ಕರಾವಳಿ ಪ್ರದೇಶದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ನವೆಂಬರ್ 30ರಂದು ಮಂಗಳೂರಿನಲ್ಲಿ ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ನಗರದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಉದ್ಯೋಗ ಮೇಳ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಉದ್ಯೋಗ ಮೇಳದಲ್ಲಿ 10 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಹಾಗೂ 200ಕ್ಕೂ ಹೆಚ್ಚು ಉದ್ಯೋಗದಾತರು ಭಾಗವಹಿಸುವ ನಿರೀಕ್ಷೆಯಿದೆ. ವಿವಿಧ ಸಂಸ್ಥೆಗಳ ಉದ್ಯೋಗದಾತರು ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗಾವಕಾಶ ಕಲ್ಪಿಸಲಿದ್ದಾರೆ.
ಉದ್ಯೋಗಾಕಾಂಕ್ಷಿಗಳು ನೋಂದಣಿ ಮಾಡುವುದು ಹೇಗೆ? : ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.
ನೋಂದಣಿಯ ಹಂತಗಳು:
ಉದ್ಯೋಗ ಮೇಳದ ಅಧಿಕೃತ ಪೋರ್ಟಲ್ಗೆ ಭೇಟಿ ನೀಡಬೇಕು.
ಅಲ್ಲಿ ‘ಅಭ್ಯರ್ಥಿ’ ಆಯ್ಕೆಯನ್ನು ಕ್ಲಿಕ್ ಮಾಡಿ ನೋಂದಣಿ ಮಾಡಿಕೊಳ್ಳಬೇಕು.
ಸಂಪರ್ಕ ಸಂಖ್ಯೆಯನ್ನು ನಮೂದಿಸಿದ ಬಳಿಕ ವಾಟ್ಸ್ಆ್ಯಪ್ ಮೂಲಕ ಬರುವ ಒಟಿಪಿಯನ್ನು ದಾಖಲಿಸಬೇಕು.
ಅಭ್ಯರ್ಥಿಯ ಪ್ರೊಫೈಲ್ಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬೇಕು.
ಉದ್ಯೋಗದಾತರ ನೋಂದಣಿ ಹೇಗೆ? : ಉದ್ಯೋಗ ನೀಡಲು ಆಸಕ್ತಿ ಹೊಂದಿರುವ ಸಂಸ್ಥೆಗಳು ಮತ್ತು ಉದ್ಯೋಗದಾತರೂ ಇದೇ ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಳ್ಳಬಹುದು.
ಉದ್ಯೋಗ ಮೇಳದ ಪೋರ್ಟಲ್ಗೆ ಭೇಟಿ ನೀಡಬೇಕು.
‘ಉದ್ಯೋಗದಾತ’ ಆಯ್ಕೆಯನ್ನು ಕ್ಲಿಕ್ ಮಾಡಿ ನೋಂದಣಿ ಮಾಡಿಕೊಳ್ಳಬೇಕು.
ಸಂಪರ್ಕ ಸಂಖ್ಯೆಯನ್ನು ನಮೂದಿಸಿ ವಾಟ್ಸ್ಆ್ಯಪ್ ಮೂಲಕ ಬರುವ ಒಟಿಪಿಯನ್ನು ದಾಖಲಿಸಬೇಕು.
ಸಂಸ್ಥೆಯ ಎಲ್ಲ ವಿವರಗಳನ್ನು ಭರ್ತಿ ಮಾಡಿ ಉದ್ಯೋಗ ಪ್ರಕಟಣೆಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
ಉದ್ಯೋಗ ಮೇಳಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 9606494308 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕರಾವಳಿ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಒಂದೇ ವೇದಿಕೆಯಲ್ಲಿ ಹಲವು ಸಂಸ್ಥೆಗಳನ್ನು ಸಂಪರ್ಕಿಸಲು ಮತ್ತು ನೇರ ಸಂದರ್ಶನದಲ್ಲಿ ಭಾಗವಹಿಸಲು ಈ ಉದ್ಯೋಗ ಮೇಳ ಅವಕಾಶ ಕಲ್ಪಿಸಲಿದೆ.
ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮುಂದಿನ ಮೂರು ತಿಂಗಳೊಳಗೆ ಕಿಮೋಥೆರಪಿ ಡೇ-ಕೇರ್ ಕೇಂದ್ರಗಳನ್ನು ಸ್ಥಾಪಿಸಲು…
ರಾಜ್ಯದ 30 ಜಿಲ್ಲೆಗಳ 1,101 ಜಿಲ್ಲಾ ಪಂಚಾಯತ್ ಕ್ಷೇತ್ರಗಳು ಹಾಗೂ 234 ತಾಲೂಕು…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿಧೆಡೆ ಹಾಗೂ ಕಡಬ, ಪುತ್ತೂರು ತಾಲೂಕಿನ…
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದ್ದು, ಕರಾವಳಿ, ಮಲೆನಾಡು…
ವಿಶ್ವ ಚೆಸ್ ಚಾಂಪಿಯನ್ಷಿಪ್ನ ಮೊದಲ ಪಂದ್ಯದಲ್ಲಿ ಭಾರತದ ಡಿ. ಗುಕೇಶ್ ಮತ್ತು ಉಜ್ಬೇಕಿಸ್ತಾನದ…
ದೇಶದ 37 ನಗರಗಳಲ್ಲಿ ಕನಿಷ್ಠ ವೇತನಕ್ಕಿಂತ ಜೀವನ ವೆಚ್ಚ (cost of living)…