Mann Ki Baat | ದೇಶದ 130 ಕೋಟಿ ಜನರಿಗೂ ಕೃತಜ್ಞತೆ | ಕೊರೊನಾ ವೈರಸ್ ಓಡಿಸಲು ಪ್ರತಿಯೊಬ್ಬನೂ ಸೈನಿಕ | ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ |

April 26, 2020
11:50 AM

ನವದೆಹಲಿ:ಕೊರೊನಾ ವೈರಸ್ ವಿರುದ್ಧದ ದೇಶದ ಹೋರಾಟದಲ್ಲಿ ಪ್ರತಿಯೊಬ್ಬ ನಾಗರಿಕನೂ ಸೈನಿಕನೇ ಆಗಿದ್ದಾನೆ. ಇದುವರೆಗೆ ದೇಶದ ಎಲ್ಲರೂ ಸಹಕರಿಸಿದ್ದಾರೆ. ಇದಕ್ಕಾಗಿ ದೇಶದ 130 ಕೋಟಿ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದೆಯೂ  ತಮ್ಮ ಜಿಲ್ಲೆ, ತಾಲೂಕು, ಗ್ರಾಮಗಳಲ್ಲಿ ಕೊರೊನಾ ವೈರಸ್ ವಿರುದ್ಧದ  ಹೋರಾಟ ಮುಂದುವರಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

Advertisement
Advertisement
Advertisement
Advertisement

ಪ್ರಧಾನಿ ನರೇಂದ್ರ ಮೋದಿ ಅವರು 64ನೇ ಮನ್​ ಕಿ ಬಾತ್​ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರೊನಾ ವಿರುದ್ಧ ದೇಶದ ಹೋರಾಟವು  ಭಾರತದಲ್ಲಿ ಸರಿಯಾದ ದಿಕ್ಕಿನಲ್ಲಿ ಸಾಗಿದೆ. ಬಡತನದ ವಿರುದ್ಧ ಹೋರಾಡುತ್ತಲೇ ನಾವು ಮಾರಕ ರೋಗದ ವಿರುದ್ಧವೂ ಹೋರಾಟ ನಡೆಸುತ್ತಿದ್ದೇವೆ ಎಂದ ಅವರು ದೇಶದಲ್ಲಿನ ಯಾವ ಜನರು ಸಹ ಹಸಿವಿನಿಂದ ಬಳಲಬಾರದು ಎಂದು ರೈತರು ಹೊಲಗಳಲ್ಲಿ ಹಗಲು-ರಾತ್ರಿ ಕಷ್ಟಪಡುತ್ತಿದ್ದಾರೆ, ರೈಲ್ವೆ, ವಿಮಾನ ಸಂಸ್ಥೆಗಳು ಔಷಧಗಳನ್ನು ದೇಶದ ಮೂಲೆ ಮೂಲೆಗೆ ತಲುಪಿಸುವ ಕೆಲಸ ಮಾಡುತ್ತಿವೆ ಇದು ನಮ್ಮೆಲ್ಲರಿಗಾಗಿ ಎಂದರು.

Advertisement

ಇಂದು ವಿವಿಧ ದೇಶಗಳ ರಾಜಕೀಯ ನಾಯಕರೊಡನೆ ಮಾತುಕತೆ ನಡೆಸುವಾಗ ಭಾರತಕ್ಕೆ ವಂದನೆ ಸಲ್ಲಿಸುತ್ತಾರೆ. ಭಾರತೀಯರಿಗೆ ಅಭಿನಂದನೆ ಸಲ್ಲಿಸುತ್ತಾರೆ ಆಗ ನಮಗೆ ಹೆಮ್ಮೆ ಆಗುತ್ತದೆ ಎಂದು ಮೋದಿ ಹೇಳಿದರು. ಇದು ದೇಶದ ಎಲ್ಲಾ ಜನರ ಪ್ರಯತ್ನದಿಂದ ಸಾಧ್ಯವಾಗಿದೆ ಎಂದರು.

ಲಾಕ್ಡೌನ್​ ಸಮಯದಲ್ಲಿ ಚಪ್ಪಾಳೆ ತಟ್ಟವಂತೆ ಹಾಗೂ ದೀಪ ಬೆಳಗುವಂತೆ   ಹೇಳಲಾಗಿತ್ತು, ಜನರು ಇದನ್ನು  ಪಾಲಿಸಿದ್ದರು.  ಈ ರೀತಿಯ ಆಂದೋಲನಗಳು ಪ್ರತಿಯೊಬ್ಬರಲ್ಲೂ ಸ್ಫೂರ್ತಿ ತುಂಬಿವೆ ಎಂದರು. ಕೊರೊನಾ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ರನ್ನುಕೇಂದ್ರ ಸರಕಾರದ ಪೋರ್ಟಲ್ ಮೂಲಕ ಸಂಪರ್ಕಿಸುವಂತೆ ಸೂಚಿಸಿದರು.  ಇತ್ತೀಚೆಗೆ ಆರಂಭಗೊಂಡ ಈ ಪೋರ್ಟಲ್ ನಲ್ಲಿ ಈಗಾಗಲೇ 1.25 ಕೋಟಿ ಜನರು ಸಂಪರ್ಕ ಹೊಂದಿದ್ದಾರೆ ಎಂದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror