ಉದ್ಯೋಗ ಅರಸುತ್ತಿರುವ ಯುವಕರಿಗೆ ಮತ್ತೊಂದು ಉತ್ತಮ ಅವಕಾಶ ಲಭ್ಯವಾಗಿದೆ. ಕೋಟಕ್ ಮಹೀಂದ್ರಾ ಬ್ಯಾಂಕ್, ಗೋಲ್ಡನ್ ವಿಂಗ್ಸ್ ಲಿಫ್ಟ್ ಅಂಡ್ ಎಲಿವೇಟರ್ಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಸಂಭವ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಜುಲೈ 14ರಂದು ನೇರ ಸಂದರ್ಶನ (Walk-in Interview) ಆಯೋಜಿಸಲಾಗಿದೆ.
ಸಂದರ್ಶನವು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮಂಗಳೂರಿನ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ.
ನೇಮಕಾತಿ ನಡೆಯಲಿರುವ ಹುದ್ದೆಗಳಲ್ಲಿ ಅಸಿಸ್ಟಂಟ್ ಮ್ಯಾನೇಜರ್, ಹೆಚ್.ಆರ್. ಮತ್ತು ಟೆಲಿಕಾಲಿಂಗ್, ಸೇಲ್ಸ್ ಎಕ್ಸಿಕ್ಯೂಟಿವ್, ಲಿಫ್ಟ್ ಟೆಕ್ನಿಷಿಯನ್, ಇ.ವಿ. ಎಲೆಕ್ಟ್ರಿಷಿಯನ್, ಎಲೆಕ್ಟ್ರಿಷಿಯನ್, ಸಿಎನ್‌ಸಿ ಆಪರೇಟರ್ ಹಾಗೂ ಹೆಲ್ಪರ್ ಹುದ್ದೆಗಳು ಸೇರಿವೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಯಾವುದೇ ಪದವಿ, ಐಟಿಐ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ಬಯೋಡೇಟಾ (Resume) ಜೊತೆಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಂಗಳೂರು ಹಾಗೂ ಬೆಂಗಳೂರು ನಗರಗಳಲ್ಲಿ ಉದ್ಯೋಗದ ಅವಕಾಶವಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
A walk-in interview for multiple vacancies including Assistant Manager, HR & Telecalling, Sales Executive, Lift Technician, EV Electrician, Electrician, CNC Operator and Helper will be held on July 14 at the District Employment Exchange Office, Padil, Mangaluru. Candidates with SSLC, PUC, Degree, ITI or Diploma qualifications can attend with their resume. Job locations are Mangaluru and Bengaluru.

