Advertisement
MIRROR FOCUS

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

Share

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ ಅಗೆತ, ಗುಡ್ಡ ಅಗೆತ ಹಾಗೂ ಮಣ್ಣು ಅಗೆತ ಕಾಮಗಾರಿಗಳನ್ನು ಕೈಗೊಳ್ಳದಂತೆ ಸೂಚನೆ ನೀಡಲಾಗಿದೆ.

ನಗರದಲ್ಲಿ ಈಗಾಗಲೇ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮುಂಗಾರು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ ಮಣ್ಣು ಕುಸಿತ, ಗುಡ್ಡ ಕುಸಿತ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿ ಮತ್ತು ಪ್ರಾಣ ಹಾನಿ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಜಾರಿಗೊಳಿಸಲಾಗಿದೆ.

ಈ ಅವಧಿಯಲ್ಲಿ ಮಣ್ಣು ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮಹಾನಗರಪಾಲಿಕೆ ತಿಳಿಸಿದೆ.

ಈಗಾಗಲೇ ಪರವಾನಿಗೆ ಪಡೆದು ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಿರುವವರು ಕಾಮಗಾರಿ ಪ್ರದೇಶದಲ್ಲಿ ಅಕ್ಕಪಕ್ಕದ ಆಸ್ತಿಗಳಿಗೆ ಹಾನಿಯಾಗದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ವಿಶೇಷವಾಗಿ ಬ್ಯಾಕ್‌ ಫಿಲ್ಲಿಂಗ್‌ ಕಾಮಗಾರಿಯನ್ನು ಕಡ್ಡಾಯವಾಗಿ ಸಮರ್ಪಕವಾಗಿ ನಿರ್ವಹಿಸಿ, ಮಳೆಗಾಲದ ಅಪಾಯಗಳನ್ನು ತಡೆಯಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಸೂಚಿಸಲಾಗಿದೆ.

ಯಾವುದೇ ಅನಾಹುತ ಸಂಭವಿಸಿ ಆಸ್ತಿಪಾಸ್ತಿ ಹಾನಿ ಅಥವಾ ಪ್ರಾಣಹಾನಿ ಉಂಟಾದಲ್ಲಿ ಕಟ್ಟಡ ಮಾಲೀಕರು ಹಾಗೂ ಸಂಬಂಧಪಟ್ಟ ಇಂಜಿನಿಯರ್‌ರನ್ನು ನೇರ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Mangaluru City Corporation has banned road excavation, hill cutting, soil excavation, and soil transportation from June 1 to September 30 due to the onset of monsoon. The move aims to prevent landslides, property damage, and loss of life during heavy rains.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

15 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

19 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

2 days ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

2 days ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

3 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

3 days ago