Advertisement
ಸುದ್ದಿಗಳು

ಕೋಲಾರದ 54 ಸಾವಿರ ಹೆಕ್ಟೇರ್‌ನಲ್ಲಿ ಮಾವು ಬೆಳೆ | ಈ ಬಾರಿ ಮಾವು ಬೆಳೆ ಧಾರಣೆ ತೀವ್ರ ಕುಸಿತ

Share

ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ ಜಿಲ್ಲೆಯಲ್ಲಿ 54 ಸಾವಿರ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಈ ಪೈಕಿ ಶ್ರೀನಿವಾಸಪುರ ತಾಲೂಕಿನಲ್ಲೇ 48 ಸಾವಿರ ಹೆಕ್ಟೇರ್ ನಲ್ಲಿ ಮಾವು ಕೃಷಿ ನಡೆಯುತ್ತದೆ. ಅಂತರ್ಜಲ ಮಟ್ಟ ಪಾತಾಳಕ್ಕೆ ಕುಸಿದಿದ್ದು ಜಲಕ್ಷಾಮ ಎದುರಾಗಿದ್ದರೂ ರೈತರು ಮಾವು ಬೆಳೆದು ಯಶಸ್ವಿಯಾಗಿದ್ದರು.ಆದರೆ, ಈ ಬಾರಿ ಮಾರುಕಟ್ಟೆಯಲ್ಲಿ ಮಾವು ಬೆಳೆಯ ಧಾರಣೆ ತೀವ್ರ ಕುಸಿದಿದ್ದು ರೈತರು ಸಂಕಷ್ಟ ಎದುರಿಸುವಂತಾಗಿದೆ.

ಈ ಹಿನ್ನೆಲೆಯಲ್ಲಿ ಮಾವು ಬೆಳೆಗೆ ಮಾವು ಬೆಳೆಗೆ ಬೆಂಬಲ ಬೆಲೆಗೆ ರೈತರು ಒತ್ತಾಯಿಸುತ್ತಿದ್ದಾರೆ.  ಈ ಬಾರಿ ಉತ್ತಮ ಪಸಲು ಇದ್ದರೂ ಸರಿಯಾದ ಬೆಲೆ ಇಲ್ಲದ ಕಾರಣ ಸಂಕಷ್ಟ ಎದುರಾಗಿದೆ. ಸೂಕ್ತ ಬೆಲೆ ಇಲ್ಲದಿರುವುದರಿಂದ ಮಾವು ಕೊಯ್ಲು ನಿಲ್ಲಿಸಿದ್ದೇವೆ ಎಂದು ಮಾವು ಬೆಳೆಗಾರ ಹೇಮಂತ್ ಹೇಳುತ್ತಾರೆ. ಮಾವು ಬೆಳೆಗೆ ಬೆಂಬಲ ಬೆಲೆ ನಿಗದಿ ಪಡಿಸಿ ಕೇಂದ್ರ ಸರ್ಕಾರ ರೈತರ ಪರವಾಗಿ ನಿಂತಿರುವುದು ಈ ಸಂಕಷ್ಟದ ಸಮಯದಲ್ಲಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ ಎನ್ನುತ್ತಾರೆ ರೈತ ರೈತ ರಾಮಚಂದ್ರಗೌಡ.

ಇದೇ ವೇಳೆ ಈ ಬಾರಿ ಮಾವಿನ ಬೆಲೆ ತೀವ್ರವಾಗಿ ಕುಸಿದಿರುವುದರಿಂದ ಉತ್ತಮ ಬೆಲೆ ಸಿಗದೆ ಬೆಳೆಗಾರರು ಮಾವು ಕೊಯ್ಲು ನಿಲ್ಲಿಸಿದ್ದಾರೆ. ಇದರಿಂದ ಕೂಲಿ ಕೆಲಸ ಸಿಗದೆ ತೊಂದರೆಯಾಗಿದೆ ಎನ್ನುತ್ತಾರೆ ಕಾರ್ಮಿಕ ರಮೇಶ್.

ಈ ಎಲ್ಲಾ ಸಂಕಷ್ಟದ ನಡುವೆ, ಕೇಂದ್ರ ಸರ್ಕಾರ ಮಾರುಕಟ್ಟೆ ಹಸ್ತಕ್ಷೇಪ ಯೋಜನೆ – ಎಂಐಎಸ್ ಅಡಿಯಲ್ಲಿ ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ನೀಡುತ್ತಿದೆ. 2025-26ನೇ ಮಾರುಕಟ್ಟೆ ವರ್ಷಕ್ಕೆ ಕ್ವಿಂಟಲ್ ಗೆ 1 ಸಾವಿರದ ಆರು ನೂರ ಹದಿನಾರು ರೂಪಾಯಿಗಳ ಬೆಂಬಲ ಬೆಲೆಯಲ್ಲಿ ಗರಿಷ್ಠ 2,50.000 ಮೆಟ್ರಿಕ್ ಟನ್ಗಳಷ್ಟು ಮಾವು ಖರೀದಿಸಲು ನಿರ್ಧರಿಸಲಾಗಿದೆ  ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

6 minutes ago

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…

13 minutes ago

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

15 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

15 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

15 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

16 hours ago