Advertisement
ಮಾಹಿತಿ

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

Share

ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ಒದಗಿಸುವ ಉದ್ದೇಶದಿಂದ ಎಕ್ಸ್‌ಪರ್ಟ್ ಕಾಲೇಜು, ಕ್ಯಾಲಿಬರ್ ಹಾಗೂ ಕೋಜೆಂಟ್ ಇ-ಸರ್ವಿಸಸ್ ಕಂಪೆನಿಗಳ ಸಹಯೋಗದಲ್ಲಿ ವಿವಿಧ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನವನ್ನು ಜುಲೈ 30ರಂದು ಆಯೋಜಿಸಲಾಗಿದೆ.

ಸಂದರ್ಶನವು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪಡೀಲ್‌ನ ಪ್ರಜಾಸೌಧದ ನೆಲಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ.

ಯಾವ್ಯಾವ ಹುದ್ದೆಗಳಿಗೆ ನೇಮಕಾತಿ?

ನೇರ ಸಂದರ್ಶನದ ಮೂಲಕ ಕೆಳಕಂಡ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

  • ಹಾಸ್ಟೆಲ್ ವಾರ್ಡನ್
  • ಕಸ್ಟಮರ್ ಸಪೋರ್ಟ್ ಅಸೋಸಿಯೇಟ್
  • ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್

ಯಾರು ಭಾಗವಹಿಸಬಹುದು? :  ಪಿ.ಯು.ಸಿ., ಡಿಪ್ಲೊಮಾ, ಯಾವುದೇ ಪದವಿ ಹಾಗೂ ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾ (Resume/Bio-data) ಜೊತೆ ಕಡ್ಡಾಯವಾಗಿ ಹಾಜರಾಗಬೇಕು.

ಕೆಲಸದ ಸ್ಥಳ :  ಆಯ್ಕೆಯಾದ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಉದ್ಯೋಗಾವಕಾಶ ದೊರೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

A direct recruitment interview for the posts of Hostel Warden, Customer Support Associate, and Credit Card Sales Team Leader will be held on July 30 from 10 AM to 1 PM at the District Employment Exchange Office, Padil, Mangaluru. Candidates with PUC, Diploma, Degree, or higher qualifications are eligible to attend.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

2 hours ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

6 hours ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

1 day ago

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

2 days ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

3 days ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

3 days ago