Advertisement
ಮಾಹಿತಿ

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

Share

ಮಂಗಳೂರು ಮತ್ತು ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 20 ಮತ್ತು 21ರಂದು ಮಂಗಳೂರಿನಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಪ್ರಕಟಣೆ ತಿಳಿಸಿದೆ.

ಆ.20ರಂದು ವಿವಿಧ ಹುದ್ದೆಗಳಿಗೆ ಸಂದರ್ಶನ : ಕಲ್ಚರಲ್ ಹೈವೇ, ಲೆಕ್ಸಾ ಲೈಟಿಂಗ್ ಟೆಕ್ನಲಾಜೀಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಬ್ಲಿಂಕಿಟ್ ಕಂಪೆನಿಗಳ ವತಿಯಿಂದ ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಗಸ್ಟ್ 20ರಂದು ನೇರ ಸಂದರ್ಶನ ನಡೆಯಲಿದೆ.

ಸಂದರ್ಶನದ ಸ್ಥಳ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಪಡೀಲ್, ಜಿಲ್ಲಾಡಳಿತ ಕೇಂದ್ರ, ಮಂಗಳೂರು
ಸಮಯ: ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ.

ಈ ಕೆಳಗಿನ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ:

  • ಎಚ್.ಆರ್. ಇಂಚಾರ್ಜ್
  • ಪ್ರೊಡಕ್ಷನ್ ಅಸಿಸ್ಟೆಂಟ್ ಸೂಪರ್‌ವೈಸರ್
  • ಪ್ರೊಡಕ್ಷನ್ ಹೆಲ್ಪರ್
  • ಎಲೆಕ್ಟ್ರಿಷಿಯನ್
  • ಎಆರ್‌ಸಿ ವೆಲ್ಡರ್
  • ಆಫೀಸ್ ಅಸಿಸ್ಟೆಂಟ್
  • ವಿಎಂಸಿ/ಸಿಎನ್‌ಸಿ
  • ಸೂಪರ್‌ವೈಸರ್
  • ಅಸಿಸ್ಟೆಂಟ್ ಸ್ಟೋರ್ ಮ್ಯಾನೇಜರ್
  • ಫ್ರಂಟ್ ಆಫೀಸ್/ಫ್ರಂಟ್ ಡೆಸ್ಕ್
  • ಬಿಡಿಎಮ್
  • ಸೇಲ್ಸ್ ಎಕ್ಸಿಕ್ಯೂಟಿವ್
  • ಹೌಸ್ ಕೀಪಿಂಗ್
  • ಪಿಕ್ಕರ್
  • ಪ್ಯಾಕರ್

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಪಾಸ್/ಫೇಲ್, ಪಿಯುಸಿ, ಯಾವುದೇ ಪದವಿ, ಡಿಪ್ಲೊಮಾ ಅಥವಾ ಐಟಿಐ (ಎಲೆಕ್ಟ್ರಿಕಲ್/ಎಲೆಕ್ಟ್ರಿಷಿಯನ್).

ವಯೋಮಿತಿ: 18ರಿಂದ 35 ವರ್ಷ.  ಈ ಸಂದರ್ಶನದಲ್ಲಿ ಪುರುಷ ಅಭ್ಯರ್ಥಿಗಳು ಮಾತ್ರ ಭಾಗವಹಿಸಬಹುದು. ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ಹಾಜರಾಗಬೇಕು.

ಆ.21ರಂದು ಆಟೋಮೊಬೈಲ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ :  ಮಾ ದುರ್ಗಾ ಮೊಬಿಲಿಟಿ ಪ್ರೈವೇಟ್ ಲಿಮಿಟೆಡ್ ಹಾಗೂ ನವದುರ್ಗಾ ಮೋಟರ್ಸ್ ಎಲ್‌ಎಲ್‌ಪಿ ವತಿಯಿಂದ ಮಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಗಸ್ಟ್ 21ರಂದು ನೇರ ಸಂದರ್ಶನ ನಡೆಯಲಿದೆ.

ಸಂದರ್ಶನದ ಸ್ಥಳ: ಕೊಟ್ಟಾರ ಚೌಕಿ, ಟಿವಿಎಸ್ ನವದುರ್ಗಾ ಮೋಟರ್ಸ್ ಎಲ್‌ಎಲ್‌ಪಿ, ಮಂಗಳೂರು
ಸಮಯ: ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ.

ನೇಮಕಾತಿ ನಡೆಯಲಿರುವ ಹುದ್ದೆಗಳು:

  • ಮೆಕ್ಯಾನಿಕ್
  • ಮೆಕ್ಯಾನಿಕ್ (ಹೆವಿ ವೆಹಿಕಲ್)
  • ಟೆಕ್ನಿಷಿಯನ್ (2 ವೀಲರ್)
  • ಅಸಿಸ್ಟೆಂಟ್/ಹೆಲ್ಪರ್

ವಿದ್ಯಾರ್ಹತೆ: ಐಟಿಐ, ಡಿಪ್ಲೊಮಾ, ಎಂ.ಡಿ/ಎಂ.ಎಂ.ವಿ, ಮೆಕ್ಯಾನಿಕಲ್, ಆಟೋಮೊಬೈಲ್ ಅಥವಾ ಆಟೋ ಎಲೆಕ್ಟ್ರಿಕಲ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದು.

ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ತಿಳಿಸಿದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

The District Employment Exchange, Mangaluru, has announced direct recruitment interviews on August 20 and 21 for multiple vacancies in Mangaluru and Bengaluru. On August 20, Cultural Highway, Lexa Lighting Technologies and Blinkit will recruit for positions including HR, production, electrical, welding, sales, housekeeping, picker and packer roles. On August 21, Ma Durga Mobility and Navadurga Motors will recruit mechanics, technicians and assistant/helper positions. Candidates should attend the respective interviews with their biodata.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

2 days ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

2 days ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

2 days ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 days ago