ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ – 10 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ; ಆನ್‌ಲೈನ್ ನೋಂದಣಿ ಆರಂಭ

November 26, 2026
8:19 PM
ನವೆಂಬರ್ 30ರಂದು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ಕರಾವಳಿ ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದೆ. 10 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಮತ್ತು 200ಕ್ಕೂ ಅಧಿಕ ಉದ್ಯೋಗದಾತರು ಭಾಗವಹಿಸುವ ನಿರೀಕ್ಷೆಯಿದೆ. ಆನ್‌ಲೈನ್ ನೋಂದಣಿ ಕಡ್ಡಾಯವಾಗಿದ್ದು, ಸಹಾಯವಾಣಿ ಸಂಖ್ಯೆ 9606494308 ಸಂಪರ್ಕಿಸಬಹುದು.

ಕರಾವಳಿ ಪ್ರದೇಶದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ನವೆಂಬರ್ 30ರಂದು ಮಂಗಳೂರಿನಲ್ಲಿ ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ನಗರದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಉದ್ಯೋಗ ಮೇಳ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಉದ್ಯೋಗ ಮೇಳದಲ್ಲಿ 10 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಹಾಗೂ 200ಕ್ಕೂ ಹೆಚ್ಚು ಉದ್ಯೋಗದಾತರು ಭಾಗವಹಿಸುವ ನಿರೀಕ್ಷೆಯಿದೆ. ವಿವಿಧ ಸಂಸ್ಥೆಗಳ ಉದ್ಯೋಗದಾತರು ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗಾವಕಾಶ ಕಲ್ಪಿಸಲಿದ್ದಾರೆ.

ಉದ್ಯೋಗಾಕಾಂಕ್ಷಿಗಳು ನೋಂದಣಿ ಮಾಡುವುದು ಹೇಗೆ? : ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.

ನೋಂದಣಿಯ ಹಂತಗಳು:

  1. ಉದ್ಯೋಗ ಮೇಳದ ಅಧಿಕೃತ ಪೋರ್ಟಲ್‌ಗೆ ಭೇಟಿ ನೀಡಬೇಕು.

  2. ಅಲ್ಲಿ ‘ಅಭ್ಯರ್ಥಿ’ ಆಯ್ಕೆಯನ್ನು ಕ್ಲಿಕ್ ಮಾಡಿ ನೋಂದಣಿ ಮಾಡಿಕೊಳ್ಳಬೇಕು.

  3. ಸಂಪರ್ಕ ಸಂಖ್ಯೆಯನ್ನು ನಮೂದಿಸಿದ ಬಳಿಕ ವಾಟ್ಸ್‌ಆ್ಯಪ್ ಮೂಲಕ ಬರುವ ಒಟಿಪಿಯನ್ನು ದಾಖಲಿಸಬೇಕು.

  4. ಅಭ್ಯರ್ಥಿಯ ಪ್ರೊಫೈಲ್‌ಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬೇಕು.

ಉದ್ಯೋಗದಾತರ ನೋಂದಣಿ ಹೇಗೆ? : ಉದ್ಯೋಗ ನೀಡಲು ಆಸಕ್ತಿ ಹೊಂದಿರುವ ಸಂಸ್ಥೆಗಳು ಮತ್ತು ಉದ್ಯೋಗದಾತರೂ ಇದೇ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬಹುದು.

  1. ಉದ್ಯೋಗ ಮೇಳದ ಪೋರ್ಟಲ್‌ಗೆ ಭೇಟಿ ನೀಡಬೇಕು.

  2. ‘ಉದ್ಯೋಗದಾತ’ ಆಯ್ಕೆಯನ್ನು ಕ್ಲಿಕ್ ಮಾಡಿ ನೋಂದಣಿ ಮಾಡಿಕೊಳ್ಳಬೇಕು.

  3. ಸಂಪರ್ಕ ಸಂಖ್ಯೆಯನ್ನು ನಮೂದಿಸಿ ವಾಟ್ಸ್‌ಆ್ಯಪ್ ಮೂಲಕ ಬರುವ ಒಟಿಪಿಯನ್ನು ದಾಖಲಿಸಬೇಕು.

  4. ಸಂಸ್ಥೆಯ ಎಲ್ಲ ವಿವರಗಳನ್ನು ಭರ್ತಿ ಮಾಡಿ ಉದ್ಯೋಗ ಪ್ರಕಟಣೆಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

ಉದ್ಯೋಗ ಮೇಳಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 9606494308 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕರಾವಳಿ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಒಂದೇ ವೇದಿಕೆಯಲ್ಲಿ ಹಲವು ಸಂಸ್ಥೆಗಳನ್ನು ಸಂಪರ್ಕಿಸಲು ಮತ್ತು ನೇರ ಸಂದರ್ಶನದಲ್ಲಿ ಭಾಗವಹಿಸಲು ಈ ಉದ್ಯೋಗ ಮೇಳ ಅವಕಾಶ ಕಲ್ಪಿಸಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಕಿಮೋಥೆರಪಿ: ಮೂರು ತಿಂಗಳಲ್ಲಿ ಡೇ-ಕೇರ್ ಕೇಂದ್ರ ಸ್ಥಾಪನೆಗೆ ಗುರಿ
November 25, 2026
10:48 PM
by: ದ ರೂರಲ್ ಮಿರರ್.ಕಾಂ
ಜನವರಿಯಲ್ಲಿ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆ? ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟ – ಸಚಿವ ಖಂಡ್ರೆ
November 25, 2026
10:30 PM
by: ದ ರೂರಲ್ ಮಿರರ್.ಕಾಂ
ಕರಾವಳಿಯಲ್ಲಿ ಮತ್ತೆ ಮಳೆ- ಸುಳ್ಯ, ಕಡಬ, ಪುತ್ತೂರಿನ ಕೆಲವೆಡೆ ಗುಡುಗು ಸಹಿತ ಮಳೆ
November 25, 2026
9:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.11.2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ : ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ
November 25, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror