ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿ | ಬರ್ಮಾ ಅಡಿಕೆ ಕಳ್ಳಸಾಗಾಟವೂ ಜೋರು..!

October 28, 2025
7:25 AM

ಅಡಿಕೆ ನಾಡಿನಲ್ಲಿ ಅಡಿಕೆ ಧಾರಣೆ ಏರಿಕೆಯ ಸಿಹಿ ಸುದ್ದಿಯ ಜೊತೆಗೇ ಈಗ ಬರ್ಮಾ ಅಡಿಕೆ ವ್ಯಾಪಕವಾಗಿ ಕಳ್ಳಸಾಗಾಣಿಕೆಗೆ ಪ್ರಯತ್ನ ನಡೆಯುತ್ತಿದೆ. ಇಲಾಖೆಗಳು ಕಟ್ಟುನಿಟ್ಟಿನ ಕ್ರಮಗಳನ್ನು ಈಗಾಗಲೇ ಕೈಗೊಂಡಿದ್ದಾರೆ. ಇದೀಗ ಮತ್ತೊಂದು ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ  ಬೆಳಕಿಗೆ ಬಂದಿದೆ.  ಮಣಿಪುರ ಪೊಲೀಸರ ಸಹಯೋಗದೊಂದಿಗೆ ಇಂಫಾಲದ ಕಸ್ಟಮ್ಸ್ ವಿಭಾಗವು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಪತ್ತೆಯಾಗಿದೆ. ಸುಮಾರು 8 ಸಾವಿರ ಕೆಜಿ ಬರ್ಮಾ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ತಪ್ಪಾದ ಮಾಹಿತಿ ನೀಡಿ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿತ್ತು.  ಮ್ಯಾನ್ಮಾರ್‌ನಿಂದ ಅಡಿಕೆಯನ್ನು ಮಣಿಪುರಕ್ಕೆ ಕಳ್ಳಸಾಗಣೆ ಮಾಡಲಾಗಿತ್ತು ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಅಸ್ಸಾಂ, ಮೇಘಾಲಯ ಸೇರಿದಂತೆ ವಿವಿದಡೆಯಿಂದ ಸಣ್ಣ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ ನಡೆಯುತ್ತಿದೆ. ಆದರೆ, ಇಲಾಖೆಗಳು ತಪಾಸಣೆ ಬಿಗುಗೊಳಿಸಿದ ಹಿನ್ನೆಲೆಯಲ್ಲಿ ಅಕ್ರಮ ಸಾಗಾಟಕ್ಕೆ ತಡೆಯಾಗುತ್ತಿದೆ.

ಈ ನಡುವೆಯೇ ಅಡಿಕೆ ಧಾರಣೆ ಏರಿಕೆಯಾಗುತ್ತಿದೆ. ಬೇಡಿಕೆ ಹೆಚ್ಚಾಗುತ್ತಿದೆ. ಪೂರೈಕೆ ಕಡಿಮೆಯಾಗುತ್ತಿದ್ದಂತೆಯೇ ಧಾರಣೆ ಏರಿಕೆಯಾಗುತ್ತಿದೆ, ಈ ಸಂದರ್ಭ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಕೂಡಾ ಜೋರಾಗಿ ನಡೆಯುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಯ ವೈಜ್ಞಾನಿಕ ವರ್ಗೀಕರಣ, ಸಂಶೋಧನಾ ಮಿತಿಗಳು ಮತ್ತು ಪುನರ್‌ಪರಿಶೀಲನೆಯ ಅಗತ್ಯ
January 7, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಅರಿಶಿನ ಕೃಷಿಯಲ್ಲಿ ಯಶಸ್ಸು ಗಳಿಸಿದ ಮಹಿಳೆ – ಮಿಶ್ರ ಬೆಳೆಗೆ ಇವರು ಮಾದರಿ..!
January 7, 2026
6:53 AM
by: ರೂರಲ್‌ ಮಿರರ್ ಸುದ್ದಿಜಾಲ
ಕಡಲೆ ಬೀಜ ತಿನ್ನುವಾಗ ಈ ಅಂಶವನ್ನು ನೆನಪಿನಲ್ಲಿಟ್ಟುಕೊಳ್ಳಿ..!
January 6, 2026
10:41 PM
by: ರೂರಲ್‌ ಮಿರರ್ ಸುದ್ದಿಜಾಲ
ವಿಕಲಚೇತನರಿಗೆ ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳು
January 6, 2026
10:12 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror