ಅಡಿಕೆ ನಾಡಿನಲ್ಲಿ ಅಡಿಕೆ ಧಾರಣೆ ಏರಿಕೆಯ ಸಿಹಿ ಸುದ್ದಿಯ ಜೊತೆಗೇ ಈಗ ಬರ್ಮಾ ಅಡಿಕೆ ವ್ಯಾಪಕವಾಗಿ ಕಳ್ಳಸಾಗಾಣಿಕೆಗೆ ಪ್ರಯತ್ನ ನಡೆಯುತ್ತಿದೆ. ಇಲಾಖೆಗಳು ಕಟ್ಟುನಿಟ್ಟಿನ ಕ್ರಮಗಳನ್ನು ಈಗಾಗಲೇ ಕೈಗೊಂಡಿದ್ದಾರೆ. ಇದೀಗ ಮತ್ತೊಂದು ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ ಬೆಳಕಿಗೆ ಬಂದಿದೆ. ಮಣಿಪುರ ಪೊಲೀಸರ ಸಹಯೋಗದೊಂದಿಗೆ ಇಂಫಾಲದ ಕಸ್ಟಮ್ಸ್ ವಿಭಾಗವು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಪತ್ತೆಯಾಗಿದೆ. ಸುಮಾರು 8 ಸಾವಿರ ಕೆಜಿ ಬರ್ಮಾ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ತಪ್ಪಾದ ಮಾಹಿತಿ ನೀಡಿ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿತ್ತು. ಮ್ಯಾನ್ಮಾರ್‌ನಿಂದ ಅಡಿಕೆಯನ್ನು ಮಣಿಪುರಕ್ಕೆ ಕಳ್ಳಸಾಗಣೆ ಮಾಡಲಾಗಿತ್ತು ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಅಸ್ಸಾಂ, ಮೇಘಾಲಯ ಸೇರಿದಂತೆ ವಿವಿದಡೆಯಿಂದ ಸಣ್ಣ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ ನಡೆಯುತ್ತಿದೆ. ಆದರೆ, ಇಲಾಖೆಗಳು ತಪಾಸಣೆ ಬಿಗುಗೊಳಿಸಿದ ಹಿನ್ನೆಲೆಯಲ್ಲಿ ಅಕ್ರಮ ಸಾಗಾಟಕ್ಕೆ ತಡೆಯಾಗುತ್ತಿದೆ.
ಈ ನಡುವೆಯೇ ಅಡಿಕೆ ಧಾರಣೆ ಏರಿಕೆಯಾಗುತ್ತಿದೆ. ಬೇಡಿಕೆ ಹೆಚ್ಚಾಗುತ್ತಿದೆ. ಪೂರೈಕೆ ಕಡಿಮೆಯಾಗುತ್ತಿದ್ದಂತೆಯೇ ಧಾರಣೆ ಏರಿಕೆಯಾಗುತ್ತಿದೆ, ಈ ಸಂದರ್ಭ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಕೂಡಾ ಜೋರಾಗಿ ನಡೆಯುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…