದಿದ್ದು, ಎಲ್ಲಾ ಮಂಗಳೂರಿಗರೂ ಈ ಯಶಸ್ಸಿನಲ್ಲಿ ಭಾಗಿಯಾಗಿದ್ದು, ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ನಗರವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಉತ್ತೇಜನ ನೀಡಿದೆ ಎಂದು ಕ್ಯಾ. ಚೌಟ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

22 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

22 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

22 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

2 days ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago