ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವಿದೆ. ಸಹಯೋಗ್ ಮಲ್ಟಿಸ್ಟೇಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ವತಿಯಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ನವೆಂಬರ್ 23ರಂದು ನೇರ ಸಂದರ್ಶನ ಆಯೋಜಿಸಲಾಗಿದೆ.
ಬ್ರಾಂಚ್ ಆಪರೇಷನ್ ಮ್ಯಾನೇಜರ್, ಬ್ಲಾಕ್ ಡೆವಲಪ್‌ಮೆಂಟ್ ಆಫೀಸರ್ ಹಾಗೂ ಬಿಸಿನೆಸ್ ಡೆವಲಪ್‌ಮೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಮಂಗಳೂರಿನ ಜ್ಯೋತಿ ಪ್ರದೇಶದಲ್ಲಿರುವ ಕೆ.ಎಂ.ಸಿ. ಆಸ್ಪತ್ರೆ ಸಮೀಪದ ಸೌಜಾ ಆರ್ಕೇಡ್‌ನಲ್ಲಿರುವ ಸಹಯೋಗ್ ಮಲ್ಟಿಸ್ಟೇಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ನವೆಂಬರ್ 23ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಸಂದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಪಿಯುಸಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Sahyog Multi-State Credit Co-operative Society Ltd. is conducting a walk-in interview in Mangaluru on November 23, 2026, to recruit candidates for three positions: Branch Operations Manager, Block Development Officer and Business Development Executive. Candidates with PUC or any degree qualification can attend the interview with their biodata between 10 AM and 1:30 PM at the society’s office in Souza Arcade, near KMC Hospital, Jyothi, Mangaluru. For further details, candidates can contact the District Employment Exchange, Mangaluru.


