Advertisement
ಸುದ್ದಿಗಳು

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

Share

ಉದ್ಯೋಗ ಅರಸುತ್ತಿರುವ ಯುವಕರಿಗೆ ಮತ್ತೊಂದು ಉತ್ತಮ ಅವಕಾಶ ಲಭ್ಯವಾಗಿದೆ. ಕೋಟಕ್ ಮಹೀಂದ್ರಾ ಬ್ಯಾಂಕ್, ಗೋಲ್ಡನ್ ವಿಂಗ್ಸ್ ಲಿಫ್ಟ್ ಅಂಡ್ ಎಲಿವೇಟರ್ಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಸಂಭವ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಜುಲೈ 14ರಂದು ನೇರ ಸಂದರ್ಶನ (Walk-in Interview) ಆಯೋಜಿಸಲಾಗಿದೆ.

ಸಂದರ್ಶನವು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮಂಗಳೂರಿನ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ.

ನೇಮಕಾತಿ ನಡೆಯಲಿರುವ ಹುದ್ದೆಗಳಲ್ಲಿ ಅಸಿಸ್ಟಂಟ್ ಮ್ಯಾನೇಜರ್, ಹೆಚ್.ಆರ್. ಮತ್ತು ಟೆಲಿಕಾಲಿಂಗ್, ಸೇಲ್ಸ್ ಎಕ್ಸಿಕ್ಯೂಟಿವ್, ಲಿಫ್ಟ್ ಟೆಕ್ನಿಷಿಯನ್, ಇ.ವಿ. ಎಲೆಕ್ಟ್ರಿಷಿಯನ್, ಎಲೆಕ್ಟ್ರಿಷಿಯನ್, ಸಿಎನ್‌ಸಿ ಆಪರೇಟರ್ ಹಾಗೂ ಹೆಲ್ಪರ್ ಹುದ್ದೆಗಳು ಸೇರಿವೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಯಾವುದೇ ಪದವಿ, ಐಟಿಐ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ಬಯೋಡೇಟಾ (Resume) ಜೊತೆಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಂಗಳೂರು ಹಾಗೂ ಬೆಂಗಳೂರು ನಗರಗಳಲ್ಲಿ ಉದ್ಯೋಗದ ಅವಕಾಶವಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

A walk-in interview for multiple vacancies including Assistant Manager, HR & Telecalling, Sales Executive, Lift Technician, EV Electrician, Electrician, CNC Operator and Helper will be held on July 14 at the District Employment Exchange Office, Padil, Mangaluru. Candidates with SSLC, PUC, Degree, ITI or Diploma qualifications can attend with their resume. Job locations are Mangaluru and Bengaluru.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?

ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…

10 minutes ago

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

13 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

21 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

22 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

23 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

1 day ago