ಕೋಲಾರದಲ್ಲಿ ಮಾವು ಬೆಲೆ ಕುಸಿತ | 15,000 ಬೆಂಬಲ ಬೆಲೆ ಘೋಷಿಸುವಂತೆ ಬೆಳೆಗಾರರ ಆಗ್ರಹ

June 17, 2025
9:36 PM

ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರಕಾರ ಕೂಡಲೇ ಪ್ರತಿಟನ್‌ಗೆ 15 ಸಾವಿರ ರೂಪಾಯಿ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಇಂದಿನಿಂದಲೇ ಹೋರಾಟ ನಡೆಸಲಾಗುವುದು ಎಂದು ಮಾವು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಜನಪ್ರತಿನಿಧಿಗಳು ಮಾವು ಬೆಳೆಗಾರರ ಸಮಸ್ಯೆಗೆ ಆಸಕ್ತಿ ತೋರಿಲ್ಲ ಎಂದು ದೂರಿದ್ದಾರೆ.  ಆಂಧ್ರ ಪ್ರದೇಶದಲ್ಲಿ ತಕ್ಷಣ ಬೆಂಬಲ ಬೆಲೆ ಘೋಷಣೆಯಾಗಿದೆ. ಕೂಡಲೇ ಆಂಧ್ರ ಪ್ರದೇಶ ಸರಕಾರದ ಮಾದರಿ ಮಾವು ಬೆಳೆಗಾರರಿಗೆ ಬೆಂಬಲ ಬೆಲೆಯನ್ನು ಘೋಷಿಸುವ ಮೂಲಕ ರಾಜ್ಯ ಸರಕಾರ ರೈತರ ಪರವಾಗಿ ನಿಲ್ಲಬೇಕೆಂದು ಆಗ್ರಹಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror