ಸ್ವಾವಲಂಬನೆಯ ಸಂಭ್ರಮ | ಮಂಗಳೂರಲ್ಲಿ ರಾಷ್ಟ್ರಮಟ್ಟದ ಮಹಿಳಾ ಉತ್ಪನ್ನಗಳ ಬೃಹತ್ ಮೇಳ

February 6, 2026
8:54 PM

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆಯ ಸಹಭಾಗಿತ್ವದಲ್ಲಿ ಮಂಗಳೂರು ನಗರದಲ್ಲಿ ಫೆಬ್ರವರಿ 20 ರಿಂದ 28 ರವರೆಗೆ ಕರಾವಳಿ ಮೈದಾನದಲ್ಲಿ ರಾಷ್ಟ್ರಮಟ್ಟದ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಬೃಹತ್ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳ ‘ನಮ್ಮ ಸರಸ್ ಮೇಳ–2026’ ಆಯೋಜಿಸಲಾಗುತ್ತಿದೆ.

Advertisement

ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಪ್ರತಿದಿನ ಬೆಳಿಗ್ಗೆ 10.30ರಿಂದ ರಾತ್ರಿ 9.30ರವರೆಗೆ ಮೇಳ ವೀಕ್ಷಣೆ ಮತ್ತು ಖರೀದಿಗೆ ಅವಕಾಶ ನೀಡಲಾಗಿದೆ.

ರಾಜ್ಯ ಜೀವನೋಪಾಯ ಅಭಿಯಾನದಡಿ ಗ್ರಾಮೀಣ ಪ್ರದೇಶಗಳಲ್ಲಿ 3.05 ಲಕ್ಷ ಸ್ವ-ಸಹಾಯ ಗುಂಪುಗಳ ಮೂಲಕ 32 ಲಕ್ಷ ಕುಟುಂಬಗಳು, ನಗರ ಜೀವನೋಪಾಯ ಅಭಿಯಾನದಡಿ 39 ಸಾವಿರ ಸ್ವ-ಸಹಾಯ ಗುಂಪುಗಳ ಮೂಲಕ 3.90 ಲಕ್ಷ ಕುಟುಂಬಗಳು ಸಂಘಟಿಸಲ್ಪಟ್ಟಿವೆ. ಸ್ವ-ಸಹಾಯ ಗುಂಪಿನ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಅಗತ್ಯವಾದ ಕೌಶಲ್ಯಾಭಿವೃದ್ಧಿ ತರಬೇತಿ, ಉತ್ಪನ್ನಗಳ ಬ್ರ್ಯಾಂಡಿಂಗ್, ಪ್ಯಾಕಿಂಗ್, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ.

ಸ್ವ-ಸಹಾಯ ಗುಂಪುಗಳ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಹಳ್ಳಿಸಂತೆ, ತಾಲ್ಲೂಕು ಮಟ್ಟದ ಮಾಸಿಕ ಸಂತೆ, ಜಿಲ್ಲಾ ವಸ್ತುಪ್ರದರ್ಶನಗಳ ಜೊತೆಗೆ ಇತರೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಮೇಳಗಳಲ್ಲಿ ಮಹಿಳೆಯರಿಗೆ ಭಾಗವಹಿಸುವ ಅವಕಾಶ ಕಲ್ಪಿಸಲಾಗುತ್ತಿದೆ. ಈ ಬಾರಿ ನಡೆಯುವ ‘ನಮ್ಮ ಸರಸ್ ಮೇಳ–2026’ನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಸ್ವ-ಸಹಾಯ ಗುಂಪಿನ ಮಹಿಳೆಯರು ತಮ್ಮ ಜಿಲ್ಲೆಯ ವಿಶಿಷ್ಟ ಉತ್ಪನ್ನಗಳೊಂದಿಗೆ ಭಾಗವಹಿಸಲಿದ್ದಾರೆ.

ಮೇಳದಲ್ಲಿ 100ಕ್ಕೂ ಹೆಚ್ಚು ಮಳಿಗೆಗಳು ಸ್ಥಾಪನೆಯಾಗಲಿದ್ದು, ಗ್ರಾಮೀಣ ಹಾಗೂ ನಗರ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಚನ್ನಪಟ್ಟಣದ ಮರದ ಗೊಂಬೆಗಳು, ಕಿನ್ನಾಳ ಆಟಿಕೆಗಳು, ಮೊಳಕಾಲ್ಮೂರು ಮತ್ತು ಇಳಕಲ್ ಸೀರೆಗಳು, ರೇಷ್ಮೆ ಸೀರೆಗಳು, ನಾರಿನ ಬ್ಯಾಗ್‌ಗಳು, ಗೃಹಾಲಂಕಾರಿಕ ವಸ್ತುಗಳು, ಮಸಾಲೆ ಪದಾರ್ಥಗಳು, ಸಿರಿಧಾನ್ಯ ಉತ್ಪನ್ನಗಳು, ಮೌಲ್ಯವರ್ಧಿತ ಕರಾವಳಿ ಉತ್ಪನ್ನಗಳು, ಖಾದಿ, ಆಯುರ್ವೇದ, ಪಾರಂಪರಿಕ ಹಾಗೂ ಗೃಹೋಪಯೋಗಿ ವಸ್ತುಗಳು, ನವೀನ ವಿನ್ಯಾಸದ ಆಭರಣಗಳು ಮತ್ತು ಆಹಾರ ಉತ್ಪನ್ನಗಳು ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗಲಿವೆ.

ಸರ್ಕಾರದ ‘ಅಕ್ಕ-ಕೆಫೆ’ ಯೋಜನೆಯಡಿ, ಮೇಳದ ಆವರಣದಲ್ಲಿ ವಿಶೇಷವಾಗಿ ‘ಅಕ್ಕ ಫುಡ್ ಕೋರ್ಟ್’ ಆಯೋಜಿಸಲಾಗಿದ್ದು, ಇಲ್ಲಿ ಗಿರಮಿಟ್, ಚುರುಮರಿ ಮಂಡಕ್ಕಿ, ಜೋಳದ ರೊಟ್ಟಿ, ಹೋಳಿಗೆ, ಬೆಳಗಾವಿ ಕುಂದಾ, ಧಾರವಾಡ ಪೇಡ, ಮೈಸೂರ್‌ಪಾಕ್, ನೀರ್‌ದೋಸೆ, ಖಾರಬಾತ್, ಕಡಬು ಸೇರಿದಂತೆ ವಿವಿಧ ಸಸ್ಯಾಹಾರ ಮತ್ತು ಮಾಂಸಾಹಾರ ತಿನಿಸುಗಳು, ಬಿರಿಯಾನಿ, ಫ್ರೆಶ್ ಜ್ಯೂಸ್ ಹಾಗೂ ಹೊರರಾಜ್ಯದ ತಿನಿಸುಗಳು ಸ್ಥಳದಲ್ಲೇ ತಯಾರಾಗಿ ಲಭ್ಯವಾಗಲಿವೆ.

ಮೇಳದ ಆವರಣದಲ್ಲಿ ಪ್ರತಿದಿನ ಸಂಜೆ 6.30ರಿಂದ 9ರವರೆಗೆ ಕನ್ನಡ ಮತ್ತು ಸಂಸ್ಕೃತಿಕ ಇಲಾಖೆಯ ಸಹಯೋಗದಲ್ಲಿ ಸಂಗೀತ, ನೃತ್ಯ ಹಾಗೂ ರಾಜ್ಯದ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಜೊತೆಗೆ, ಮಹಿಳೆಯರು ಉದ್ಯಮ ಚಟುವಟಿಕೆ ಆರಂಭಿಸಲು ಸಹಕಾರಿಯಾಗುವ ತರಬೇತಿ ಹಾಗೂ ಉಪನ್ಯಾಸಗಳು ಪ್ರತಿದಿನ ಬೆಳಿಗ್ಗೆ 11.30ರಿಂದ 1.30ರವರೆಗೆ ಆಯೋಜಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಂಗಳೂರಿನಲ್ಲಿ ಮೊದಲ ಬಾರಿಗೆ ಈ ಮಟ್ಟದಲ್ಲಿ ಆಯೋಜಿಸಲಾಗುತ್ತಿರುವ ‘ನಮ್ಮ ಸರಸ್ ಮೇಳ–2026’ ಮೂಲಕ ನಗರ ಹಾಗೂ ಗ್ರಾಮೀಣ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ಸಿಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಮೇಳಕ್ಕೆ ಭೇಟಿ ನೀಡಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಕೈಜೋಡಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

ಇದನ್ನೂ ಓದಿ…

AI ಮೂಲಕ ಹವಾಮಾನ ಅಪಾಯ ಮುನ್ಸೂಚನೆ | ಸಾರ್ವಜನಿಕ ಸಂಸ್ಥೆಗಳಲ್ಲಿ ಅಳವಡಿಕೆ ಯೋಜನೆ

ನಿಮ್ಮ ಅಭಿಪ್ರಾಯಗಳಿಗೆ…

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್
ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ
April 21, 2026
7:24 AM
by: ಮಿರರ್‌ ಡೆಸ್ಕ್
ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ
April 21, 2026
7:21 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror