ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ ಓಡಾಟ ಆರಂಭಿಸಿದ್ದಾರೆ. ಈ ಸಂದರ್ಭ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಯ ಕನಸನ್ನು ತೆರೆದಿರಿಸಿದ್ದಾರೆ.
ಸುಳ್ಯ ಕ್ಷೇತ್ರದ ಪ್ರವಾಸದ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ, ದ ಕ ಜಿಲ್ಲೆಯು ಕೃಷಿ ಆಧಾರಿತವಾದ ಜಿಲ್ಲೆ, ಕೃಷಿಯೂ ಇಲ್ಲಿ ಪ್ರಮುಖ ಕ್ಷೇತ್ರವಾಗಿದೆ. ಸುಳ್ಯದಲ್ಲಿ ಅಡಿಕೆ ಹಾಗೂ ರಬ್ಬರ್ ಬೆಳೆಗಾರರು ಹೆಚ್ಚಾಗಿದ್ದಾರೆ. ಹೀಗಾಗಿ ಈ ಕ್ಷೇತ್ರದ ಸಮಸ್ಯೆ ಬಗ್ಗೆ ಅಧ್ಯಯನ ಮಾಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ. ಅಡಿಕೆ ಹಳದಿ ಎಲೆರೋಗವು ಸಾಮಾಜಿಕ ಸಮಸ್ಯೆಯಾಗಿದೆ. ಈ ರೋಗದ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಅದಕ್ಕೆ ಸಂಪೂರ್ಣ ಪರಿಹಾರಕ್ಕಾಗಿ ಪ್ರಯತ್ನ ಮಾಡಲಾಗುವುದು. ಸಮಸ್ಯೆ ಸ್ಪಂದಿಸುವುದು ಒಂದು ಭಾಗವಾದರೆ, ಶಾಶ್ವತ ಪರಿಹಾರ ಇನ್ನೊಂದು ಭಾಗ. ಇದಕ್ಕಾಗಿ ಅಧ್ಯಯನ ಕೇಂದ್ರ ಸ್ಥಾಪನೆ ಹಾಗೂ ಸೂಕ್ತ ಅನುದಾನ ಒದಗಿಸುವುದು ಕೂಡಾ ಇನ್ನೊಂದು ಭಾಗವಾಗಿದೆ ಎಂದರು.
ದಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ. ಇದೊಂದು ವಿಶೇಷವಾದ ಜಿಲ್ಲೆಯಾಗಿದ್ದು ಜನರ ಆಕಾಂಕ್ಷೆಗೆ ಅನುಗುಣವಾಗಿ ಸಮಗ್ರ ಅಭಿವೃದ್ಧಿಯ ಚಿಂತನೆ ಇದೆ. ವಿಕಸಿತ ಭಾರತವಾಗಲು ಏನೆಲ್ಲಾ ಅಗತ್ಯ ಇದೆ, ಅದೆಲ್ಲಾ ಮಾಡಲಾಗುವುದು ಎಂದ ಬ್ರಿಜೇಶ್ ಚೌಟ, ಸುಳ್ಯ ತಾಲೂಕು ಮೂಲಭೂತಸೌಲಭ್ಯಗಳ ಅಭಿವೃದ್ಧಿಗೆ ಅಗತ್ಯ ಕ್ರಮಗಳ ಬಗ್ಗೆ ಶಾಸಕರ ಜೊತೆ ಚರ್ಚಿಸಿ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
Mangalore Constituency BJP candidate Brijesh Chowta has started campain across Sullia Assembly Constituency. On this occasion, he has opened the dream of agriculture and rural development.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…