Advertisement
MIRROR FOCUS

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

Share

ಮಂಗಳೂರು–ಬೆಂಗಳೂರು ರೈಲು ಮಾರ್ಗದ ಯಡಕುಮೇರಿ–ಶಿರಿಬಾಗಿಲು ನಡುವಿನ ಭೂಕುಸಿತ ಪೀಡಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ಮರುಸ್ಥಾಪನೆ ಕಾಮಗಾರಿ ಪೂರ್ಣಗೊಂಡಿದ್ದು, ಈ ಮಾರ್ಗದಲ್ಲಿ ರೈಲು ಸಂಚಾರವನ್ನು ಪುನರಾರಂಭಿಸಲಾಗಿದೆ. ಹಳಿಯ ಮೇಲಿದ್ದ ಮಣ್ಣು ಹಾಗೂ ಅವಶೇಷಗಳನ್ನು  ತೆರವುಗೊಳಿಸಿದ ಬಳಿಕ, ಸಂಜೆ 7.25ಕ್ಕೆ ಹಳಿಯನ್ನು ಸುರಕ್ಷಿತ ಎಂದು ಪ್ರಮಾಣೀಕರಿಸಿ ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಭಾರೀ ಮಳೆಯಿಂದ ಗುಡ್ಡ ಕುಸಿದು ಹಳಿಯ ಮೇಲೆ ಮಣ್ಣು, ಕಲ್ಲು ಮತ್ತು ಮರಗಳು ಬಿದ್ದ ಪರಿಣಾಮ ಹಲವು ರೈಲುಗಳ ಸಂಚಾರ ರದ್ದಾಗಿದ್ದರೆ, ಕೆಲವು ರೈಲುಗಳನ್ನು ಮಾರ್ಗ ಬದಲಿಸಿ ಸಂಚರಿಸಲಾಗುತ್ತಿತ್ತು.

ದಕ್ಷಿಣ ಪಶ್ಚಿಮ ರೈಲ್ವೆಯ ಸಿಬ್ಬಂದಿ ನಿರಂತರವಾಗಿ ಮಣ್ಣು ಹಾಗೂ ಅವಶೇಷ ತೆರವುಗೊಳಿಸಿ, ಹಳಿ ಸುರಕ್ಷತೆಯನ್ನು ಪರಿಶೀಲಿಸಿದ ಬಳಿಕ ರೈಲುಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಮಂಗಳೂರು–ಬೆಂಗಳೂರು ನಡುವಿನ ಪ್ರಯಾಣಿಕರಿಗೆ ಇದರಿಂದ ಬಹಳಷ್ಟು ನಿರಾಳತೆ ಸಿಕ್ಕಿದೆ.

ದಕ್ಷಿಣ ಪಶ್ಚಿಮ ರೈಲ್ವೆ ಪ್ರಕಟಿಸಿರುವ ಬುಲೆಟಿನ್‌ ಪ್ರಕಾರ, ಯಡಕುಮೇರಿ ಸಮೀಪ ಕಿ.ಮೀ. 73/700–500 ಭಾಗದಲ್ಲಿ ಮಣ್ಣು ತೆರವು ಹಾಗೂ ಹಳಿ ಮರುಸ್ಥಾಪನೆ ಕಾರ್ಯ ಪೂರ್ಣಗೊಂಡಿದೆ. ಆದರೆ ಸುರಕ್ಷತಾ ಕ್ರಮವಾಗಿ ಈ ಪ್ರದೇಶದಲ್ಲಿ ತಾತ್ಕಾಲಿಕವಾಗಿ ಗಂಟೆಗೆ 10 ಕಿ.ಮೀ. ವೇಗ ಮಿತಿ ವಿಧಿಸಲಾಗಿದೆ. ಹೀಗಾಗಿ ಕೆಲ ರೈಲುಗಳ ವೇಳಾಪಟ್ಟಿಯಲ್ಲಿ ಸಣ್ಣ ಪ್ರಮಾಣದ ಬದಲಾವಣೆ ಅಥವಾ ವಿಳಂಬ ಉಂಟಾಗುವ ಸಾಧ್ಯತೆ ಇದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದ ಯಡಕುಮೇರಿ ಭಾಗದಲ್ಲಿ ಗುಡ್ಡ ಕುಸಿದು ರೈಲು ಹಳಿ ಮುಚ್ಚಲ್ಪಟ್ಟಿತ್ತು. ಇದರ ಪರಿಣಾಮವಾಗಿ ಮಂಗಳೂರು–ಬೆಂಗಳೂರು ಮಾರ್ಗದ ಹಲವು ಎಕ್ಸ್‌ಪ್ರೆಸ್ ರೈಲುಗಳು ರದ್ದಾಗಿದ್ದರೆ, ಕೆಲವು ರೈಲುಗಳನ್ನು ಪರ್ಯಾಯ ಮಾರ್ಗದ ಮೂಲಕ ಓಡಿಸಲಾಗಿತ್ತು. ಈಗ ಕಾಮಗಾರಿ ಪೂರ್ಣಗೊಂಡಿರುವುದರಿಂದ ಸಾಮಾನ್ಯ ರೈಲು ಸಂಚಾರ ಮತ್ತೆ ಆರಂಭವಾಗಿದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Train services on the Mangaluru–Bengaluru route have resumed after South Western Railway completed mud clearance and track restoration between Yedakumeri and Shiribagilu. The route had been disrupted by landslides triggered by heavy rainfall.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

18 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

24 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

24 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago