ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಒಟ್ಟು 222 ವಾಹನ ಸವಾರರ ಚಾಲನಾ ಪರವಾನಗಿಯನ್ನು ಅಮಾನತುಪಡಿಸುವಂತೆ ಮಂಗಳೂರು ನಗರ ಪೊಲೀಸರು ಸಂಬಂಧಿಸಿದ ಆರ್ ಟಿಒಗಳಿಗೆ ಶಿಫಾರಸು ಮಾಡಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಸಂಚಾರ ಉಪ ವಿಭಾಗದ ಅಧೀನ ಠಾಣಾ ವ್ಯಾಪ್ತಿಯ ರಸ್ತೆಗಳಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷತದಿಂದ ಚಾಲನೆ ಹಾಗೂ ಸಂಚಾರ ನಿಯಮ ಪಾಲನೆ ಮಾಡದಿರುವ ಸವಾರರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಹಾಗಿದ್ದರೂ ನಿಯಮ ಉಲ್ಲಂಘನೆ ಮಾಡಿದ ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.
The Mangalore city police has requested the RTO to cancel 222 drivers licenses under various instances of traffic rule violations. #Mangalore pic.twitter.com/khTl7qUIqx
— theruralmirror (@ruralmirror) July 27, 2023
Advertisement
ಜುಲೈ 13 ರಿಂದ 26ರವರೆಗೂ ಅತಿ ವೇಗದ, ನಿರ್ಲಕ್ಷ್ಯದ ಚಾಲನೆಗಾಗಿ 113 ಸೇರಿದಂತೆ ಒಟ್ಟಾರೇ 222 ಚಾಲಕರ ಚಾಲನಾ ಪರವಾನಗಿ ಅಮಾನತುಗೊಳಿಸುವಂತೆ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನಗರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅವುಗಳಲ್ಲಿ, 113 ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಪ್ರಕರಣಗಳು, ಒಂದು ಪಾನಮತ್ತ ಚಾಲನೆ ಪ್ರಕರಣ, ಪ್ರಯಾಣಿಕರನ್ನು ಸಾಗಿಸುವ 16 ಸರಕು ವಾಹನ, ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ 4, ಸಿಗ್ನಲ್ ಜಂಪಿಂಗ್ ಪ್ರಕರಣಗಳು 5, 4 ವಾಣಿಜ್ಯ ವಾಹನಗಳಲ್ಲಿ ಪ್ರಯಾಣಿಕರನ್ನು ಹೆಚ್ಚು ಲೋಡ್ ಮಾಡಿದ ಪ್ರಕರಣಗಳನ್ನು ರದ್ದುಗೊಳಿಸಲಾಗಿದೆ. 3 ಟ್ರಿಪಲ್ ರೈಡಿಂಗ್ ಪ್ರಕರಣಗಳು, 59 ಹೆಲ್ಮೆಟ್ ಇಲ್ಲದೆ ಸವಾರಿ ಮತ್ತು 17 ಸೀಟ್ ಬೆಲ್ಟ್ ಇಲ್ಲದೆ ವಾಹನ ಚಲಾಯಿಸಿದ ಪ್ರಕರಣಗಳು, ಎಂದು ಪೊಲೀಸರು ತಿಳಿಸಿದ್ದಾರೆ.