ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ಶೀಘ್ರದಲ್ಲೇ ರಾಜ್ಯದಲ್ಲಿ ಮಾವು-ಪಿಕ್ಕಿಂಗ್ ಪ್ರವಾಸೋದ್ಯಮಕ್ಕೆ ನೋಂದಣಿ ಪ್ರಾರಂಭಿಸಲಿದೆ. ಕೆಎಸ್‌ಎಂಡಿಎಂಸಿಎಲ್ ಕಳೆದ ಕೆಲವು ವರ್ಷಗಳಿಂದ ರಾಜ್ಯದಲ್ಲಿ ಮಾವು ಪಿಕ್ಕಿಂಗ್ ಟೂರಿಸಂ ಅನ್ನು ಆಯೋಜಿಸುತ್ತಿದ್ದು, ಮಕ್ಕಳು ಮತ್ತು ಹಿರಿಯ ನಾಗರಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿಗಮದ ವೆಬ್‌ಸೈಟ್‌ನಲ್ಲಿ ಮಾವು ಪಿಕ್ಕಿಂಗ್ ಪ್ರವಾಸೋದ್ಯಮಕ್ಕೆ ನೋಂದಣಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಮುಂದಿನ ದಿನಗಳಲ್ಲಿ ಪ್ರವಾಸಗಳನ್ನು ಹೆಚ್ಚು ಜನಪ್ರಿಯಗೊಳಿಸುವ ಪ್ರಕ್ರಿಯೆಯಲ್ಲಿ ನಿಗಮವು ತೊಡಗಿದೆ. ಈ ಯೋಜನೆ ರೈತರಿಗೆ ನೆರವಾಗಲಿದೆ. ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳುವ ಜನರು ಮಾವಿನ ತೋಟಗಳಲ್ಲಿ ತಾಜಾ ಹಣ್ಣುಗಳನ್ನು ಕಿತ್ತು ತಿನ್ನುತ್ತಾರೆ ಮತ್ತು ಸ್ಥಳೀಯ ಪಾಕಪದ್ಧತಿಗಳನ್ನು ಸವಿಯಲು ಅವಕಾಶ ಇರುತ್ತದೆ. ಪ್ರವಾಸದ ವೇಳೆ ಮಾರುಕಟ್ಟೆಯಲ್ಲಿ ಮಾರಾಟವಾಗುವ ದರಕ್ಕಿಂತ ಕಡಿಮೆ ಬೆಲೆಗೆ ರೈತರು ಹಣ್ಣುಗಳನ್ನು ಮಾರಾಟ ಮಾಡುತ್ತಾರೆ.
ಬೆಂಗಳೂರಿನಿಂದ ರಾಮನಗರ ಅಥವಾ ಕೋಲಾರ ಜಿಲ್ಲೆಗಳ ಮಾವಿನ ತೋಟಗಳಿಗೆ ನಿಗಮವು ಸದ್ಯ ಜನರನ್ನು ಕರೆದೊಯ್ಯುವ ಮೂಲಕ ಭಾನುವಾರದಂದು ತೋಟಗಳಿಗೆ ಮಾವು ಪ್ರವಾಸ ನಡೆಯಲಿದೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…